ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟನೆ

By Sachhidananda Acharya
|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 15: ಮೇಲ್ದರ್ಜೆಗೇರಿಸಿದ ಬೆಳಗಾವಿ ವಿಮಾನ ನಿಲ್ದಾಣದ ಹೊಸ ಟರ್ಮಿನಲನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೇಂದ್ರ ವಿಮಾನಯಾನ ಸಚಿವರಾದ ಪಿ. ಅಶೋಕ ಗಜಪತಿ ರಾಜು ಗುರುವಾರ ಉದ್ಘಾಟಿಸಿದರು.

ಚಿತ್ರಗಳು : ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆಚಿತ್ರಗಳು : ಕಲಬುರಗಿ ವಿಮಾನ ನಿಲ್ದಾಣ ಕಾಮಗಾರಿ ಪರಿಶೀಲನೆ

ಈ ಸಂದರ್ಭ ಮತನಾಡಿದ ಸಿದ್ದರಾಮಯ್ಯ, ರಾಜ್ಯದಲ್ಲಿ ಪ್ರತಿ 150 ಕಿಲೋಮೀಟರ್ ವ್ಯಾಪ್ತಿಗೊಂದರಂತೆ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುವುದು ಎಂದು ಹೇಳಿದರು.

Belagavi Airport's new terminal inaugurated

ಈಗಾಗಲೇ ರಾಜ್ಯದಲ್ಲಿ ಬೆಂಗಳೂರು, ಮಂಗಳೂರು, ಮೈಸೂರು, ಹುಬ್ಬಳ್ಳಿ ಹಾಗೂ ಬೆಳಗಾವಿ ನಗರಗಳಲ್ಲಿ ವಿಮಾನ ನಿಲ್ದಾಣಗಳು ಕಾರ್ಯಾಚರಿಸುತ್ತಿದ್ದು, ಮುಂದಿನ ದಿನಗಳಲ್ಲಿ ಸಣ್ಣ ಸಣ್ಣ ನಗರಗಳಲ್ಲಿಯೂ ವಿಮಾನ ನಿಲ್ದಾಣ ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಈಗಾಗಲೇ ಕಲಬುರ್ಗಿಯ ವಿಮಾನ ನಿಲ್ದಾಣ ಕಾಮಗಾರಿ ಮುಗಿಯುತ್ತಾ ಬಂದಿದ್ದು ಮುಂದಿನ ದಿನಗಳಲ್ಲಿ ವಿಜಯಪುರ, ಶಿವಮೊಗ್ಗ, ಹಾಸನಗಳಲ್ಲೂ ವಿಮಾನ ನಿಲ್ದಾಣಗಳನ್ನು ನಿರ್ಮಿಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಸೆ. 15 ರಿಂದ ಮೈಸೂರಿನಿಂದ ವಿಮಾನಗಳ ಹಾರಾಟ: ಪ್ರತಾಪ್ ಸಿಂಹಸೆ. 15 ರಿಂದ ಮೈಸೂರಿನಿಂದ ವಿಮಾನಗಳ ಹಾರಾಟ: ಪ್ರತಾಪ್ ಸಿಂಹ

ವಿಮಾನ ನಿಲ್ದಾಣಗಳಿಗೆ ಭೂಮಿ ನೀಡುವ ರೈತರು ಹೆದರುವ ಅಗತ್ಯವಿಲ್ಲ. ಭೂ ಸ್ವಾಧೀನ ಕಾಯ್ದೆಯಡಿ ಸೂಕ್ತ ಪರಿಹಾರ ನಿಮಗೆ ನೀಡಿಲಾಗುವುದು ಎಂದು ಅವರು ಇದೇ ಸಂದರ್ಭದಲ್ಲಿ ಭರವಸೆ ನೀಡಿದರು.

Belagavi Airport's new terminal inaugurated

ಇನ್ನು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಕಿತ್ತೂರು ರಾಣಿ ಚೆನ್ನಮ್ಮ ಹೆಸರಿಡಬೇಕು ಎಂದು ಸಂಸದ ಸುರೇಶ ಅಂಗಡಿ ಬೇಡಿಕೆ ಇಟ್ಟರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಗಜಪತಿ ರಾಜು, ಕರ್ನಾಟಕ ಸರಕಾರ ಶಿಫಾರಸ್ಸು ಮಾಡಿದರೆ ಅದಕ್ಕೆ ಒಪ್ಪಿಗೆ ನೀಡಲಾಗುವುದು ಎಂದರು.

ಚೆನ್ನೈ - ಬೆಳಗಾವಿ ಮಧ್ಯೆ ವಿಮಾನ ಸಂಚಾರಕ್ಕೆ ಸ್ಪೈಸ್‌ಜೆಟ್‌ ಸಂಸ್ಥೆ ಆಸಕ್ತಿ ತೋರಿಸಿದೆ. ಇಂಡಿಗೋ ಹಾಗೂ ಜೆಟ್ ಏರ್‌ವೇಸ್ ಸಂಸ್ಥೆಗಳು ಬೆಳಗಾವಿಗೆ ವಿಮಾನ ಸಂಚಾರ ಆರಂಭಿಸಲು ಅನುಮತಿಗಾಗಿ ಅರ್ಜಿ ಸಲ್ಲಿಸಿವೆ ಎಂದು ಅವರು ಇದೇ ಸಂದರ್ಭದಲ್ಲಿ ಮಾಹಿತಿ ನೀಡಿದರು.

English summary
The new terminal of Belagavi Airport was inaugurated by Chief Minister Siddaramaiah and Union Civil Aviation Minister Ashok Gajapathiraju on September 14.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X