ಗೋವಾದಿಂದ ಕರೆತಂದು ಬೆಳಗಾವಿಯಲ್ಲಿ ಕೊಲೆ ಮಾಡಿದ್ರು
ಬೆಳಗಾವಿ, ಅಕ್ಟೋಬರ್ 30 : ಎಂ.ಎಂ.ಕಲಬುರ್ಗಿ ಅವರ ಹತ್ಯೆ ಪ್ರಕರಣದ ಆರೋಪಿ ರುದ್ರ ಪಾಟೀಲ್ ರೇಖಾಚಿತ್ರಕ್ಕೆ ಹೋಲುವ ಅಪರಿಚಿತ ಶವ ಬೆಳಗಾವಿಯಲ್ಲಿ ಪತ್ತೆಯಾಗಿತ್ತು. ಗೋವಾದಿಂದ ಆಗಮಿಸಿದ್ದ ಇಬ್ಬರು ಗುಂಡು ಹಾರಿಸಿ ವ್ಯಕ್ತಿಯನ್ನು ಕೊಲೆ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ.
ಅಕ್ಟೋಬರ್ 28ರಂದು ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಮಾಣಿಕವಾಡಿ ಗ್ರಾಮದಲ್ಲಿ ಅಪರಿಚತ ಶವ ಪತ್ತೆಯಾಗಿತ್ತು. ಶವದ ತಲೆ, ಎದೆ ಮತ್ತು ಹೊಟ್ಟೆ ಭಾಗಕ್ಕೆ ಗುಂಡು ತಗುಲಿತ್ತು. ಬೆಳಗಾವಿ ಪೊಲೀಸರು ಈ ಶವ ಯಾರದ್ದು? ಎನ್ನುವ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. [ಕಲಬುರ್ಗಿ ಕೊಂದವ ಶವವಾಗಿ ಪತ್ತೆ?]

ಅಪರಿಚಿತ ಶವ ಕಲಬುರ್ಗಿ ಅವರ ಹತ್ಯೆಯ ಮಾಸ್ಟರ್ ಮೈಂಡ್ ರುದ್ರ ಪಾಟೀಲ್ ಅವರದ್ದು ಎಂದು ಶಂಕಿಸಲಾಗಿದ್ದು, ಈ ಕುರಿತು ತನಿಖೆ ನಡೆಯುತ್ತಿದೆ. ಗೋವಾದಿಂದ ಆಗಮಿಸಿದ್ದ ಇಬ್ಬರು ವ್ಯಕ್ತಿಗಳು ರುದ್ರ ಪಾಟೀಲ್ ಹೋಲುವ ಈ ವ್ಯಕ್ತಿಯನ್ನು ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ಪೊಲೀಸರಿಗೆ ಮಾಹಿತಿ ಲಭ್ಯವಾಗಿದೆ. [ಕಲಬುರ್ಗಿ ಹತ್ಯೆಯಾಗಿ 2 ತಿಂಗಳು : ಎತ್ತ ಸಾಗಿದೆ ತನಿಖೆ?]
ಶವದ ದೇಹದಲ್ಲಿರುವ ಗುಂಡುಗಳು ಮತ್ತು ಶವದ ಅಕ್ಕಪಕ್ಕ ಸಿಕ್ಕಿರುವ ಗುಂಡುಗಳನ್ನು ಪರಿಶೀಲನೆ ನಡೆಸಿದ ಪೊಲೀಸರು ಕಂಟ್ರಿ ಮೇಡ್ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಕೊಲೆ ಮಾಡಿದ್ದಾರೆ ಎಂದು ತಿಳಿಸಿದ್ದಾರೆ. ಆದರೆ, ಶವ ಯಾರದ್ದು ಎನ್ನುವುದು ಮಾತ್ರ ಇನ್ನೂ ನಿಗೂಢವಾಗಿದೆ. [ಕಲಬುರ್ಗಿ ಹತ್ಯೆ ಸಂಚು ರೂಪಿಸಿದ್ದು ರುದ್ರ ಪಾಟೀಲ್]
ಡಿಎನ್‌ಎ ಪರೀಕ್ಷೆ : ಅಪರಿಚಿತ ಶವ ರುದ್ರ ಪಾಟೀಲ್ ಅವರದ್ದು ಇರಬಹುದು ಎಂದು ಶಂಕಿಸಿರುವ ಪೊಲೀಸರು ಪಾಟೀಲ್ ಅವರ ಪೋಷಕರ ಡಿಎನ್‌ಎ ಸ್ಯಾಂಪಲ್‌ಗಳನ್ನು ಸಂಗ್ರಹಣೆ ಮಾಡಲು ಮುಂದಾಗಿದ್ದಾರೆ. ಈ ಕುರಿತು ಪೋಷಕರಿಗೂ ಮಾಹಿತಿ ರವಾನಿಸಲಾಗಿದೆ.
ರುದ್ರ ಪಾಟೀಲ್‌ಗಾಗಿ ಕರ್ನಾಟಕ ಮತ್ತು ಮಹಾರಾಷ್ಟ್ರ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ. ಎಂ.ಎಂ.ಕಲಬುರ್ಗಿ, ಗೋವಿಂದ ಪನ್ಸಾರೆ, ನರೇಂದ್ರ ದಾಬೋಲ್ಕರ್ ಹತ್ಯೆ ಪ್ರಕರಣ ಮತ್ತು ಗೋವಾದಲ್ಲಿ ನಡೆದ ಬಾಂಬ್ ಸ್ಫೋಟ ಪ್ರಕರಣದ ತನಖೆ ನಡೆಸುತ್ತಿರುವ ಎನ್‌ಐಎ ಸಹ ಪಾಟೀಲ್‌ಗಾಗಿ ಹುಡುಕಾಟ ನಡೆಸುತ್ತಿದೆ.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Bengaluru Property: ಬೆಂಗಳೂರಿನ ಆಸ್ತಿದಾರರೇ ನಿಮ್ಮ ಆಸ್ತಿ ಉಳಿಸಿಕೊಳ್ಳಲು ಕೊನೆಯ ಅವಕಾಶ: ಈ ಎಚ್ಚರಿಕೆ ಯಾರಿಗೆಲ್ಲ ಅನ್ವಯ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications