ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯ

|
Google Oneindia Kannada News

ಬೆಳಗಾವಿ, ಜೂ. 12 : ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕರ್ನಾಟಕ ಮಹಿಳಾ ಕಾಂಗ್ರೆಸ್ ಘಟಕದ ಅಧ್ಯಕ್ಷರಾಗಿ ಶುಕ್ರವಾರ ಅಧಿಕಾರ ಸ್ವೀಕರಿಸಲಿದ್ದಾರೆ. ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಕಾರ್ಯಕರ್ತೆಯಾಗಿ ಗುರುತಿಸಿಕೊಂಡಿರುವ ಹೆಬ್ಬಾಳ್ಕರ್ ಅವರನ್ನು ಮೇ ತಿಂಗಳಿನಲ್ಲಿ ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು.

ಶುಕ್ರವಾರ ಮಧ್ಯಾಹ್ನ 3.30ಕ್ಕೆ ಬೆಂಗಳೂರಿನ ವಸಂತನಗರದ ಅಂಬೇಡ್ಕರ್‌ ಭವನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರ ಸ್ವೀಕರಿಸಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ ಅವರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.[ಮಹಿಳಾ ಕಾಂಗ್ರೆಸ್ ಗೆ ಹೆಬ್ಬಾಳ್ಕರ್ ನೂತನ ಅಧ್ಯಕ್ಷರು]

lakshmi hebbalkar

ಲಕ್ಷ್ಮೀ ಹೆಬ್ಬಾಳ್ಕರ್ ಪರಿಚಯ : ಎಂಎ ಪದವೀಧರೆಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಕರ್ನಾಟಕ ಮಹಿಳಾ ಕಾಂಗ್ರಸ್ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ. ಬೆಳಗಾವಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದು, ಪಕ್ಷ ಸಂಘಟನೆಯಲ್ಲಿ ಸಕ್ರಿಯರಾಗಿ ತೊಡಗಿಸಿಕೊಂಡಿದ್ದಾರೆ.

2014ರ ಲೋಕಸಭೆ ಚುನಾವಣೆಯಲ್ಲಿ ಬೆಳಗಾವಿ ಕ್ಷೇತ್ರದಿಂದ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಟಿಕೆಟ್ ನೀಡಲಾಗಿತ್ತು. 4,78,557 ಮತಗಳನ್ನು ಪಡೆದು ಬಿಜೆಪಿಯ ಸುರೇಶ ಅಂಗಡಿ ಅವರ ಎದುರು ಹೆಬ್ಬಾಳ್ಕರ್ ಪರಾಭವಗೊಂಡಿದ್ದರು.

ವಿವಿಧ ಹುದ್ದೆಗಳ ಜವಾಬ್ದಾರಿ : ಸುಮಾರು 16 ವರ್ಷಗಳಿಂದ ಕಾಂಗ್ರೆಸ್ ಪಕ್ಷದ ಕಾರ್ಯಕರ್ತೆಯಾಗಿ ಕೆಲಸ ಮಾಡುತ್ತಿರುವ ಹೆಬ್ಬಾಳ್ಕರ್ ಅವರು ಯುವ ಕಾಂಗ್ರೆಸ್ ಮತ್ತು ಕೆಪಿಸಿಸಿಯ ಹಲವಾರು ಸಮಾವೇಶಗಳನ್ನು ಯಶಸ್ವಿಯಾಗಿ ಸಂಘಟಿಸಿದ್ದಾರೆ. ವಿಧಾನಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗಾಗಿ ಸಕ್ರಿಯರಾಗಿ ದುಡಿದಿದ್ದಾರೆ.

English summary
Laxmi Ravindra Hebbalkar will take charge as president of Karnataka Pradesh Congress Committee Women's wing on Friday, June 12, 2015, here is brief profile.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X