ವಿಟಿಯು ಉಪಕುಲಪತಿ ಡಾ.ಎಚ್.ಮಹೇಶಪ್ಪ ಅಮಾನತು

Posted By:
Subscribe to Oneindia Kannada

ಬೆಳಗಾವಿ, ಮಾರ್ಚ್ 15 : ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ಉಪ ಕುಲಪತಿ ಡಾ.ಎಚ್.ಮಹೇಶಪ್ಪ ಅವರನ್ನು ಅಮಾನತು ಮಾಡಲಾಗಿದೆ. ವಿವಿಯಲ್ಲಿ ನಡೆದ ನೇಮಕಾತಿ ಅವ್ಯವಹಾರದ ಆರೋಪದ ಮೇಲೆ ಅಮಾನತು ಮಾಡಲಾಗಿದೆ.

ಮಂಗಳವಾರ ರಾಜ್ಯಪಾಲ ವಜುಭಾಯಿ ವಾಲಾ ಅವರು ಡಾ.ಎಚ್.ಮಹೇಶಪ್ಪ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. ವಿವಿಯಲ್ಲಿ ನಡೆದ ಅವ್ಯವಹಾರದ ಬಗ್ಗೆ ವರದಿ ನೀಡಲು ನ್ಯಾ.ಕೇಶವನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು. [16 ಕಾಲೇಜುಗಳಿಗೆ ಸ್ವಾಯತ್ತತೆ ನೀಡಿದ ವಿಟಿಯು]

vajubhai vala

ಈ ಸಮಿತಿಯು ಕೆಲವು ದಿನಗಳ ಹಿಂದೆ ರಾಜ್ಯಪಾಲರಿಗೆ ವರದಿ ನೀಡಿತ್ತು ಮತ್ತು ಅವ್ಯವಹಾರ ನಡೆದಿದೆ ಎಂದು ಹೇಳಿತ್ತು. ಈ ವರದಿ ಅನ್ವಯ ಎಚ್.ಮಹೇಶಪ್ಪ ಅವರಿಗೆ ಶೋಕಾಸ್ ನೋಟಿಸ್ ಜಾರಿಗೊಳಿಸಲಾಗಿತ್ತು.

ಜವನರಿ 29ರಂದು ಹೊರಡಿಸಿದ್ದ ನೋಟಿಸ್‌ಗೆ ಸಮರ್ಪಕವಾಗಿ ಉತ್ತರ ನೀಡಿದ ಕಾರಣ ಎಚ್.ಮಹೇಶಪ್ಪ ಅವರನ್ನು ಅಮಾನತು ಮಾಡಿ ರಾಜ್ಯಪಾಲರು ಆದೇಶ ಹೊರಡಿಸಿದ್ದಾರೆ. ಕುಲಸಚಿವರಿಗೆ ಪ್ರಭಾರಿ ಉಪ ಕುಲಪತಿಯಾಗಿ ಅಧಿಕಾರ ವಹಿಸಿಕೊಳ್ಳಲು ಸೂಚಿಸಿದ್ದಾರೆ.

ಮುಂದೇನು? : ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಎಚ್.ಮಹೇಶಪ್ಪ ಅವರನ್ನು ಅಮಾನತು ಮಾಡಲಾಗಿದೆ. ಉಪಕುಪಪತಿಯಾಗಿ ಅಧಿಕಾರ ವಹಿಸಿಕೊಳ್ಳುವವರು ಅವರ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು ನೀಡಿದರೆ, ಹಗರಣದ ಬಗ್ಗೆ ಪೊಲೀಸರು ತನಿಖೆ ನಡೆಸಲಿದ್ದಾರೆ. ಆಗ ಮಹೇಶಪ್ಪ ಅವರನ್ನು ಬಂಧಿಸುವ ಸಾಧ್ಯತೆಯೂ ಇದೆ.

ಏನಿದು ಹಗರಣ? : ಹಲವು ವರ್ಷಗಳಿಂದ ವಿವಿಯಲ್ಲಿ ಗುತ್ತಿಗೆ ಆಧಾರದಲ್ಲಿ ಕಾರ್ಯನಿರ್ವಹಿಸುತ್ತಿದ್ದ 319 ಬೋಧಕೇತರ ಸಿಬ್ಬಂದಿಯನ್ನು ಖಾಯಂಗೊಳಿಸಲಾಗಿತ್ತು. ನ್ಯಾಯಾಲಯದ ಆದೇಶದಂತೆ ಗರಿಷ್ಠ 100 ಮಂದಿಯನ್ನು ಮಾತ್ರ ಖಾಯಂಗೊಳಿಸಬಹುದು. ಖಾಯಂ ಪ್ರಕ್ರಿಯೆಯಲ್ಲಿ ರೋಸ್ಟರ್ ನಿಯಮವನ್ನು ಪಾಲನೆ ಮಾಡಿಲ್ಲ ಎಂಬುದು ಆರೋಪವಾಗಿತ್ತು. ಈ ಬಗ್ಗೆ ತನಿಖೆ ನಡೆಸಲು ನ್ಯಾ.ಕೇಶವನಾರಾಯಣ ನೇತೃತ್ವದಲ್ಲಿ ಸಮಿತಿ ರಚನೆ ಮಾಡಲಾಗಿತ್ತು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka governor Vajubhai Vala on Tuesday, March 15, 2016 suspended Dr.H.Maheshappa Vice-Chancellor of Visvesvaraya Technological University (VTU), Belagavi. Dr.H.Maheshappa suspended after Justice K.N.Keshavanarayana fact-finding committee report submitted to governor about recruitment scam in University.
Please Wait while comments are loading...