ಬೆಳಗಾವಿ : ಮಹಿಳೆ ಮೇಲೆ ಗ್ಯಾಂಗ್ ರೇಪ್, ಇಬ್ಬರ ಬಂಧನ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 25 : ವಿಜಯಪುರದ ದಾನಮ್ಮ ಮೇಲಿನ ಅತ್ಯಾಚಾರ, ಕೊಲೆ ಪ್ರಕರಣದ ನೆನಪು ಮಾಸುವ ಮುನ್ನ ರಾಜ್ಯದಲ್ಲಿ ಮತ್ತೊಂದು ನಿರ್ಭಯ ಪ್ರಕರಣ ನಡೆದಿದೆ.

ಭಾನುವಾರ ತಡರಾತ್ರಿ ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಘೋಡಗೇರಿ ಗ್ರಾಮದಲ್ಲಿ ಬಹಿರ್ದೆಸೆಗೆ ತೆರಳಿದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ವಿಜಯಪುರ ದಲಿತ ಬಾಲಕಿ ಅತ್ಯಾಚಾರ ಪ್ರಕರಣದಲ್ಲಿ 4 ಜನರ ಬಂಧನ

ಯಮಕನಮರಡಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಆರೋಪಿಗಳನ್ನು ನವೀನ ಕುಮಾರ ಕಾಂಬಳೆ (29) ಹಾಗೂ ಶಿವಾನಂದ ಯರಗಟ್ಟಿ (30) ಎಂದು ಗುರುತಿಸಲಾಗಿದೆ.

Gang-rape in Belagavi, Two arrested

ಮಹಿಳೆ ರಾತ್ರಿ ಬಹಿರ್ದೆಸೆಗೆಂದು ಮನೆಯಿಂದ ಹೋರಹೋಗಿದ್ದರು. ಈ ಸಂದರ್ಭದಲ್ಲಿ ಅದೇ ಗ್ರಾಮದ ಕುಮಾರ ಕಾಂಬಳೆ ಮತ್ತು ಶಿವಾನಂದ ಯರಗಟ್ಟಿ ಹಿಂಬಾಲಿಸಿಕೊಂಡು ಹೋಗಿ ಸಾಮೂಹಿಕವಾಗಿ ಅತ್ಯಾಚಾರ ನಡೆಸಿದ್ದಾರೆ.

ಸಂತ್ರಸ್ತೆ ಮನೆಗೆ ಬಂದು ನಡೆದ ವಿಷಯವನ್ನು ತಿಳಿಸಿ ಪೊಲೀಸರಿಗೆ ದೂರು ನೀಡಿದ್ದಾರೆ. ಸದ್ಯಕ್ಕೆ ಸಂತ್ರಸ್ತೆಯನ್ನು ವೈದ್ಯಕೀಯ ತಪಾಸಣೆಗಾಗಿ ಜಿಲ್ಲಾಸ್ಪತ್ರೆಯಲ್ಲಿ ದಾಖಲಿಸಲಾಗಿದೆ.

ಯಮಕನಮರಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳ ವೈದ್ಯಕೀಯ ತಪಾಸಣೆಗೆ ಹುಕ್ಕೇರಿ ಸರಕಾರಿ ಆಸ್ಪತ್ರೆಗೆ ಪೊಲೀಸರು ಕರೆದುಕೊಂಡು ಹೋಗಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Woman was allegedly gang-raped in Belagavi, Karnataka. Police arrested two youths in connection with the case.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ