ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನ,16ರಂದು ಸುವರ್ಣ ಸೌಧ ಎದುರು ಮಾಜಿ ಸಿಎಂ ಕೆ.ಸಿ.ರೆಡ್ಡಿ ಮೊಮ್ಮಗಳಿಂದ ಧರಣಿ

|
Google Oneindia Kannada News

ಬೆಳಗಾವಿ, ನವೆಂಬರ್ 15: ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಪ್ರತಿಮೆಯನ್ನು ವಿಧಾನ ಸೌಧದ ಪಶ್ಚಿಮ ದ್ವಾರದ ಮುಂದೆ ಸ್ಥಾಪಿಸುವಂತೆ ಒತ್ತಾಯಿಸಿ ಅವರ ಮೊಮ್ಮಗಳು ಕೆ.ಸಿ.ವಸಂತ ಕವಿತಾ ಅವರು ನಾಳೆ (ನ.16) ಬೆಳಗಾವಿಯ ಸುವರ್ಣ ಸೌಧದ ಎದುರು ಧರಣಿ ನಡೆಸಲ್ಲಿದ್ದಾರೆ.

ರಾಜ್ಯದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ಹಾಗೂ ವಿಧಾನ ಸೌಧ ನಿರ್ಮಾಣಕ್ಕೆ ಅಡಿಪಾಯ ಹಾಕಿದ್ದ ರಾಜ್ಯದ ಪ್ರಥಮ ಮುಖ್ಯಮಂತ್ರಿ ಕೆ.ಸಿ.ರೆಡ್ಡಿ ಅವರ ಮೂರ್ತಿಯನ್ನು ಯಾವುದೇ ಸರಕಾರಗಳು ವಿಧಾನ ಸೌಧದೆದುರು ನಿರ್ಮಿಸಲು ಮುಂದಾಗಿಲ್ಲ. ರೆಡ್ಡಿ ಜನಾಂಗದ ಶಾಸಕರು, ಸಚಿವರು ಈ ಬಗ್ಗೆ ಮಾತನಾಡದೆ ಇರುವುದು ದುರ್ದೈವದ ಸಂಗತಿಯಾಗಿದೆ. ಸರಕಾರಗಳು ರೆಡ್ಡಿ ಅವರನ್ನು ನಿರ್ಲಕ್ಷಿಸಿವೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

Ex CM KC Reddy's grand daughter protest at Belagavi on Nov 16th for KC Reddy's statue installed

ಕಳೆದ ಅ.12 ರೊಳಗೆ ಪ್ರತಿಮೆ ಸ್ಥಾಪನೆಗೆ ಕ್ರಮ ಕೈಗೊಳ್ಳಬೇಕು ಎಂದು ಸಿಎಂ ಸೇರಿದಂತೆ ಸಭಾಧ್ಯಕ್ಷರಿಗೆ, ಸಭಾಪತಿಗಳಿಗೆ ಮನವಿ ಮಾಡಿಕೊಳ್ಳಲಾಗಿತ್ತು. ಆದರೆ ಸರಕಾರ ಪ್ರತಿಮೆ ಸ್ಥಾಪನೆಗೆ ಯಾವುದೇ ನಿರ್ಧಾರ ಕೈಗೊಂಡಿಲ್ಲ ಎಂದು ಅಸಮಧಾನ ವ್ಯಕ್ತಪಡಿಸಿದ್ದಾರೆ.

English summary
Karnataka first chief minister KC Reddy's grand daughter KC Vasant Kavita will protest on November 16th at Suvarna Soudha, Belagavi for demanding KC Reddy's statue be installed at Vidhana Soudha
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X