ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಕಾಂಗ್ರೆಸ್ ಗೆ?

Posted By:
Subscribe to Oneindia Kannada

ಹುಕ್ಕೇರಿ, ಡಿಸೆಂಬರ್ 07: ಹುಕ್ಕೇರಿಯ ಬಿಜೆಪಿ ಶಾಸಕ ಉಮೇಶ್ ಕತ್ತಿ ಅವರನ್ನು ಕಾಂಗ್ರೆಸ್ ಪಕ್ಷಕ್ಕೆ ಸೆಳೆದುಕೊಳ್ಳುವ ಪ್ರಯತ್ನ ಸಿದ್ದರಾಮಯ್ಯ ಅವರಿಂದ ನಡೆಯುತ್ತಿದೆ ಎಂಬ ಊಹಾಪೋಹ ಬೆಳಗಾವಿಯಲ್ಲಿ ನಡೆಯುತ್ತಿದೆ.

ಕತ್ತಿ, ಜಾರಕಿಹೊಳಿ, ಪಾಟೀಲ ಎಲ್ರೂ ತೆನೆ ಹೊರಲು ರೆಡಿ!

ಬೆಳಗಾವಿಯ ಕಾಂಗ್ರೆಸ್ ಶಾಸಕ ಸತೀಶ್ ಜಾರಕಿಹೊಳಿ ಅವರಿಗೆ ಟಿಕೆಟ್ ನಿರಾಕರಿಸುವ ಹಿನ್ನೆಲೆಯಲ್ಲಿ ಇದೀಗ ಅವರ ಸ್ಥಾನ ತುಂಬಲು ಉತ್ತಮ ಬೆಂಬಲಿಗರನ್ನು ಹೊಂದಿರುವ ಉಮೇಶ್ ಕತ್ತಿ ಅವರನ್ನು ಪಕ್ಷಕ್ಕೆ ಕರೆತರಲು ಸಿದ್ದರಾಮಯ್ಯ ಗಾಳ ಬೀಸಿದ್ದಾರೆ ಎನ್ನಲಾಗಿದೆ.

BJP MLA Umesh Kathi planing to jump to Congress?

ಇದಕ್ಕೆ ಪೂರಕವಾಗಿ ಪರಿವರ್ತನಾ ಯಾತ್ರೆಯಲ್ಲಿ ಉಮೇಶ್ ಕತ್ತಿ ಸಕ್ರಿಯವಾಗಿ ಭಾಗವಹಿಸದಿರುವುದು ಊಹಾಪೋಹಗಳಿಗೆ ಪುಷ್ಠಿ ನೀಡುತ್ತಿದೆ. ಈ ಹಿಂದೆ ಬೆಳಗಾವಿಯಲ್ಲಿ ನಡೆದ ಬಿಜೆಪಿ ಕೋರ್ ಕಮಿಟಿ ಸಭೆಗೂ ಅವರು ಗೈರಾಗಿ ಬಿ.ಎಸ್.ಯಡಿಯೂರಪ್ಪ ಅವರ ಸಿಟ್ಟಿಗೆ ಕಾರಣವಾಗಿದ್ದರು. ಇವೆಲ್ಲ ಘಟನೆಗಳು ಉಮೇಶ್ ಕತ್ತಿ ಅವರ ಪಕ್ಷಾಂತರ ಸುದ್ದಿಗೆ ರೆಕ್ಕೆ ಪುಕ್ಕ ಕೊಟ್ಟಿವೆ

ಬೆಳಗಾವಿಯಲ್ಲಿ ಕಾಂಗ್ರೆಸ್‌ ಗೆಲ್ಲಿಸಲು 'ಮಿಷನ್ 12' ತಂತ್ರ!

ಜೆಡಿಎಸ್ ಪಕ್ಷದಿಂದ ರಾಜಕೀಯ ಪ್ರಾರಂಭಿಸಿದ್ದ ಉಮೇಶ್ ಕತ್ತಿ ನಂತರ ಬೆಜೆಪಿ ಪಕ್ಷ ಸೇರಿ ಸಚಿವರೂ ಆಗಿದ್ದರು. ಅವರು ಕಾಂಗ್ರೆಸ್ ಪಕ್ಷ ಸೇರಿದ್ದೇ ಆದಲ್ಲಿ ಮೂರು ಪ್ರಮುಖ ಪಕ್ಷಗಳ ಸುತ್ತು ಹೊಡೆದಂತಾಗುತ್ತದೆ. ಜೆಡಿಎಸ್ ಪಕ್ಷದಲ್ಲಿದ್ದಾಗ ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಒಡನಾಟ ಇರಿಸಿಕೊಂಡಿದ್ದ ಉಮೇಶ್ ಕತ್ತಿ ಅವರು ಈಗಲೂ ಸಿದ್ದರಾಮಯ್ಯ ಅವರಿಗೆ ಆಪ್ತರೇ ಆಗಿದ್ದಾರೆ. ಹಾಗಾಗಿ ಅವರನ್ನು ಕಾಂಗ್ರೆಸ್ ಗೆ ಎಳೆ ತರುವುದು ಸಿದ್ದರಾಮಯ್ಯ ಅವರಿಗೆ ಕಷ್ಟವಾಗಲಿಕ್ಕಿಲ್ಲ ಎಂಬುದು ಕ್ಷೇತ್ರದ ಜನರ ಅಭಿಪ್ರಾಯ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP MLA Umesh Kathi is planing to jump to congress party ahed of elections. when Umesh Kathi was in JDS party CM Siddaramaiah also is fellow party leader. so now the CM Siddaramaiah trying to bring his old friend to congress.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ