ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರ ಮುಷ್ಕರಕ್ಕೆ ಬೆಳಗಾವಿಯಲ್ಲಿ ಹಸುಗೂಸು ಬಲಿ

By Nayana
|
Google Oneindia Kannada News

ಬೆಳಗಾವಿ, ಜು.28: ಖಾಸಗಿ ಆಸ್ಪತ್ರೆ ವೈದ್ಯರು ಎನ್‌ಎಂಸಿ ಕಾಯ್ದೆ ತಿದ್ದುಪಡಿಸಿಗೆ ಆಗ್ರಹಿಸಿ ಮುಷ್ಕರ ನಡೆಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳಗಾವಿಗೆ ಈ ಮುಷ್ಕರದ ಬಿಸಿ ತಟ್ಟಿದ್ದು, ಸೂಕ್ತ ಚಿಕಿತ್ಸೆ ದೊರೆಯದೆ ಮಗು ಮೃತಪಟ್ಟಿದೆ.

ಗೋಕಾಕ ನಗರದ ನಿವಾಸಿಗಳಾದ ಬಸಪ್ಪ ಎಂಬವರ ಮಗು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಹಸುಗೂಸಿಗೆ ಸೂಕ್ತ ಚಿಕಿತ್ಸೆ ಸಿಗದೆ ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ.

ಖಾಸಗಿ ವೈದ್ಯರ ದಿಢೀರ್ ಪ್ರತಿಭಟನೆ: ರೋಗಿಗಳ ಪರದಾಟ ಖಾಸಗಿ ವೈದ್ಯರ ದಿಢೀರ್ ಪ್ರತಿಭಟನೆ: ರೋಗಿಗಳ ಪರದಾಟ

ಶುಕ್ರವಾರ ಗೋಕಾಕ ಖಾಸಗಿ ಆಸ್ಪತ್ರೆಯಲ್ಲಿ ಜನಿಸಿದ್ದ ಮಗುವನ್ನು ಶ್ವಾಸಕೋಶದ ಸಮಸ್ಯೆಯಿಂದ ಬಳಲುತ್ತಿದ್ದ ಮಗುವನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿಯ ಖಾಸಗಿ ಆಸ್ಪತ್ರೆಗೆ ತರಲಾಗಿತ್ತು. ಆದರೆ ಸರಿಯಾದ ಸಮಯದಲ್ಲಿ ವೈದ್ಯರಿಲ್ಲದೆ ಹಸುಗೂಗು ಮೃತಪಟ್ಟಿದೆ.

Doctors strike effect: Infant dies in Belagavi

ಏನಿದು ಎನ್‍ಎಂಸಿ ಮಸೂದೆ?: ಕೇಂದ್ರ ಸರ್ಕಾರ ವೈದ್ಯಕೀಯ ಶಿಕ್ಷಣ ಕ್ಷೇತ್ರ ಹಾಗೂ ವೈದ್ಯ ವೃತ್ತಿಯಲ್ಲಿ ಪಾರದರ್ಶಕತೆ ತರುವ ಉದ್ದೇಶದಿಂದ 'ರಾಷ್ಟ್ರೀಯ ವೈದ್ಯಕೀಯ ಆಯೋಗ-2017' ವಿಧೇಯಕವನ್ನು ಲೋಕಸಭೆಯಲ್ಲಿ ಮಂಡಿಸಲಾಗಿತ್ತು. ಈಗಿರುವ ಭಾರತೀಯ ವೈದ್ಯಕೀಯ ಪರಿಷತ್ (ಎಂಸಿಐ) ಅನ್ನು ವಿಸರ್ಜಿಸಿ ಅದರ ಸ್ಥಾನದಲ್ಲಿ ರಾಷ್ಟ್ರೀಯ ವೈದ್ಯಕೀಯ ಆಯೋಗ ರಚಿಸುವುದು ಈ ವಿಧೇಯಕದ ಪ್ರಮುಖ ಉದ್ದೇಶವಾಗಿದೆ.

ಹರಿಗೆ ಇನ್ನುಳಿದ ತುರ್ತು ಚಿಕಿತ್ಸೆಗೆ ಅನುಮತಿ ಇರುತ್ತದೆ. ಸರ್ಕಾರವು ಎನ್‌ಎಂಸಿ ಕಾಯ್ದೆ ಹಿಂಪಡೆದರೆ ಅಥವಾ ಭರವಸೆ ನೀಡಿದರೆ ಮಾತ್ರ ಮುಷ್ಕರವನ್ನು ಕೈಬಿಡಲಾಗುತ್ತದೆ ಎಂದು ತಿಳಿಸಿದ್ದಾರೆ. ವೈದ್ಯರ ವಿರೋಧ ಹಿನ್ನೆಲೆಯಲ್ಲಿ ಎನ್‌ಎಂಸಿ ಮಸೂದೆಯನ್ನು ಪರಿಶೀಲನೆಗಾಗಿ ಸಂಸದೀಯ ಸಮಿತಿಗೆ ನೀಡಬೇಕೆಂದು ಪ್ರತಿ ಪಕ್ಷಗಳಿಂದ ಈಗಾಗಲೇ ಒತ್ತಾಯ ಮಾಡಲಾಗಿದೆ.

English summary
Infant baby which was brought from Gokak was died in Belgaum on Saturday morning. Parents have alleged that the baby was brought for treatment but the private hospital was denied the treatment as doctors have called for strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X