ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಗ್ರಾನೈಟ್ ಗಣಿಗಾರಿಕೆ ಪರವಾನಗಿ ಪ್ರಕ್ರಿಯೆ ಸರಳಗೊಳಿಸಲು ಕುಮಾರಸ್ವಾಮಿ ಸೂಚನೆ

|
Google Oneindia Kannada News

ಬೆಳಗಾವಿ, ಡಿಸೆಂಬರ್ 14: ಗ್ರಾನೈಟ್ ಗಣಿಗಾರಿಕೆಗೆ ಸಂಬಂಧಿಸಿದಂತೆ ರಾಜ್ಯಕ್ಕೆ ರಾಜಧನ ನಷ್ಟವಾಗದಂತೆ ಉದ್ಯಮಿಗಳಿಗೆ ಪರವಾನಗಿ ನೀಡುವ ಪ್ರಕ್ರಿಯೆಯನ್ನು ಸರಳಗೊಳಿಸಲು ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ಸೂಚನೆ ನೀಡಿದ್ದಾರೆ.

ಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಇಂದು ಕುಮಾರಸ್ವಾಮಿಸಕ್ಕರೆ ಕಾರ್ಖಾನೆ ಮಾಲೀಕರೊಂದಿಗೆ ಇಂದು ಕುಮಾರಸ್ವಾಮಿ

ಗುರುವಾರ ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ನಡೆದ ಗ್ರಾನೈಟ್ ಗಣಿಗಾರಿಕೆ ಉದ್ಯಮ ಎದುರಿಸುತ್ತಿರುವ ಸಮಸ್ಯೆಗಳ ಕುರಿತಂತೆ ನಡೆದ ಸಭೆಯಲ್ಲಿ ಈ ಸೂಚನೆ ನೀಡಿದ್ದಾರೆ. ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶ ವ್ಯಾಪ್ತಿಯ ಶಾಸಕರು ನೀಡಿದ ಸಲಹೆಗಳನ್ನು ಪರಿಗಣಿಸಿ ಗ್ರನೈಟ್ ಉದ್ಯಮಗಳು ಎದುರಿಸುತ್ತಿರುವ ಸವಾಲುಗಳನ್ನು ಬಗೆಹರಿಸಲು ಸೂಕ್ತ ಕ್ರಮಕೈಗೊಳ್ಳುವ ಭರವಸೆ ನೀಡಿದರು.

ಬನ್ನೇರುಘಟ್ಟ ಉದ್ಯಾನ ಸುತ್ತ ಶೀಘ್ರ ಕಲ್ಲು ಗಣಿಗಾರಿಕೆ ರದ್ದು ಬನ್ನೇರುಘಟ್ಟ ಉದ್ಯಾನ ಸುತ್ತ ಶೀಘ್ರ ಕಲ್ಲು ಗಣಿಗಾರಿಕೆ ರದ್ದು

ಗಣಿ ಇಲಾಖೆ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಕಠಾರಿಯಾ ಅವರು ಸಭೆಯಲ್ಲಿ ಮಾತನಾಡಿ, ಈಗಾಗಲೇ ಪರವಾನಿಗೆ ನೀಡುವ ಸಂಬಂಧ ಕಾನೂನು ಸರಳೀಕರಣಗೊಳಿಸಲು ನೆರೆ ರಾಜ್ಯಗಳಿಗೆ ಭೇಟಿ ನೀಡಿ ಅಧ್ಯಯನ ನಡೆಸಿದ್ದು, ಅಧ್ಯಯನ ವರದಿಯೂ ಸಲ್ಲಿಕೆಯಾಗಿದ್ದು ಶೀಘ್ರವೇ ಕಾನೂನು ಸರಳೀಕರಣಗೊಳಿಸಲಾಗುವುದು ಎಂದು ಮುಖ್ಯಮಂತ್ರಿಗಳಿಗೆ ವಿವರಣೆ ನೀಡಿದರು.

CM HDK instructed to simplify granite lease process

ಉದ್ಯಮಿಗಳು ಗ್ರಾನೈಟ್ ಕ್ವಾರಿಯಿಂಗ್ ಎದುರಿಸುತ್ತಿರುವ ಸಮಸ್ಯೆ ಪರಿಹರಿಸಲು ಅದರಲ್ಲೂ ಮುಖ್ಯವಾಗಿ ಪಟ್ಟಾ ಭೂಮಿಯಲ್ಲಿ ಪರವಾನಿಗೆ ಪಡೆಯಲು ಸಮಸ್ಯೆಯನ್ನು ನಿವಾರಿಸಲು ಮುಖ್ಯಮಂತ್ರಿಗಳಲ್ಲಿ ಮನವಿ ಮಾಡಿದರು.

ಬನ್ನೇರುಘಟ್ಟ ಜೈವಿಕ ಉದ್ಯಾನ ಸುತ್ತ ಕಲ್ಲು ಗಣಿಗಾರಿಕೆ ರದ್ದು!ಬನ್ನೇರುಘಟ್ಟ ಜೈವಿಕ ಉದ್ಯಾನ ಸುತ್ತ ಕಲ್ಲು ಗಣಿಗಾರಿಕೆ ರದ್ದು!

ಉಪಮುಖ್ಯಮಂತ್ರಿ ಜಿ. ಪರಮೇಶ್ವರ್, ಗಣಿ ಇಲಾಖೆ ಸಚಿವರಾದ ರಾಜಶೇಖರ್ ಪಾಟೀಲ್, ಲೋಕೋಪಯೋಗಿ ಇಲಾಖೆ ಸಚಿವರಾದ ಹೆಚ್ ಡಿ ರೇವಣ್ಣ, ವಿಧಾನಪರಿಷತ್ ಮಾಜಿ ಸಭಾಪತಿ ಬಸವರಾಜ್ ಹೊರಟ್ಟಿ, ಇಲಾಖೆ ನಿರ್ದೇಶಕ ಪ್ರಸನ್ನಕುಮಾರ್ ಸಭೆಯಲ್ಲಿದ್ದರು.

English summary
Chief minister HD Kumaraswamy gave instruction to simplyfy the Granite lease issues in the Belagavi assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X