ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕರ್ನಾಟಕದ ಎಲ್ಲ ಜಿಲ್ಲಾ ಕೇಂದ್ರದಲ್ಲೂ ಉಚಿತ ವೈ ಫೈ

By Kiran B Hegde
|
Google Oneindia Kannada News

ಬೆಳಗಾವಿ, ಡಿ. 19: ಕೇಂದ್ರ ಸರ್ಕಾರ ದೇಶದ 25 ನಗರಗಳಿಗೆ ಉಚಿತ ವೈ ಫೈ ನೀಡುವುದಾಗಿ ಘೋಷಿಸಿತ್ತು. ಇದೀಗ ರಾಜ್ಯ ಸರ್ಕಾರದ ಸರದಿ.

ಕರ್ನಾಟಕದ ಎಲ್ಲ ಜಿಲ್ಲೆಗಳಿಗೂ ಉಚಿತ ವೈ ಫೈ ಸೌಲಭ್ಯ ಒದಗಿಸುವ ಯೋಜನೆ ಇದೆ ಎಂದು ರಾಜ್ಯ ಸರ್ಕಾರ ತಿಳಿಸಿದೆ. ಈ ಕುರಿತು ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಎಸ್.ಆರ್. ಪಾಟೀಲ ವಿಧಾನಸಭೆ ಚಳಿಗಾಲದ ಅಧಿವೇಶನದಲ್ಲಿ ಮಾಹಿತಿ ನೀಡಿದ್ದಾರೆ.

srpatil

ಕಾಂಗ್ರೆಸ್ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಕೇಳಿದ್ದ ಪ್ರಶ್ನೆಗೆ ಎಸ್.ಆರ್. ಪಾಟೀಲ ಲಿಖಿತ ಉತ್ತರ ನೀಡಿದ್ದಾರೆ. ಪ್ರಸ್ತುತ ಬೆಂಗಳೂರು ಹಾಗೂ ಜಿಲ್ಲೆಗಳ ಪ್ರಮುಖ ಪ್ರದೇಶಗಳಲ್ಲಿ ಉಚಿತ ವೈ ಫೈ ಸೇವೆಗಾಗಿ ವಿವಿಧ ಕಂಪನಿಗಳಿಂದ ಬಿಡ್‌ ಆಹ್ವಾನಿಸಲಾಗಿದೆ. ಅಂತಿಮ ತೀರ್ಮಾನವನ್ನು ಇನ್ನೂ ತೆಗೆದುಕೊಳ್ಳಬೇಕಾಗಿದೆ ಎಂದು ಸಚಿವರು ಹೇಳಿದ್ದಾರೆ. [ಇಡೀ ವಿಶ್ವಕ್ಕೇ ವೈ ಫೈ : ಅಮೆರಿಕ ಕನಸು]

ಕರ್ನಾಟಕದಲ್ಲಿ ಈಗಾಗಲೇ ಬೆಂಗಳೂರು, ಮೈಸೂರು ಹಾಗೂ ಬಾಗಲಕೋಟೆ ನಗರಗಳ ಕೆಲವು ಭಾಗಗಳಲ್ಲಿ ಈಗಾಗಲೇ ಉಚಿತ ವೈ ಫೈ ಸಂಪರ್ಕ ಕಲ್ಪಿಸಲಾಗಿದೆ. [ವೈ ಫೈ ವಿಕಿರಣ ಮರಕ್ಕೆ ಮಾರಕ?]

English summary
The State government is considering extending the free Wi-Fi facility in all districts center of the state. Minister for IT and Biotechnology S.R. Patil told it in the written reply to Congress member Yashavantarayagouda Patil in the Assembly.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X