ಕೆಎಂಪಿಎ ಕಾಯ್ದೆ ತಿದ್ದುಪಡಿಗೆ ವಿರೋಧ, ವೈದ್ಯರಿಂದ ಬೆಳಗಾವಿ ಚಲೋ

Posted By: Gururaj
Subscribe to Oneindia Kannada

ಬೆಳಗಾವಿ, ನವೆಂಬರ್ 13 : 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017'ನ್ನು ವಿರೋಧಿಸಿ ಖಾಸಗಿ ಆಸ್ಪತ್ರೆಗಳ ವೈದ್ಯರು ಬೆಳಗಾವಿ ಚಲೋ ಹಮ್ಮಿಕೊಂಡಿದ್ದಾರೆ.

In Pics : ವೈದ್ಯರ ಮುಷ್ಕರದಿಂದ ರೋಗಿಗಳ ನೀಗದ ಸಂಕಷ್ಟ

ನವೆಂಬರ್ 3ರಂದು ವೈದ್ಯರು ಒಂದು ದಿನದ ಮುಷ್ಕರ ನಡೆಸಿದ್ದರು. ಇದರಿಂದ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಸೂಕ್ತ ಸಮಯಕ್ಕೆ ಚಿಕಿತ್ಸೆ ದೊರೆಯದೇ ರೋಗಿಗಳು ಪರದಾಡಿದ್ದರು.

Belagavi Chalo by private doctors on November 13, 2017

ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಇಂದಿನಿಂದ ಚಳಿಗಾಲದ ಅಧಿವೇಶನ ಆರಂಭವಾಗಲಿದೆ. ಅಧಿವೇಶನದಲ್ಲಿ ತಿದ್ದುಪಡಿ ಮಸೂದೆಯನ್ನು ಮಂಡಿಸಬಾರದು ಎಂದು ಮುಖ್ಯಮಂತ್ರಿಗಳನ್ನು ಒತ್ತಾಯಿಸಲು ಬೆಳಗಾವಿ ಚಲೋ ಹಮ್ಮಿಕೊಳ್ಳಲಾಗಿದೆ.

ವೈದ್ಯರ ಮುಷ್ಕರ : ರೋಗಿಗಳ ಪರದಾಟ, ಸರ್ಕಾರದ ಮೌನ

'ರಾಜ್ಯದ ವಿವಿಧ ಜಿಲ್ಲೆಗಳಿಂದ ವೈದ್ಯರು ಬೆಳಗಾವಿಯತ್ತ ತೆರಳುತ್ತಿದ್ದಾರೆ. ಸರ್ಕಾರ ನಮ್ಮ ಬೇಡಿಕೆಗೆ ಒಪ್ಪದಿದ್ದರೆ ಸರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತದೆ' ಎಂದು ಸಂಘದ ಅಧ್ಯಕ್ಷ ರಾಜಶೇಖರ್ ಎಸ್.ಬಳ್ಳಾರಿ ಹೇಳಿದ್ದಾರೆ.

ಖಾಸಗಿ ವೈದ್ಯರ ಬಂದ್ ಎಫೆಕ್ಟ್, ರೋಗಿಗಳಲ್ಲಿ ಗೊಂದಲ

ವೈದ್ಯರ ವಿರೋಧದ ನಡುವೆಯೂ ಸರ್ಕಾರ ತಿದ್ದುಪಡಿ ಕಾಯ್ದೆಯನ್ನು ಸದನದಲ್ಲಿ ಮಂಡನೆ ಮಾಡಿದರೆ, ಅದಕ್ಕೆ ಒಪ್ಪಿಗೆ ನೀಡಬಾರದು ಎಂದು ರಾಜ್ಯಪಾಲರನ್ನು ಒತ್ತಾಯಿಸಲು ನಿರ್ಣಯ ಕೈಗೊಳ್ಳಲಾಗಿದೆ.

ಸರ್ಕಾರ ವೈದ್ಯರ ಒತ್ತಾಯಕ್ಕೆ ಮಣಿಯದಿದ್ದರೆ ವೃತ್ತಿಯನ್ನು ತ್ಯಜಿಸುವ ಬೆದರಿಕೆಯನ್ನು ಖಾಸಗಿ ಆಸ್ಪತ್ರೆಗಳ ವೈದ್ಯರು ಹಾಕಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Indian Medical Association (IMA) announced that they would take out a Belagavi Chalo protest march on November 13 and demanded the Karnataka government not to table Karnataka Private Medical Establishments (KPME) Act .

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ