ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕೊನೆಗೂ ಕನ್ನಡಿಗರಲ್ಲಿ ಕ್ಷಮೆ ಯಾಚಿಸಿದ ಲಕ್ಷ್ಮಿ ಹೆಬ್ಬಾಳ್ಕರ್

|
Google Oneindia Kannada News

ಬೆಳಗಾವಿ, ಆಗಸ್ಟ್ 31: "ಯಾವ ಕನ್ನಡಿಗರನ್ನೂ ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ" ಎಂದು ಲಕ್ಷ್ಮಿ ಹೆಬ್ಬಾಳ್ಕರ್ ಕನ್ನಡಿಗರ ಕ್ಷಮೆ ಯಾಚಿಸಿದ್ದಾರೆ.

ಮರಾಠಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಜೈಕಾರ: ಟ್ವಿಟ್ಟಿಗರ ಧಿಕ್ಕಾರ!ಮರಾಠಿಗೆ ಲಕ್ಷ್ಮಿ ಹೆಬ್ಬಾಳ್ಕರ್ ಜೈಕಾರ: ಟ್ವಿಟ್ಟಿಗರ ಧಿಕ್ಕಾರ!

ಬೆಳಗಾವಿ ಮಹಾರಾಷ್ಟ್ರಕ್ಕೆ ಸೇರಿದರೆ ಮಹಾರಾಷ್ಟ್ರಕ್ಕೆ ಜೈ ಎನ್ನುತ್ತೇನೆ ಎಂಬ ಹೇಳಿಕೆ ನೀಡುವ ಮೂಲಕ ಕರ್ನಾಟಕ ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಲಕ್ಷ್ಮಿ ಹೆಬ್ಬಾಳ್ಕರ್ ವಿವಾದಸೃಷ್ಟಿಸಿದ್ದರು.

Lakshmi Hebbalkar apologizes for her controversial statement

ಅವರ ಕನ್ನಡ ವಿರೋಧಿ ಹೇಳಿಕೆಗೆ ಕನ್ನಡಿಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆಯೇ "ತಮ್ಮ ಮಾತನ್ನು ಪೂರ್ಣವಾಗಿ ಕೇಳಿಸಿಕೊಳ್ಳದೆ ವಿವಾದ ಸೃಷ್ಟಿಸಲಾಗುತ್ತಿದೆ" ಎಂದವರು ಹೇಳಿದ್ದಾರೆ.

"ಮಹಾರಾಷ್ಟ್ರದ ಧ್ವಜಕ್ಕೆ ಜೈಕಾರ ಹಾಕುವವರು ಮಹಾರಾಷ್ಟ್ರಕ್ಕೇ ಹೋಗಲಿ!"

"ಯಾವ ಕನ್ನಡಿಗರನ್ನೂ ನೋಯಿಸುವ ಉದ್ದೇಶ ನನ್ನದಾಗಿರಲಿಲ್ಲ. ನನ್ನ ಹೇಳಿಕೆಯಿಂದ ಕನ್ನಡಿಗರಿಗೆ ನೋವಾಗಿದ್ದರೆ ಕ್ಷಮೆ ಯಾಚಿಸುತ್ತೇನೆ. ಬೆಳಗಾವಿಯಲ್ಲಿ ಶೇ. 70 ರಷ್ಟು ಮರಾಠಿಗರಿದ್ದಾರೆ. ನಾನು ಮಹಾರಾಷ್ಟ್ರಕ್ಕೆ ಜೈ ಅಂದಿದ್ದು ನಿಜ. ಆದರೆ ಕರ್ನಾಟಕ ವಿರೋಧಿಯಲ್ಲ."

"ಸುಪ್ರೀಂ ಕೋರ್ಟಿನಲ್ಲಿ ಮಹಾರಾಷ್ಟ್ರ, ಬೆಳಗಾವಿ ಕುರಿತಂತೆ ಇರುವ ದಾವೆಯೇ ಕಾನೂನು ಬಾಹಿರವಾಗಿದೆ. ಆದ್ದರಿಂದ ಮಹಾರಾಷ್ಟ್ರಪರ ತೀರ್ಪು ಬರುವುದಕ್ಕೆ ಸಾಧ್ಯವೇ ಇಲ್ಲ. ಹಾಗೊಮ್ಮೆ ತೀರ್ಪೇನಾದರೂ ಮಹಾರಾಷ್ಟ್ರ ಪರ ಬಂದರೆ ಮಹಾರಾಷ್ತ್ರಕ್ಕೆ ಜೈ ಎನ್ನುತ್ತೇನೆ" ಎಂದಿದ್ದೆ. ನನ್ನ ಹೇಳಿಕೆಯನ್ನು ತಿರುಚಲಾಗಿದ್ದೇ ಇಷ್ಟೆಲ್ಲ ವಿವಾದಕ್ಕೆ ಕಾರಣ. ಬೆಳಗಾವಿ ಕರ್ನಾಟಕದ ಅವಿಭಾಜ್ಯ ಅಂಗ ಎಂದು ಅವರು ಪ್ರತಿಕ್ರಿಯಿಸಿದ್ದಾರೆ.

English summary
Chief of Karnataka congress women wing Lakshmi Hebbalkar apologizes Kannadigas for her controversial statement in which she has said, "If Belagavi will be merged with Maharashtra I will celebrate the victory!"
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X