ಕರ್ನಾಟಕ ಚುನಾವಣೆ : ಎಂಇಎಸ್ ಟಿಕೆಟ್‌ಗಾಗಿ ಭಾರೀ ಪೈಪೋಟಿ

Posted By: Lekhaka
Subscribe to Oneindia Kannada

ಬೆಳಗಾವಿ, ಏಪ್ರಿಲ್ 08 : ಕರ್ನಾಟಕದ ವಿಧಾನಸಭೆ ಚುನಾವಣೆಯಲ್ಲಿ ಎಂಇಎಸ್‌ನ ಇಬ್ಬರು ಶಾಸಕರಿಗೆ ಟಿಕೆಟ್ ಕೈ ತಪ್ಪುವ ಆತಂಕ ಎದುರಾಗಿದೆ. ಟಿಕೆಟ್ ಹಂಚಿಕೆ ವಿಚಾರದಲ್ಲಿ ಭಿನ್ನಮತ ಉಂಟಾಗಿದೆ.

ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್) ನ ಇಬ್ಬರು ಹಾಲಿ ಶಾಸಕರಿಗೆ ಟಿಕೆಟ್ ಕೈ ತಪ್ಪಲಿದೆಯೇ? ಎಂಬ ಪ್ರಶ್ನೆ ಎದ್ದಿದೆ. ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ ಸಂಭಾಜಿ ಪಾಟೀಲ್ ಮತ್ತು ಖಾನಾಪುರ ಕ್ಷೇತ್ರದಿಂದ ಅರವಿಂದ್ ಪಾಟೀಲ್ ಅವರು ಶಾಸಕರಾಗಿ 2013ರ ಚುನಾವಣೆಯಲ್ಲಿ ಆಯ್ಕೆಯಾಗಿದ್ದರು.

ಕೆಲವು ದಿನಗಳ ಹಿಂದೆ ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಸಂಭಾಜಿ ಪಾಟೀಲ್ ಕಾಂಗ್ರೆಸ್ ಬೆಂಬಲಿಸಿದ್ದರು. ಅರವಿಂದ ಪಾಟೀಲ್ ಅವರು ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಹಾಕಿದ್ದರು. ಈಗ ಎಂಇಎಸ್‌ನಲ್ಲಿ ಟಿಕೆಟ್‌ಗಾಗಿ ಪೈಪೋಟಿ ನಡೆಯುತ್ತಿದೆ.

Karnataka elections 2018 : Lobbying for MES ticket

ಹಾಲಿ ಇಬ್ಬರು ಶಾಸಕರಿಗೂ ಟಿಕೆಟ್ ನೀಡಲು ವಿರೋಧ ವ್ಯಕ್ತವಾಗಿದೆ. ಆದ್ದರಿಂದ, ಮಹಾರಾಷ್ಟ್ರದ ನಾಯಕರು ಕರ್ನಾಟಕದ ಚುನಾವಣೆಯಲ್ಲಿ ಯಾರು ಅಭ್ಯರ್ಥಿಗಳಾಗಬೇಕು? ಎಂದು ತೀರ್ಮಾನ ಕೈಗೊಳ್ಳಲಿದ್ದಾರೆ.

ಎನ್‌ಸಿಪಿ ಮುಖ್ಯಸ್ಥ ಶರದ್ ಪವಾರ್ ಮತ್ತು ಎನ್.ಡಿ.ಪಾಟೀಲ್ ಅವರು ಕರ್ನಾಟಕ ವಿಧಾನಸಭೆ ಚುನಾವಣೆಗೆ ಅಭ್ಯರ್ಥಿಗಳನ್ನು ಅಂತಿಮಗೊಳಿಸಲಿದ್ದಾರೆ. ಎರಡು ದಿನದಲ್ಲಿ ಎಂಇಎಸ್ ಅಭ್ಯರ್ಥಿಗಳು ಯಾರು? ಎಂಬ ಘೋಷಣೆಯಾಗುವ ಸಾಧ್ಯತೆ ಇದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
With the assembly elections just a couple of days away, the lobbying for tickets in the The Maharashtra Ekikaran Samiti (MES) is getting intense in Belagavi district. Two sitting MLA's Arvind Patil and Sambhaji Patil may miss ticket in Karnataka assembly elections 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ