ಬಿಜೆಪಿ ರೈತ ಮೋರ್ಚಾದಿಂದ ಬೆಳಗಾವಿ ಕಾಂಗ್ರೆಸ್ ಕಚೇರಿ ಮುತ್ತಿಗೆ ಯತ್ನ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 28 : ಮಹಾದಾಯಿ ನದಿ ನೀರು ಹಂಚಿಕೆ ವಿವಾದ ತಾರಕ್ಕೇರಿದ್ದು ಗುರುವಾರ ಕಲಬುರಗಿ ಬಂದ್ ಗೆ ಕರೆ ನೀಡಲಾಗಿತ್ತು. ಮಹದಾಯಿ ವಿಚಾರ ಕಾಂಗ್ರೆಸ್ ರೈತ ವಿರೋಧಿ ನೀತಿ ಹಿನ್ನಲೆ ಬೆಳಗಾವಿಯಲ್ಲಿ ಬಿಜೆಪಿ ರೈತ ಮೋರ್ಚಾದಿಂದ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಪ್ರಯತ್ನಿಸಿದ ಕಾರ್ಯಕರ್ತರನ್ನು ಬಂಧಿಸಲಾಗಿದೆ.

5 ದಿನಗಳ ಪ್ರತಿಭಟನೆ ಅಂತ್ಯ, ತವರಿನತ್ತ ಮಹದಾಯಿ ಹೋರಾಟಗಾರರು

ಮೋರ್ಚಾದ ಜಿಲ್ಲಾಧ್ಯಕ್ಷ ಬಸನಗೌಡ ಸಿದ್ರಾಮನಿ ನೇತೃತ್ವದಲ್ಲಿ ನಗರದ ಚನ್ನಮ್ಮ ವೃತ್ತದಿಂದ ನಗರದ ಕ್ಲಬ್ ರಸ್ತೆಯಲ್ಲಿರುವ ಬೆಳಗಾವಿ ಗ್ರಾಮೀಣ ಕಾಂಗ್ರೆಸ್ ಕಚೇರಿ‌ವರೆಗೂ ಪ್ರತಿಭಟನಾ ಮೆರವಣಿಗೆ ಮೂಲಕ ತೆರಳಿದ ಕಾರ್ಯಕರ್ತರು ಬಳಿಕೆ ಕಾಂಗ್ರೆಸ್ ಕಚೇರಿಯನ್ನು ಮುತ್ತಿಗೆ ಹಾಕಲು ಯತ್ನಿಸಿದರು.

District congress faces Bjp protest now

ಪೊಲೀಸರು ರಸ್ತೆ ಮಧ್ಯೆಯೆ ಪ್ರತಿಭಟನಾಕಾರರನ್ನು ತಡೆದರು. ಪ್ರತಿಭಟನಾಕಾರರು ಪೊಲೀಸ್ ಮಧ್ಯೆ ನುಕುನುಗ್ಗಲು ಉಂಟಾಯಿತು. ಬಲವಂತವಾಗಿ 100 ಕ್ಕೂ ಅಧಿಕ ಬಿಜೆಪಿ ಕಾರ್ಯಕರ್ತರನ್ನು ಬಂಧಿಸಲಾಯಿತು. ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Bjp farmers wing workers are staged protest infront of district Congress office in Belgaum regarding mahadayi issues.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ