ಟಿಪ್ಪು ಜಯಂತಿ ಆಚರಣೆ ವಿವಾದ : ಬೆಳಗಾವಿಯಲ್ಲಿ ಕಲ್ಲು ತೂರಾಟ

Posted By: Gururaj
Subscribe to Oneindia Kannada

ಬೆಳಗಾವಿ, ನವೆಂಬರ್ 5 : ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವ ವಿಚಾರದಲ್ಲಿ ಬೆಳಗಾವಿಯಲ್ಲಿ ಕಲ್ಲು ತೂರಾಟ ನಡೆದಿದೆ. ಖಡಕ್‌ಗಲ್ಲಿಯಲ್ಲಿ ಶನಿವಾರ ರಾತ್ರಿ ಕಲ್ಲು ತೂರಾಟ ನಡೆದಿದ್ದು, ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ಶನಿವಾರ ಟಿಪ್ಪು ಜಯಂತಿ ಆಚರಣೆಗೆ ಅನುಮತಿ ನೀಡುವಂತೆ ಕೋರಿ ಮುಸ್ಲಿಂ ಸಮುದಾಯದ ಮುಖಂಡರು ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಆಗಮಿಸಿದ್ದರು. ಈ ಸಂದರ್ಭದಲ್ಲಿ ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದರು.

ಟಿಪ್ಪು ಜಯಂತಿ ಆಮಂತ್ರಣ ಪತ್ರಿಕೆಯಲ್ಲಿ ಅನಂತಕುಮಾರ್ ಹೆಗಡೆ

ಇದೇ ವಿಚಾರವಾಗಿ ರಾತ್ರಿ ಖಡಕ್ ಗಲ್ಲಿಯಲ್ಲಿ ಕಲ್ಲು ತೂರಾಟ ನಡೆದಿದೆ. ಕೆಲವು ಕಿಡಿಗೇಡಿಗಳು ಗಲ್ಲಿಯತ್ತ ಬಾಟಲಿ ಎಸೆದರು. ಸ್ಥಳಕ್ಕೆ ತಕ್ಷಣ ಪೊಲೀಸರು ಆಗಮಿಸಿದರು. ಪೊಲೀಸರ ಮುಂದೆಯೇ ಕಲ್ಲು ತೂರಾಟ ನಡೆದಿದ್ದು, ಪೊಲೀಸರ ವಾಹನವೂ ಜಖಂಗೊಂಡಿದೆ.

ಟಿಪ್ಪು ದೇಶಪ್ರೇಮಿ : ಅಮಿತ್ ಶಾಗೆ ಸಿದ್ದು ದೇಶಭಕ್ತಿಯ ಪಾಠ

ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರಕತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಪ್ರತಿಕೃತಿ ದಹಿಸಲು ಯತ್ನ

ಪ್ರತಿಕೃತಿ ದಹಿಸಲು ಯತ್ನ

ಶನಿವಾರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಲು ಬಂದ ಮುಸ್ಲಿಂ ಸಮುದಾಯದ ಮುಖಂಡರು ಶ್ರೀರಾಮ ಸೇನೆ ಮುಖಂಡ ರಮಾಕಾಂತ ಕೊಂಡುಸ್ಕರ ಪ್ರತಿಕೃತಿ ದಹಿಸಲು ಮುಂದಾಗಿದ್ದರು. ಆದರೆ, ಪೊಲೀಸರು ಇದನ್ನು ತಡೆದರು. ಇದೇ ವಿಚಾರದಲ್ಲಿ ಕಲ್ಲು ತೂರಾಟ ನಡೆದಿದೆ.

ಬಾಟಲಿಗಳನ್ನು ಎಸೆದರು

ಬಾಟಲಿಗಳನ್ನು ಎಸೆದರು

ಖಡಕ್ ಗಲ್ಲಿ ಬೆಳಗಾವಿ ನಗರದ ಸೂಕ್ಷ್ಮ ಪ್ರದೇಶ. ಹಲವು ಬಾರಿ ಇಲ್ಲಿ ಕಲ್ಲು ತೂರಾಟಗಳು ನಡೆದಿವೆ. ಶನಿವಾರ ಮೊದಲು ಬಾಟಲಿಗಳನ್ನು ಎಸೆಯಲಾಯಿತು. ವಿಷಯ ತಿಳಿದು ಪೊಲೀಸರು ಸ್ಥಳಕ್ಕೆ ಆಗಮಿಸಿದರು. ಆಗ ಪೊಲೀಸರ ಸಮ್ಮುಖದಲ್ಲಿಯೇ ಕಲ್ಲು ತೂರಾಟ ನಡೆದಿದೆ.

ಟಿಪ್ಪು ಜಯಂತಿ ಆಚಣೆಗೆ ಸೇನೆ ವಿರೋಧ

ಟಿಪ್ಪು ಜಯಂತಿ ಆಚಣೆಗೆ ಸೇನೆ ವಿರೋಧ

ಶ್ರೀರಾಮ ಸೇನೆ ಟಿಪ್ಪು ಜಯಂತಿ ಆಚರಣೆಗೆ ವಿರೋಧ ವ್ಯಕ್ತಪಡಿಸಿದೆ. 'ಮತಾಂಧನಾಗಿದ್ದ ಟಿಪ್ಪು ಸುಲ್ತಾನ್‌ ಜಯಂತಿಯನ್ನು ಕೂಡಲೇ ಕೈಬಿಡಬೇಕು. ಇಲ್ಲದಿದ್ದರೆ ಉಗ್ರ ಪ್ರತಿಭಟನೆ ನಡೆಸಲಾಗುವುದು' ಎಂದು ಶ್ರೀರಾಮ ಸೇನೆ ಜಿಲ್ಲಾ ಘಟಕದ ಅಧ್ಯಕ್ಷ ರಮಾಕಾಂತ ಕೊಂಡುಸ್ಕರ ಎಚ್ಚರಿಕೆ ನೀಡಿದ್ದಾರೆ.

ಬಿಗಿ ಪೊಲೀಸ್ ಬಂದೋಬಸ್ತ್

ಬಿಗಿ ಪೊಲೀಸ್ ಬಂದೋಬಸ್ತ್

ಕಲ್ಲು ತೂರಾಟದ ಘಟನೆ ಏಕೆ ನಡೆಯಿತು? ಎಂದು ಪೊಲೀಸರು ಸ್ಪಷ್ಟವಾದ ಮಾಹಿತಿ ನೀಡಿಲ್ಲ. ಗಲ್ಲಿಯಲ್ಲಿ ಪರಿಸ್ಥಿತಿ ಬೂದಿ ಮುಚ್ಚಿದ ಕೆಂಡದಂತಿದೆ. ಮುಂಜಾಗ್ರಕತೆ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಡಿಸಿಪಿ ಅಮರನಾಥ ರೆಡ್ಡಿ ಸೇರಿದಂತೆ ಹಲವು ಹಿರಿಯ ಅಧಿಕಾರಿಗಳು ಸ್ಥಳದಲ್ಲಿ ಮೊಕ್ಕಂ ಹೂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Tension gripped in Belagavi Khadak Galli after stone pelting on Saturday, November 4, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ