ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎರಡು ತಿಂಗಳಲ್ಲಿ 466 ಪಶುವೈದ್ಯರ ನೇಮಕ: ವೆಂಕಟರಾವ್ ನಾಡಗೌಡ

|
Google Oneindia Kannada News

ಬೆಳಗಾವಿ, ಡಿಸೆಂಬರ್ 14: ಮುಂದಿನ ಎರಡು ತಿಂಗಳೊಳಗಾಗಿ ರಾಜ್ಯದ ಪಶು ಸಂಗೋಪನಾ ಮತ್ತು ಪಶು ವೈದ್ಯ ಇಲಾಖೆಯಲ್ಲಿ ಖಾಲಿ ಇರುವ 466 ಪಶು ವೈದ್ಯರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುವುದು ಎಂದು ಪಶು ಸಂಗೋಪನಾ ಹಾಗೂ ಮೀನುಗಾರಿಕಾ ಸಚಿವ ವೆಂಕಟರಾವ್ ನಾಡಗೌಡ ಶುಕ್ರವಾರ ಸದನಕ್ಕೆ ತಿಳಿಸಿದರು.

ಪ್ರಶ್ನೋತ್ತರ ವೇಳೆಯಲ್ಲಿ ಸದಸ್ಯ ವಿ. ಸುನೀಲ್ ಕುಮಾರ್ ಪ್ರಶ್ನೆಗೆ ಉತ್ತರಿಸಿದ ಸಚಿವರು, ನೇರ ನೇಮಕಾತಿ ಮೂಲಕ ಖಾಲಿ ಇರುವ ಹುದ್ದೆಗಳ ಭರ್ತಿಗೆ ಅನುಮತಿ ಕೋರಿ ಈಗಾಗಲೇ ಸಿಬ್ಬಂದಿ ಹಾಗೂ ಆಡಳಿತ ಸುಧಾರಣೆ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮುಂದಿನ ಎರಡು ತಿಂಗಳ ಒಳಗಾಗಿ ನೇರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸಿ 466 ಪಶು ವೈದ್ಯರ ನೇಮಕಾತಿ ಮಾಡಿಕೊಳ್ಳಲಾಗುವುದು ಎಂದು ತಿಳಿಸಿದರು.

ಅಡಿಕೆ ಬೆಳೆಯ ಕೊಳೆ ರೋಗ ಪರಿಹಾರ ಕ್ರಮಕ್ಕೆ ಪ್ರತ್ಯೇಕ ಸಭೆ ಅಡಿಕೆ ಬೆಳೆಯ ಕೊಳೆ ರೋಗ ಪರಿಹಾರ ಕ್ರಮಕ್ಕೆ ಪ್ರತ್ಯೇಕ ಸಭೆ

ಇಲಾಖೆಯಲ್ಲಿ ಖಾಲಿ ಇರುವ ಸಹಾಯಕ ನಿರ್ದೇಶಕರ ಹುದ್ದೆಗಳನ್ನು ಬಡ್ತಿ ಮೂಲಕ ನೇಮಕ ಮಾಡಿಕೊಳ್ಳಬೇಕಾಗಿದೆ. ಪಶು ವೈದ್ಯಾಧಿಕಾರಿಗಳಿಂದ ಸಹಾಯಕ ನಿರ್ದೇಶಕರ ಹುದ್ದೆಗೆ ಬಡ್ತಿ ನೀಡುವ ಪ್ರಕ್ರಿಯೆ ವಿರುದ್ಧ ಬಿ. ಕೆ. ಪವಿತ್ರ ಅವರು ಸುಪ್ರೀಂ ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿರುವ ಹಿನ್ನೆಲೆಯಲ್ಲಿ ಪಶು ವೈದ್ಯಾಧಿಕಾರಿಗಳಿಗೆ ಬಡ್ತಿ ನೀಡಲು ಸಾಧ್ಯವಾಗಿಲ್ಲ ಎಂದು ವಿವರಿಸಿದರು.

466 veterinary doctor will be appointed in two months venkatarao nadagouda

ಮುಂಬಡ್ತಿ ಮೂಲಕ 171 ಜಾನುವಾರು ಅಭಿವೃದ್ಧಿ ಅಧಿಕಾರಿಗಳು, 212 ಜಾನುವಾರು ಅಧಿಕಾರಿಗಳು, 530 ಹಿರಿಯ ವೈದ್ಯಕೀಯ ಪಶುವೈದ್ಯಕೀಯ ಅಧಿಕಾರಿಗಳು, 514 ಪಶುವೈದ್ಯಕೀಯ ಪರೀಕ್ಷಕರು, 106 ಪಶುವೈದ್ಯಕೀಯ ಸಹಾಯಕರ ಹುದ್ದೆಗಳು ಹಾಗೂ ಲಿಪಿಕ ವೃಂದದ 77 ಹುದ್ದೆಗಳನ್ನು ಹಾಗೂ 30 ವಾಹನ ಚಾಲಕರ ಹುದೆಗಳನ್ನು ಭರ್ತಿ ಮಾಡಿಕೊಳ್ಳಲು ಯೋಜಿಸಲಾಗಿದೆ.

ನಿರುದ್ಯೋಗಿ ಯುವಕರಿಗಾಗಿ ಐರಾವತ ಯೋಜನೆ : ಪ್ರಿಯಾಂಕ್ ಖರ್ಗೆನಿರುದ್ಯೋಗಿ ಯುವಕರಿಗಾಗಿ ಐರಾವತ ಯೋಜನೆ : ಪ್ರಿಯಾಂಕ್ ಖರ್ಗೆ

ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಖಾಲಿ ಇರುವ ಡಿ ದರ್ಜೆ ಹುದ್ದೆಗಳ ನೇಮಕಾತಿಗೆ ವಿಶೇಷ ನೇಮಕಾತಿ ನಿಯಮಾವಳಿ ರಚಿಸಲು ಕ್ರಮವಹಿಸಲಾಗಿದೆ. ಪ್ರಸ್ತುತ ಹೊರ ಗುತ್ತಿಗೆ ಆಧಾರದ ಮೇಲೆ 1500 ಹುದ್ದೆಗಳ ಸೇವೆ ಪಡೆಯಲಾಗಿದೆ. ಅಂತೆಯೇ, 756 ಡಿ ಗ್ರೂಪ್ ಹುದ್ದೆಗಳನ್ನು ಹೆಚ್ಚುವರಿಯಾಗಿ ಹೊರ ಗುತ್ತಿಗೆ ಸೇವೆ ಪಡೆಯಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ಸಚಿವರು ವಿವರಿಸಿದರು.

English summary
Minister venkatarao nadagouda informed the assembly on Friday that the government will appoint 466 veterinary doctors within two months.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X