ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿ : ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟನೆಗೆ ಸಿದ್ಧ

|
Google Oneindia Kannada News

ಬೆಳಗಾವಿ, ಸೆಪ್ಟೆಂಬರ್ 7 : ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣದ ಹೊಸ ಟರ್ಮಿನಲ್ ಉದ್ಘಾಟನೆಗೆ ಸಿದ್ಧವಾಗಿದೆ. 141.80 ಕೋಟಿ ರೂ. ವೆಚ್ಚದಲ್ಲಿ ವಿಮಾನ ನಿಲ್ದಾಣವನ್ನು ಅಭಿವೃದ್ಧಿ ಪಡಿಸಲಾಗಿದೆ.

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣ ಅಭಿವೃದ್ಧಿ

ಬೆಳಗಾವಿ ಸಂಸದ ಸುರೇಶ ಅಂಗಡಿ ಈ ಕುರಿತು ಮಾಹಿತಿ ನೀಡಿದ್ದಾರೆ. 'ಸೆ.14ರಂದು ವಿಮಾನ ನಿಲ್ದಾಣದ ನೂತನ ಟರ್ಮಿನಲ್‌ ಅನ್ನು ಕೇಂದ್ರ ವಿಮಾನಯಾನ ಸಚಿವ ಪಿ.ಗಜಪತಿರಾಜು ಉದ್ಘಾಟಿಸಲಿದ್ದಾರೆ' ಎಂದು ಹೇಳಿದ್ದಾರೆ.

Belagavi new airport terminal ready for takeoff

ವಿಮಾನ ನಿಲ್ದಾಣವನ್ನು 141 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಮಾಡಲಾಗಿದೆ. 1,830 ಮೀಟರ್ ಇದ್ದ ರನ್‌ ವೇಯನ್ನು 3,200 ಮೀಟರ್‌ಗೆ ವಿಸ್ತರಣೆ ಮಾಡಲಾಗಿದೆ. ಇದರಿಂದ ದೊಡ್ಡ ಕಾರ್ಗೊ ವಿಮಾನಗಳು ಸಂಚಾರ ನಡೆಸಲು ಅನುಕೂಲವಾಗಲಿದೆ.

ಎರಡು ಮತ್ತು ಮೂರನೇ ಹಂತದ ನಗರಗಳ ವಿಮಾನ ನಿಲ್ದಾಣಗಳನ್ನು ಅಭಿವೃದ್ಧಿ ಮಾಡಲು ಕೇಂದ್ರ ಸರ್ಕಾರ ಯೋಜನೆ ರೂಪಿಸಿತ್ತು. ಅದರಂತೆ ದೇಶದ ಐದು ನಗರಗಳ ವಿಮಾನ ನಿಲ್ದಾಣ ಅಭಿವೃದ್ಧಿ ಮಾಡಲಾಗಿದೆ. ಇದರಲ್ಲಿ ಕರ್ನಾಟಕದ ಬೆಳಗಾವಿ, ಹುಬ್ಬಳ್ಳಿ ನಿಲ್ದಾಣಗಳು ಸೇರಿದ್ದವು.

ಹುಬ್ಬಳ್ಳಿಗೆ ಹಾರಲಿವೆ ಇನ್ನೂ ಮೂರು ವಿಮಾನಹುಬ್ಬಳ್ಳಿಗೆ ಹಾರಲಿವೆ ಇನ್ನೂ ಮೂರು ವಿಮಾನ

ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಹೊಸ ಟರ್ಮಿನಲ್, ರನ್ ವೇ ವಿಸ್ತರಣೆ, ಟ್ಯಾಕ್ಸಿ ನಿಲ್ದಾಣ ನಿರ್ಮಾಣ ಮುಂತಾದ ಕಾಮಗಾರಿಗಳನ್ನು ಕೈಗೊಳ್ಳಲಾಗಿದ್ದು, ಎಲ್ಲವೂ ಮುಕ್ತಾಯಗೊಂಡು ನಿಲ್ದಾಣ ವಿಮಾನ ಹಾರಾಟಕ್ಕೆ ಸಿದ್ಧವಾಗಿದೆ.

English summary
The construction of a new terminal at Sambra airport Belagavi has been completed and it is ready for operation. New terminal inauguration will be held on September 14, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X