ಚಿಕ್ಕೋಡಿಯಲ್ಲಿ ನಾಪತ್ತೆಯಾಗಿದ್ದ ಬಾಲಕಿಯರು ಬೆಳಗಾವಿಯಲ್ಲಿ ಪತ್ತೆ

Posted By: Nayana
Subscribe to Oneindia Kannada

ಬೆಳಗಾವಿ, ಡಿಸೆಂಬರ್ 1 : ಕಳೆದ ಎರಡು ದಿನಗಳ ಹಿಂದೆ ಶಾಲೆಯಿಂದ ನಾಪತ್ತೆಯಾಗಿದ್ದ ಶಾಲು ಮಿಶ್ರಾ(15) ಹಾಗೂ ಆರತಿ ಪಾಟೀಲ್ (15) ಬೆಳಗಾವಿಯಲ್ಲಿ ಶುಕ್ರವಾರ ಪತ್ತೆಯಾಗಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೋರ್ಗಾಂವ್ ಗ್ರಾಮದ ಪ್ರೌಢಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿನಿಯರಾದ ಅವರು ಕಳೆದ ಎರಡು ದಿನಗಳ ಹಿಂದೆ ನಾಪತ್ತೆಯಾಗಿದ್ದರು. ಶಾಲೆಗೆ ಹೋದವರು ಒಂದು ಎರಡು ದಿನವಾದರೂ ಮರಳಿ ಬಂದಿರಲಿಲ್ಲ. ಹೀಗಾಗಿ ಪೋಷಕರು ಸದಲಗಾ ಪೊಲೀಸ್ ಠಾಣೆಯಲ್ಲಿ ಅಪಹರಣ ದೂರು ದಾಖಲಿಸಿದ್ದರು. ಪೋಲೀಸರು ತನಿಖೆ ನಡೆಸಿದಾಗ ಬಾಲಕಿಯರು ಬೆಳಗಾವಿಯಲ್ಲಿ ಪತ್ತಯಾಗಿದ್ದಾರೆ.

Chikkodi girls rescued in Belgaum

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two girls from a Private High school in Boregaon village of chikkodi Taluk have been rescued in Belgaum on Friday. After two days of missing from village mysteriously.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ