ಬಿಜೆಪಿ ಬಿಕ್ಕಟ್ಟು ತಾರಕಕ್ಕೆ, ರಾಯಣ್ಣ ಬ್ರಿಗೇಡ್ ನಲ್ಲಿ ಈಶ್ವರಪ್ಪ

Posted By:
Subscribe to Oneindia Kannada

ಬೆಳಗಾವಿ, ಡಿಸೆಂಬರ್ 07: ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರ ವಿರೋಧದ ನಡುವೆಯೂ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ಚಟುವಟಿಕೆಗೆ ಮಾಜಿ ಸಚಿವ ಕೆಎಸ್ ಈಶ್ವರಪ್ಪ ಅವರು ಚಾಲನೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಬಿಕ್ಕಟ್ಟು ಉಲ್ಬಣಗೊಳ್ಳಲು ಕಾರಣರಾಗಿದ್ದಾರೆ.

ಬೆಳಗಾವಿಯ ಖಾನಾಪುರ ತಾಲೂಕಿನ ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಬ್ರಿಗೇಡ್ ವತಿಯಿಂದ ಬೃಹತ ಸಮಾವೇಶ ನಡೆಸಲಾಗಿದೆ. ಕಾರ್ಯಕ್ರಮದಲ್ಲಿ ಬ್ರಿಗೇಡ್‌ನ ರಾಜ್ಯ, ಜಿಲ್ಲಾ ಹಾಗೂ ತಾಲೂಕು ಮಟ್ಟದ ಪದಾಧಿಕಾರಿಗಳು ಸೇರಿದಂತೆ ಸುಮಾರು 3 ಸಾವಿರ ಮಂದಿ ಪ್ರತಿಜ್ಞಾವಿಧಿ ಸ್ವೀಕಾರ ಮಾಡಿದರು.

Eshwarappa in Sangolli RayannaBrigade’s oath-administering programme

ಈ ಕಾರ್ಯಕ್ರಮದಲ್ಲಿ ಪ್ರತಿಪಕ್ಷ ನಾಯಕ ಕೆ. ಎಸ್ ಈಶ್ವರಪ್ಪ. ಕಾಗಿನೆಲೆ ಪೀಠದ ನಿರಂಜನಾನಂದ ಸ್ವಾಮೀಜಿ, ಉಪ್ಪಾರ ಸಮಾಜದ ಪುರುಷೋತ್ತಮಾನಂದ ಸ್ವಾಮೀಜಿ ಹಾಗೂ ರಾಯಣ್ಣ ಬ್ರಿಗೇಡ್‌ ಅಧ್ಯಕ್ಷ ಕೆ ವಿರುಪಾಕ್ಷಪ್ಪ ಸೇರಿದಂತೆ ಹಲವು ಗಣ್ಯರು ಭಾಗಿಯಾಗಿದ್ದರು.

ರಾಯಣ್ಣ ಬ್ರಿಗೇಡ್ ನ ರಾಜ್ಯ ಸಂಚಾಲಕ ಲಕ್ಷ್ಮಣ ತಪಸಿ ಮತ್ತು ಭೋಜರಾಜ ಕರೂದಿ, ಜಿಲ್ಲಾ ಘಟಕದ ಸಂಚಾಲಕರಾದ ವಿಲಾಸ ಪವಾರ, ವಸಂತ ದಳವಾಯಿ, ಹಣಮಂತ ಉಪ್ಪಾರ, ಸಂಗೊಳ್ಳಿ ರಾಯಣ್ಣ ಸ್ಮಾರಕ ಅಭಿವೃದ್ಧಿ ಹೋರಾಟ ಸಮಿತಿಯ ಶಂಕರ ಸೋನೊಳಿ ಸೇರಿದಂತೆ ಹಲವಾರು ಮಂದಿ ಪಾಲ್ಗೊಂಡಿದ್ದರು.

ಬಿಜೆಪಿಯನ್ನು ಮುಂದಿನ ಚುನಾವಣೆಯಲ್ಲಿ ಅಧಿಕಾರಕ್ಕೆ ತರುವುದು ನಮ್ಮ ಗುರಿ, ಬ್ರಿಗೇಡ್ ನಿಂದ ಬಿಜೆಪಿಗೆ ಯಾವುದೇ ಹಾನಿಯಾಗುವುದಿಲ್ಲ.ದಲಿತರು, ಅಲ್ಪ ಸಂಖ್ಯಾತರು ಹಾಗೂ ಹಿಂದುಳಿದ ವರ್ಗಗಳ ಏಳಿಗೆಗಾಗಿ ಶ್ರಮಿಸಬೇಕಿದೆ ಎಂದು ಕೆಎಸ್ ಈಶ್ವರಪ್ಪ ಹೇಳಿದರು.

1831ರ ಜನವರಿ 26ರಂದು ಸಂಗೊಳ್ಳಿ ರಾಯಣ್ಣ ಅವರನ್ನು ಬ್ರಿಟಿಷರು ನಂದಗಡದ ಮರಕ್ಕೆ ನೇಣು ಹಾಕಿದ್ದರು. ಈ ಹಿನ್ನೆಲೆಯಲ್ಲಿ ರಾಯಣ್ಣ ಬ್ರಿಗೇಡ್ ಕಾರ್ಯಕ್ರಮವನ್ನು ಇಲ್ಲೇ ಹಮ್ಮಿಕೊಳ್ಳಲಾಗಿತ್ತು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Despite a warning from the BJP State president, senior party leader K.S. Eshwarappa participated in the Sangolli Rayanna Brigade programme organised here on Tuesday(December 06)
Please Wait while comments are loading...