ಅನಂತ್ ಕುಮಾರ್ ಹೆಗಡೆ ರಾಜಿನಾಮೆಗೆ ಒತ್ತಾಯ: ಕಾಂಗ್ರೆಸ್ ಪ್ರತಿಭಟನೆ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 30 : ಸಂವಿಧಾನ ಬದಲಿಸುವಂತೆ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಹೇಳಿಕೆ ಖಂಡಿಸಿ ಬೆಳಗಾವಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಸಂವಿಧಾನ ಬದಲಾವಣೆ ಹೇಳಿಕೆ : ಕ್ಷಮೆ ಕೋರಿದ ಅನಂತ್ ಕುಮಾರ್ ಹೆಗ್ಡೆ

ಸಂವಿಧಾನ ಬದಲಿಸುವಂತೆ ಹೇಳಿಕೆ ನೀಡಿದ ಅನಂತ್ ಕುಮಾರ್ ಅವರು ಕೂಡಲೇ ರಾಜಿನಾಮೆ ನೀಡಬೇಕು ಎಂದು ಒತ್ತಾಯಿಸಿ ಬೆಳಗಾವಿಯ ಕಾಂಗ್ರೆಸ್ ಕಚೇರಿಯಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದರು.

Congress holds protest against Anant kumar Hegde in Belgaum

ನಗರದ ಚನ್ನಮ್ಮ ವೃತ್ತದಲ್ಲಿ ಅನಂತ್ ಕುಮಾರ್ ಹೆಗಡೆ ಪ್ರತಿಕೃತಿಗೆ ಚಪ್ಪಲಿಯಲ್ಲಿ ಹೊಡೆದು ಪ್ರತಿಕೃತಿ ದಹನ ಮಾಡಿದರು. ಅನಂತ್ ಕುಮಾರ್ ಹೆಗಡೆ ಕೂಡಲೇ ರಾಜಿನಾಮೆ ನೀಡಬೇಕು ಇಲ್ಲವಾದಲ್ಲಿ ರಾಷ್ಟ್ರಪತಿಯವರು ಮಧ್ಯಪ್ರವೇಶಿಸಿ ರಾಜಿನಾಮೆ ಪಡೆಯಬೇಕು. ಅನಂತ್ ಕುಮಾರ್ ದೇಶದಲ್ಲಿ ಜಾತಿ, ಧರ್ಮದ ವಿಷ ಬೀಜ ಬಿತ್ತುತ್ತಿದ್ದಾರೆಂದು ಆರೋಪಿಸಿ ಧಿಕ್ಕಾರ ಕೂಗಿದರು. ಕಾಂಗ್ರೆಸ್ ಜಿಲ್ಲಾಧ್ಯಕ್ಷ ವಿನಯ್ ನವಲಗಟ್ಟಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Condemning the statement on constitution by union minister Anantkumar Hegde congress workers have held protest in Belgaum on Saturday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ