ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲೇ ಕೆಎಟಿ ಪೀಠ, ಸಿಎಂ ಭರವಸೆ

|
Google Oneindia Kannada News

ಬೆಳಗಾವಿ, ಡಿ. 6 : ಕರ್ನಾ­ಟಕ ಆಡಳಿತ ನ್ಯಾಯಮಂಡಳಿಯ (ಕೆಎಟಿ) ಪೀಠವನ್ನು ಬೆಳಗಾವಿಯಲ್ಲಿಯೇ ಸ್ಥಾಪಿಸಲು ಅನುಮತಿ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದ­ರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕೆಎಟಿ ಸ್ಥಾಪನೆಗೆ ಸಿಎಂ ಒಪ್ಪಿರುವದರಿಂದ ವಕೀಲರು ಪ್ರತಿಭಟನೆ ನಿಲ್ಲಿಸುವುದಾಗಿ ತಿಳಿಸಿದ್ದಾರೆ.

ಬೆಳಗಾವಿಯಲ್ಲಿ ಕೆಎಟಿ ಪೀಠ ಸ್ಥಾಪನೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ವಕೀಲರು ಮತ್ತು ಬೆಳಗಾವಿಯ ಜನಪ್ರತಿ­ನಿಧಿಗಳು ಶುಕ್ರವಾರ ಬೆಂಗಳೂರಿಗೆ ತೆರಳಿ ಗೃಹ ಕಚೇರಿಯ ಕೃಷ್ಣಾದಲ್ಲಿ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ, ಕೆಎಟಿ ಪೀಠ ಸ್ಥಾಪನೆ ಸಂಬಂಧ ಮಾತುಕತೆ ನಡೆಸಿದರು.

ಸಿಎಂ ಸಿದ್ದರಾಮಯ್ಯ, ಕಾನೂನು ಸಚಿವ ಟಿ.ಬಿ.ಜಯಚಂದ್ರ, ಸಂಸದ ಪ್ರಕಾಶ್ ಹುಕ್ಕೇರಿ ಮುಂತಾದವರು ವಕೀಲರ ಜೊತೆ ಚರ್ಚೆ ನಡೆಸಿದರು. ನಂತರ ಮಾತನಾಡಿದ ಸಿಎಂ ಕೆಎಟಿ ಪೀಠ ಸ್ಥಾಪಿಸುವ ಸಂಬಂಧ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾ­ನಿ­ಸಲಾಗುವುದು. ನಂತರ ಕೇಂದ್ರಕ್ಕೆ ಪತ್ರ ಬರೆದು, ಒಪ್ಪಿಗೆ ಪಡೆಯಲಾ­ಗುವುದು ಎಂದು ಹೇಳಿದರು. [ಕೆಎಟಿ ಪೀಠಕ್ಕೆ ಆಗ್ರಹಿಸಿ ಸಿಎಂ ಪ್ರತಿಕೃತಿ ದಹನ]

ಸಿದ್ದರಾಮಯ್ಯ ಅವರನ್ನು ಭೇಟಿಯಾದ ನಿಯೋಗದಲ್ಲಿ ಸಂಸದರಾದ ಪ್ರಕಾಶ ಹುಕ್ಕೇರಿ, ಪ್ರಭಾಕರ ಕೋರೆ, ಶಾಸಕ ಸಂಜಯ ಪಾಟೀಲ, ಬೆಳಗಾವಿ ವಕೀಲರ ಸಂಘದ ಪ್ರಭಾರ ಅಧ್ಯಕ್ಷ ಆರ್‌.ಸಿ.ಪಾಟೀಲ ಮುಂತಾದವರಿದ್ದರು.

Siddaramaiah

ಮುಷ್ಕರ ವಾಪಸ್‌ : ಕೆಎಟಿ ಸ್ಥಾಪನೆಗೆ ಸಿಎಂ ಒಪ್ಪಿಗೆ ನೀಡಿರುವುದರಿಂದ ಶನಿವಾರ­­ದಿಂದ ಪ್ರತಿಭಟನೆ ವಾಪಸ್ ಪಡೆಯುತ್ತೇವೆ ಎಂದು ವಕೀಲರ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಎನ್‌.ಪಾಟೀಲ ಹೇಳಿದ್ದಾರೆ.

ಕೆಎಟಿಪೀಠವನ್ನು ಬೆಳಗಾವಿಯಲ್ಲಿ ಸ್ಥಾಪನೆ ಮಾಡಬೇಕು ಎಂದು ಒತ್ತಾಯಿಸಿ ಕಳೆದ ಒಂದು ವಾರದಿಂದ ವಕೀಲರು ಪ್ರತಿಭಟನೆ ನಡೆಸುತ್ತಿದ್ದರು. ಗುರುವಾರ ಕರೆ ನೀಡಿದ್ದ ಬೆಳಗಾವಿ ಬಂದ್‌ ವೇಳೆ 6 ಬಸ್ಸುಗಳಿಗೆ ಕಲ್ಲು ತೂರಾಟ ನಡೆದಿತ್ತು.

English summary
Karnataka Chief Minister Siddaramaiah assured that the KAT (Karnataka Administrative Tribunal) Bench would be established in Belagavi only.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X