'ಚಿತ್ರದುರ್ಗದ ಬಿಜೆಪಿ ಯಾತ್ರೆಯಲ್ಲಿ ಪಾಲ್ಗೊಳ್ಳಲು ಅಮಿತ್ ಶಾಗೆ ಭಯ'

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಜನವರಿ 10: ಚಿತ್ರದುರ್ಗದಲ್ಲಿ ನಡೆಯುತ್ತಿರುವ ಬಿಜೆಪಿ ಪರಿವರ್ತನಾ ಯಾತ್ರೆಯಲ್ಲಿ ಪಾಲ್ಗೊಳ್ಳುವುದಕ್ಕೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಭಯ ಪಡುತ್ತಿದ್ದಾರೆ ಎಂದು ಜೆಡಿಎಸ್ ನ ರಾಜ್ಯ ಪ್ರಧಾನ ಕಾರ್ಯದರ್ಶಿ ಪ್ರಜ್ವಲ್ ರೇವಣ್ಣ ವ್ಯಂಗ್ಯವಾಡಿದ್ದಾರೆ. ಇಲ್ಲಿ ಬುಧವಾರ ಅವರು ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

ಕೇಂದ್ರದ ಅನುದಾನವನ್ನು ಸಿದ್ದರಾಮಯ್ಯ ನುಂಗಿದ್ದಾರೆ: ಅಮಿತ್ ಶಾ

ರಾಜ್ಯದಲ್ಲಿ ಜೆಡಿಎಸ್ ಅಧಿಕಾರಕ್ಕೆ ಬಂದರೆ ಉತ್ತರ ಕರ್ನಾಟಕದಲ್ಲಿರುವ ಸುವರ್ಣ‌ಸೌಧಕ್ಕೆ ಸರಕಾರಿ ಪ್ರಮುಖ ಕಚೇರಿ ಸ್ಥಳಾಂತರಿಸಲಾಗುವುದು ಎಂದ ಪ್ರಜ್ವಲ್, ಜೆಡಿಎಸ್ ನಲ್ಲಿ ಪಕ್ಷ ವಿರೋಧಿ ಚುಟುವಟಿಕೆ ನಡೆಸುವವರ ವಿರುದ್ಧ ಸೂಕ್ತ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಕೆ ನೀಡಿದರು.

ಸಂಕ್ರಾಂತಿ ವಿಶೇಷ ಪುಟ

Amit Shah afraid to participate in Chitradurga BJP rally

ಬೆಳಗಾವಿ ಜಿಲ್ಲೆಯಲ್ಲಿ ಸತೀಶ ಜಾರಕಿಹೊಳಿ ಜೆಡಿಎಸ್ ಗೆ ಬಂದರೆ ಪಕ್ಷಕ್ಕೆ ಆನೆ ಬಲ ಬಂದಂತಾಗುತ್ತದೆ. ರಾಜ್ಯದಲ್ಲಿ ಜೆಡಿಎಸ್ ಅಧಿಕಾರ ಹಿಡಿಯುವುದು ಶತ ಸಿದ್ಧ. ಇನ್ನು ಮುಂಬರುವ ಚುನಾವಣೆಯಲ್ಲಿ ಯಾರೊಂದಿಗೂ ಮೈತ್ರಿ ಮಾಡಿಕೊಳ್ಳುವ ಪ್ರಶ್ನೆಯೇ ಇಲ್ಲ. ಯುವಕರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP national president Amit Shah afraid to participate in Chitradurga BJP rally, says JDS state general secretary Prajwal Revanna in Belagavi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ