ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮೈಸೂರು, ಬೆಳಗಾವಿಯಲ್ಲಿ ಸಿಎಂ ಬರ ವೀಕ್ಷಣೆ: ಪರಿಹಾರ ನಿರೀಕ್ಷೆ

By Ananthanag
|
Google Oneindia Kannada News

ಬೆಳಗಾವಿ, ನವೆಂಬರ್ 11 : ರಾಜ್ಯದಲ್ಲಿ ಬೀಕರ ಬರ ಪರಿಸ್ಥಿತಿಗೆ ರಾಜ್ಯ ಸಂಚಾರ ಕೈಗೊಂಡಿರುವ ಸಿಎಂ ಸಿದ್ದರಾಮಯ್ಯ ಬರಪರಿಹಾರಕ್ಕೆ ಕೇಂದ್ರಕ್ಕೆ ಮನವಿ ಸಲ್ಲಿಸಲಾಗಿದೆ ಎಂದು ತಿಳಿಸಿದ್ದಾರೆ.

ರಾಜ್ಯದಲ್ಲಿ 139 ತಾಲ್ಲೂಕುಗಳನ್ನು ಬರ ಪೀಡಿತ ತಾಲ್ಲೂಕುಗಳೆಂದು ಘೋಷಿಸಲಾಗಿದೆ. ಕುಡಿಯುವ ನೀರು, ಮೇವು, ಗಂಜಿ ಕೇಂದ್ರ ಇತ್ಯಾದಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಕೇಂದ್ರ ಸರ್ಕಾರಕ್ಕೆ ಮನವಿ ನೀಡಲಾಗಿದೆ ಪರಿಹಾರ ಬರುವ ನಿರೀಕ್ಷೆಯಲ್ಲಿದ್ದೇವೆ ಎಂದು ಅವರು ತಿಳಿಸಿದ್ದಾರೆ. [ಬರ ಪರಿಹಾರ : ಮುಖ್ಯಮಂತ್ರಿಗಳು ನೀಡಿದ ಸೂಚನೆಗಳು]

cm drought visiting in belagavi

ಬೆಳಗಾವಿಯ ವಿವಿಧ ತಾಲ್ಲೂಕುಗಳನ್ನ ವೀಕ್ಷಿಸುವ ಮುನ್ನ ಮಾತಾಡಿದ ಸಿಎಂ ಸಿದ್ದರಾಮಯ್ಯ, ರಾಜ್ಯದಲ್ಲಿ ಬರ ಪೀಡಿತವಾಗಿರುವ ಎಲ್ಲ ತಾಲ್ಲೂಕುಗಳಿಗೆ ಭೇಟಿ ನೀಡಿ ಪರಿಶೀಲಿಸಲಾಗುವುದು ರಾಜ್ಯದಲ್ಲಿ ಉಂಟಾಗಿರುವ ಭೀಕರ ಬರಗಾಲವನ್ನು ಸಮರ್ಥವಾಗಿ ಎದುರಿಸಲು ಸರ್ಕಾರ ಸಿದ್ಧವಿದೆ ಎಂದು ತಿಳಿಸಿದ್ದಾರೆ.[ವಾಯುಭಾರ ಕುಸಿತ: ಹಿಂಗಾರು ತಡ, ಬರ ಆವೃತ]

ಇನ್ನು ಬರ ಪ್ರವಾಸಕ್ಕೂ ಮುನ್ನ ಮೈಸೂರಿನ ನಿವಾಸದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು ರಾಜ್ಯದಲ್ಲಿ ಕಾಣಿಸಿಕೊಂಡಿರುವ ಬರ ಪರಿಸ್ಥಿತಿಯನ್ನು ಖುದ್ದು ಅವಲೋಕಿಸಲು ಎಲ್ಲೆಡೆ ಪ್ರವಾಸ ಮಾಡಲಾಗುವುದು. ಪ್ರವಾಸದ ಎಲ್ಲ ವಿವರಗಳನ್ನು ಪೂರ್ಣವಾಗಿ ಸಂಗ್ರಹಿಸಿ ಮತ್ತೊಮ್ಮೆ ಕೇಂದ್ರ ಸರ್ಕಾರಕ್ಕೆ ಹೆಚ್ಚಿನ ನೆರವು ನೀಡುವಂತೆ ಮನವಿ ಸಲ್ಲಿಸಲಾಗುವುದು ಎಂದು ಹೇಳಿದರು.

ಇನ್ನು ಕರಾಳದಿನದಲ್ಲಿ ಭಾಗಿಯಾಗಿರುವ ಮೇಯರ್ ಉಪಮೇಯರ್ ಗೆ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾದಿಕಾರಿ ನೀಡಿದ್ದಾರೆ. ಕಾನೂನು ತಜ್ಞರ ಸಲಹೆ ಮೇರೆಗೆ ತಪ್ಪಿತಸ್ತರ ವಿರುದ್ದ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ರಾಯಚೂರಿನಲ್ಲಿ ಗುರುವಾರ ಟಿಪ್ಪು ಜಯಂತಿ ವೇಳೆ ತನ್ವೀರ್ ಸೇಠ್ ಮೊಬೈಲಿನಲ್ಲಿ ಅಶ್ಲೀಲ ಚಿತ್ರವನ್ನು ನೋಡಿದ್ದಾರೆ ಎಂಬ ಆರೋಪ ಕುರಿತು ಮಾಹಿತಿ ನಂತರ ಪರಿಶೀಲಿಸಿ ಕ್ರಮ ಕೈಗೊಳ್ಳಲಾಗುವುದು ಎಂದಿದ್ದು ತಪ್ಪು ಸರಿ ಎನ್ನುವ ಚರ್ಚೆ ಈಗ ಬೇಡ ಎಂದರು.

English summary
Chief Mimister siddaramaiah visiting in belagavi in drought matter. approch to the salution expect central government.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X