ಇಂದಿನಿಂದ ಬೆಳಗಾವಿ ಅಧಿವೇಶನ, 7 ಪ್ರತಿಭಟನೆ

Posted By: Gururaj
Subscribe to Oneindia Kannada

ಬೆಳಗಾವಿ, ನವೆಂಬರ್ 13 : ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶ ಆರಂಭವಾಗಲಿದೆ. ಶಾಸಕರು, ಸಚಿವರ ಆಗಮನದ ಹಿನ್ನಲೆಯಲ್ಲಿ ಭದ್ರತೆಗಾಗಿ 5000 ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಚಳಿಗಾಲದ ಅಧಿವೇಶನದ ವೇಳೆ ಸರ್ಕಾರಕ್ಕೆ ಚಳಿ ಬಿಡಿಸಲು ಮಾದಿಗರು ಸಜ್ಜು

ಮುಖ್ಯಮಂತ್ರಿಗಳು, ಶಾಸಕರು, ಅಧಿಕಾರಿಗಳು, ಪೊಲೀಸರ ಊಟ-ವಸತಿಗೆ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿದೆ. ಮೊದಲ ದಿನದ ಅಧಿವೇಶನಕ್ಕೆ ಪ್ರತಿಭಟನೆಯ ಬಿಸಿ ತಟ್ಟುವ ಸಾಧ್ಯತೆ ಇದ್ದು, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ 7 ಸಂಘಟನೆಗಳು ಪ್ರತಿಭಟನೆ ನಡೆಸಲು ಸಜ್ಜಾಗಿವೆ.

ಬೆಳಗಾವಿಯಲ್ಲಿ ಮಹಾ ಮೇಳಾವ ಆಯೋಜಿಸಲಿದೆ ಎಂಇಎಸ್

belagavi

ಡಿವೈಎಸ್‌ಪಿ ಗಣಪತಿ ಆತ್ಮಹತ್ಯೆ ಪ್ರಕರಣದ ಸಿಬಿಐ ತನಿಖೆ, ಗೌರಿ ಲಂಕೇಶ್ ಹತ್ಯೆ, ಡಿ.ಕೆ.ಶಿವಕುಮಾರ್ ಸೇರಿದಂತೆ ಇತರ ನಾಯಕರ ಮನೆ ಮೇಲೆ ಐಟಿ ದಾಳಿ, ಬೆಂಗಳೂರಿನ ಹದಗೆಟ್ಟ ರಸ್ತೆಗಳು, ವಿದ್ಯುತ್ ಖರೀದಿ ಅವ್ಯವಹಾರ ಸೇರಿದಂತೆ ವಿವಿಧ ವಿಚಾರಗಳ ಬಗ್ಗೆ ಕಾವೇರಿದ ಚರ್ಚೆ ನಡೆಯುವ ಸಾಧ್ಯತೆ ಇದೆ.

ಬೆಳಗಾವಿ ಅಧಿವೇಶನ : ಈ ಬಾರಿ ಪೊಲೀಸರಿಗೆ ಊಟ, ವಸತಿಗೆ ಸಂಕಷ್ಟವಿಲ್ಲ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka assembly winter session 2017, Belagavi. First day of the winter session in Suvarna Vidhana Soudha. November 13 updates.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ