50:50 ಅನುಪಾತದಲ್ಲಿ ಕೇಂದ್ರ ಒಪ್ಪಿದರೆ ಸಾಲಮನ್ನಾ: ಸಿದ್ದರಾಮಯ್ಯ

Posted By:
Subscribe to Oneindia Kannada

ಬೆಳಗಾವಿ: ನವೆಂಬರ್, 24: ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿ ರೈತರು ಮಾಡಿರುವ ಸಾಲದ ಶೇ.50ರಷ್ಟನ್ನು ಕೇಂದ್ರ ಸರ್ಕಾರ ಭರಿಸಿದರೆ, ಉಳಿದ ಅರ್ಧ ಭಾಗ ಭರಿಸಲು ರಾಜ್ಯ ಸರ್ಕಾರ ಸಿದ್ಧವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗುರುವಾರ ಅಧಿವೇಶನದಲ್ಲಿ ತಿಳಿಸಿದರು.

ಕಳೆದ ವರ್ಷ ನೀಡಿದ ಹೇಳಿಕೆಗೆ ರಾಜ್ಯ ಸರ್ಕಾರ ಈಗಲೂ ಬದ್ಧವಿದೆ. ನಮ್ಮದು ರೈತ ಪರವಾದ ಸರ್ಕಾರ. ಎಷ್ಟೇ ಕಷ್ಟ ಬಂದರೂ ರೈತರನ್ನು ನಾವು ಕೈಬಿಡುವುದಿಲ್ಲ. ರೈತರು ಆತಂಕ ಪಡುವ ಅಗತ್ಯವಿಲ್ಲ. ಬರ ಪರಿಹಾರ ಕಾಮಗಾರಿಗಳನ್ನು ಯುದ್ದೋಪಾಧಿಯಲ್ಲಿ ಕೈಗೊಂಡಿದ್ದೇವೆ.

Center ready to waive state will also: Siddaramaiah

ಕುಡಿಯುವ ನೀರಿಗಾಗಿ ಪ್ರತಿ ತಾಲ್ಲೂಕಿಗೆ 60ಲಕ್ಷ ರೂ. ಬಿಡುಗಡೆ ಮಾಡಿದ್ದೇವೆ. ಹೆಚ್ಚಿನ ನೆರವು ಕೋರಿ ಕೇಂದ್ರಕ್ಕೆ ಸರ್ವಪಕ್ಷ ನಿಯೋಗ ಕರೆದುಕೊಂಡು ಹೋಗಲು ನಾವು ಸಿದ್ಧರಿದ್ದೇವೆ ಎಂದು ಸಿದ್ದರಾಮಯ್ಯ ತಿಳಿಸಿದರು.

ಅಪರಾಧ ತಡೆಗೆ ಕಠಿಣ ಕ್ರಮ

ಅತ್ಯಾಚಾರದಂತಹ ಪ್ರಕರಣಗಳು ಅತ್ಯಂತ ಪೈಶಾಚಿಕ ಕೃತ್ಯವಾಗಿವೆ. ಇದನ್ನು ತಡೆಯಲು ಸರ್ಕಾರ ಕಠಿಣ ಕ್ರಮ ಕೈಗೊಂಡಿದೆ. ಇಂತಹ ಅಪರಾಧ ಪ್ರಕರಣಗಳಲ್ಲಿ ಯಾರೂ ಆಕ್ರೋಶ, ಆವೇಶ ಪಡುವ ಅಗತ್ಯವಿಲ್ಲ. ತಪ್ಪು ಯಾರೇ ಮಾಡಿದರೂ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಸಿದ್ದರಾಮಯ್ಯ ಅವರು ಮೇಲ್ಮನೆಗೆ ತಿಳಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
If central government reday waive farmers loan 50 percent state government also readay to waive 50 percent CM siddaramaiah told in Belagavi winter session on Thursday.
Please Wait while comments are loading...