ಇಂದು ಸಿದ್ದರಾಮಯ್ಯನವರ 'ನವ ಕರ್ನಾಟಕ ನಿರ್ಮಾಣ' ಯಾತ್ರೆ ಬೆಳಗಾವಿನತ್ತ

Posted By:
Subscribe to Oneindia Kannada

ಬೆಳಗಾವಿ, ಡಿಸೆಂಬರ್ 21 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೈಗೊಂಡಿರುವ 'ನವ ಕರ್ನಾಟಕ ನಿರ್ಮಾಣ' ಯಾತ್ರೆ ಇಂದು (ಗುರುವಾರ) ಬೆಳಗಾವಿ ಜಿಲ್ಲೆಗೆ ಸಾಗಿದೆ.

ಮುಂದಿನ ದಿನಗಳಲ್ಲಿ ಸರಕಾರದಿಂದಲೇ ಸೇವಾ ಲಾಲ್ ಜಯಂತಿ: ಸಿದ್ದು ಘೋಷಣೆ

ಇಂದು (ಬುಧವಾರ) ವಿಜಯಪುರದಿಂದ ಬೆಳಗ್ಗೆ 10. 40ಕ್ಕೆ ಬೆಳಗಾವಿ ಜಿಲ್ಲೆಯ ಗೋಕಾಕ್ ತಲುಪಲಿದ್ದು, ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

 CM Siddaramaiah to continue his Nava Karnataka Nirmana yatra in Belagavi district today

ಗುರುವಾರ ಬೆಳಗ್ಗೆ 10.40ಕ್ಕೆ ಗೋಕಾಕ್ ವಿಧಾನಸಭಾ ಕ್ಷೇತ್ರದಲ್ಲಿ ಜನರಲ್ ಆಸ್ಪತ್ರೆ ಉದ್ಘಾಟಿಸಲಿದ್ದಾರೆ. ಮದ್ಯಾಹ್ನ 12ಕ್ಕೆ ಕೆಪಿಸಿಸಿ ಕರೆದಿರುವ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಮಲ್ಲಮ್ಮ ಭೇಟಿ ಬಗ್ಗೆ ಸಿದ್ದರಾಮಯ್ಯ ಹೇಳಿದ್ದೇನು?

ಮದ್ಯಾಹ್ನ 1ಕ್ಕೆ ರಾಯ್ ಬಾಗ್ ಗೆ ತೆರಳಿ ವಿವಿಧ ಕಾರ್ಯಕ್ರಮಗಳಿಗೆ ಚಾಲನೆ ನೀಡಿಲಿದ್ದಾರೆ. ಬಳಿಕ 3.15ಕ್ಕೆ ಹರೋಗೇರಿಯಲ್ಲಿ ಪಾರ್ಟಿ ಮೀಟಿಂಗ್ ನಲ್ಲಿ ಭಾಗವಹಿಸಿ, ಬೆಳಗಾವಿಯಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಈಗಾಗಲೇ ಬೀದರ್, ರಾಯಚೂರು, ಬಳ್ಳಾರಿ, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಸಾವಿರಾರೂ ಕೋಟಿ ರು.ಗಳ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
CM Siddaramaiah to continue his 'Nava Karnataka Nirmana yatra' in Belagavi today. CM to inaugurate & lay foundation stones for several projects in Belagavi district.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ