ಕೆಎಂಪಿಎ ಕಾಯ್ದೆ ವಿವಾದ, ಶಾಸಕರ ಅಭಿಪ್ರಾಯ ಸಂಗ್ರಹ

Posted By: Gururaj
Subscribe to Oneindia Kannada

ಬೆಳಗಾವಿ, ನವೆಂಬರ್ 15 : 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017' ಕುರಿತು ಕಾಂಗ್ರೆಸ್ ಪಕ್ಷದಲ್ಲಿ ಹಗ್ಗ-ಜಗ್ಗಾಟ ನಡೆಯುತ್ತಿದೆ. ಇಂದು ಶಾಸಕಾಂಗ ಪಕ್ಷದ ಸಭೆ ನಡೆಯಲಿದ್ದು, ಶಾಸಕರ ಅಭಿಪ್ರಾಯ ಸಂಗ್ರಹಣೆ ನಡೆಯಲಿದೆ.

ಆರೋಗ್ಯ ಸಚಿವ ರಮೇಶ್ ಕುಮಾರ್ ಮಸೂದೆ ಮಂಡನೆ ಮಾಡಬೇಕು ಎಂದು ಪಟ್ಟು ಹಿಡಿದಿದ್ದಾರೆ. ಅತ್ತ ವೈದ್ಯರು ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದಾರೆ. ಇದರಿಂದ ಜನರು ಸಂಕಷ್ಟಕ್ಕೆ ಸಿಲುಕಿದ್ದು ಸೂಕ್ತ ಚಿಕಿತ್ಸೆ ಸಿಗದೆ ರೋಗಿಗಳು ಸಾವನ್ನಪ್ಪುತ್ತಿದ್ದಾರೆ.

ವೈದ್ಯರ ಧರಣಿ: ಆರೋಗ್ಯ ಮಂತ್ರಿಯ ಹಠಮಾರಿತನಕ್ಕೆ ಇನ್ನೆಷ್ಟು ಬಲಿ?

KMPA act issue : Congress Legislature Party to meet on Nov 15

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳಗಾವಿ ಸುವರ್ಣವಿಧಾನಸೌಧದಲ್ಲಿ ಇಂದು ಬೆಳಗ್ಗೆ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಮಸೂದೆ ಮಂಡನೆ ಮಾಡಬೇಕೆ?, ಬೇಡವೇ? ಎಂದು ಅವರು ಶಾಸಕರ ಅಭಿಪ್ರಾಯವನ್ನು ಸಂಗ್ರಹಣೆ ಮಾಡಲಿದ್ದಾರೆ.

ಸಚಿವ ಸ್ಥಾನ ತೊರೆಯುವ ಬೆದರಿಕೆ ಹಾಕಿದ ರಮೇಶ್ ಕುಮಾರ್?

ಕರ್ನಾಟಕ ಹೈಕೋರ್ಟ್ ನಿವೃತ್ತ ಮುಖ್ಯ ನ್ಯಾಯಮೂರ್ತಿ ವಿಕ್ರಂಜಿತ್ ಸೇನ್ ನೇತೃತ್ವದ ತಜ್ಞರ ಸಮಿತಿ ಶಿಫಾರಸಿನ ಅನ್ವಯ 'ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಮಸೂದೆ (ತಿದ್ದುಪಡಿ) 2017' ಮಸೂದೆ ರೂಪಿಸಲಾಗಿದೆ.

ವೈದ್ಯರ ಮುಷ್ಕರವೂ ವೈದ್ಯನೇ ಹರಿಃ ಎಂಬ ತಪ್ಪು ಕಲ್ಪನೆಯೂ

ಆದರೆ, ವಿಧಾನಸಭೆಯಲ್ಲಿ ಮಸೂದೆಗೆ ವ್ಯಾಪಕ ವಿರೋಧ ವ್ಯಕ್ತವಾದ ಹಿನ್ನಲೆಯಲ್ಲಿ ಅದನ್ನು ಸದನ ಸಮಿತಿಗೆ ಒಪ್ಪಿಸಲಾಗಿತ್ತು. ಮಧುಗಿರಿ ಶಾಸಕ ಕೆ.ಎನ್.ರಾಜಣ್ಣ ನೇತೃತ್ವದ ಜಂಟಿ ಪರಿಶೀಲನಾ ಸಮಿತಿ ಮಸೂದೆ ಬಗ್ಗೆ ವರದಿ ಸಲ್ಲಿಸಿದೆ.

ಕಾಂಗ್ರೆಸ್ ಪಕ್ಷದ ಹಲವು ಶಾಸಕರು, ಸಚಿವರು ಮಸೂದೆ ಮಂಡನೆ ಮಾಡುವುದಕ್ಕೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಆದರೆ, ಆರೋಗ್ಯ ಸಚಿವ ರಮೇಶ್ ಕುಮಾರ್ ಇದನ್ನು ಪ್ರತಿಷ್ಠೆಯಾಗಿ ಸ್ವೀಕರಿಸಿದ್ದಾರೆ. ಆದ್ದರಿದ, ಸಿದ್ದರಾಮಯ್ಯ ಇಕ್ಕಟ್ಟಿಗೆ ಸಿಲುಕಿದ್ದಾರೆ.

ಮಸೂದೆಯಲ್ಲಿ ಏನಿದೆ?

* ಸರ್ಕಾರ ನಿಗದಿಪಡಿಸುವು­ದಕ್ಕಿಂತ ಹೆಚ್ಚಿನ ದರವನ್ನು ಖಾಸಗಿ ಆಸ್ಪತ್ರೆಗಳು ಸಂಗ್ರಹಿಸುವಂತಿಲ್ಲ

* ಸಂಗ್ರಹ ಮಾಡಿದರೆ 25,000 ದಿಂದ 5 ಲಕ್ಷದವರೆಗೆ ದಂಡ ವಿಧಿಸುವ ಮತ್ತು 6 ತಿಂಗಳಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ

* ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರೋಗಿಯಿಂದ ಅಥವಾ ಅವರ ಪ್ರತಿನಿ­ಧಿ­ಯಿಂದ ಮುಂಗಡ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ

* ಆಸ್ಪತ್ರೆಯಲ್ಲಿ ಯಾವುದೇ ವ್ಯಕ್ತಿ ಮೃತಪಟ್ಟರೆ ಸಂಬಂಧಿಕರಿಗೆ ದೇಹ ಹಸ್ತಾಂತರಿಸುವ ಮುನ್ನ ಬಾಕಿ ಮೊತ್ತ ಪಾವತಿಸುವಂತೆ ಒತ್ತಾಯಿಸುವಂತಿಲ್ಲ.

* ರೋಗಿಗಳ ಕುಂದು ಕೊರತೆ ವಿಚಾರಣೆಗೆ ಜಿಲ್ಲಾ ಅಥವಾ ಮಹಾನಗರ ಮಟ್ಟದಲ್ಲಿ ಕುಂದು ಕೊರತೆ ಪರಿಹಾರ ಸಮಿತಿ ರಚಿಸಲು ಅವಕಾಶ

* ಈ ಸಮಿತಿಗೆ ಜಿಲ್ಲಾ ಪಂಚಾ­ಯಿತಿ ಮುಖ್ಯ ಕಾರ್ಯ ನಿರ್ವಹಣಾ­ಧಿಕಾರಿ ಅಧ್ಯಕ್ಷರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ಒಬ್ಬ ಪ್ರತಿ­ನಿಧಿ, ಜಿಲ್ಲಾ ಸರ್ಜನ್‌, ಸರ್ಕಾರಿ ವಕೀಲ ಮತ್ತು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದ ಮಹಿಳಾ ಪ್ರತಿನಿಧಿಗಳು ಸದಸ್ಯರು

* ಹೊಸ ಮಸೂದೆಯು ಆಸ್ಪತ್ರೆ, ದವಾಖಾನೆ, ನರ್ಸಿಂಗ್‌ ಹೋಂ, ಡೆಂಟಲ್‌ ಕ್ಲಿನಿಕ್‌, ಡೆಂಟಲ್‌ ಪಾಲಿ ಕ್ಲಿನಿಕ್, ಚಿಕಿತ್ಸಾ ಪ್ರಯೋಗಾಲಯ, ರೋಗ ನಿಧಾನ ಕೇಂದ್ರ, ಪ್ರಸೂತಿ ಗೃಹ, ರಕ್ತನಿಧಿ, ಕ್ಷ-ಕಿರಣ ಪರೀಕ್ಷಾ ಕೇಂದ್ರ, ಸ್ಕ್ಯಾನಿಂಗ್‌ ಕೇಂದ್ರ, ಫಿಸಿಯೋಥೆರಪಿ ಕೇಂದ್ರ, ಚಿಕಿತ್ಸಾಲಯ, ಪಾಲಿ ಕ್ಲಿನಿಕ್‌, ವೈದ್ಯ ಸಲಹಾ ಕೇಂದ್ರ, ಸಾರ್ವಜನಿಕ ರೋಗ ತಪಾಸಣೆ, ರೋಗ ನಿಧಾನ, ರೋಗ ತಡೆಗಟ್ಟುವಿಕೆ ಅಥವಾ ರೋಗ­ಗುಣಪಡಿಸುವ ಮುಂತಾದ ಹೆಸರಿನಿಂದ ಕರೆಯುವ ಸಂಸ್ಥೆಗಳು, ಸ್ವಯಂ ಸೇವಾ ಅಥವಾ ಖಾಸಗಿ ಸಂಸ್ಥೆಗಳಿಗೆ ಅನ್ವಯ

* ಖಾಸಗಿ ವೈದ್ಯಕೀಯ ಸಂಸ್ಥೆಗಳು ಸಂಬಂಧಿಸಿದ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಕಡ್ಡಾಯ. ನೋಂದಣಿ ನಿಬಂಧನೆಗಳು ಮತ್ತು ಷರತ್ತುಗಳನ್ನು ಬದಿಗೊತ್ತಿ ಖಾಸಗಿ ವೈದ್ಯಕೀಯ ಸಂಸ್ಥೆ ಸ್ಥಾಪನೆ ಮಾಡುವಂತಿಲ್ಲ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress Legislature Party (CLP) meet will be held in Belagavi today under the leadership of Chief Minister Siddaramaiah. KMPA act issue will discuss in the meeting.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ