ಯಡಿಯೂರಪ್ಪ ದಾಖಲೆ ಬಿಡುಗಡೆ ಮಾಡಲಿ : ಸಿದ್ದರಾಮಯ್ಯ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ನವೆಂಬರ್ 13 : 'ಯಡಿಯೂರಪ್ಪ ಅವರು ದಾಖಲೆ ಬಿಡುಗಡೆ ಮಾಡುವುದಿದ್ದರೆ ಮಾಡಲಿ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಚಳಿಗಾಲದ ಅಧಿವೇಶನದಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಅವರು ಮಾಧ್ಯಮಗಳ ಜೊತೆ ಮಾತನಾಡಿದರು. 'ಇದು ಕಾಂಗ್ರೆಸ್ ಸರ್ಕಾರದ ಕೊನೆಯ ಅಧಿವೇಶನವಲ್ಲ' ಎಂದರು.

Let him release documents says Siddaramaiah

'ಕಳಸಾ-ಬಂಡೂರಿ ಸಮಸ್ಯೆ ಪರಿಹಾರ ಮಾಡಲು ಪ್ರಧಾನ ಮಂತ್ರಿಗಳು ಮೂರು ರಾಜ್ಯಗಳ ಮುಖ್ಯಮಂತ್ರಿಗಳ ಸಭೆ ಕರೆಯಲಿ. ನಾವು ಕರೆದರೆ ಮುಖ್ಯಮಂತ್ರಿಗಳು ಬರುತ್ತಿಲ್ಲ' ಎಂದು ಸಿದ್ದರಾಮಯ್ಯ ಆರೋಪಿಸಿದರು.

ಬಿಜೆಪಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆಗೆ ಒತ್ತಾಯಿಸಿದ್ದಕ್ಕೆ ಪ್ರತಿಕ್ರಿಯೆ ನೀಡಿದ ಅವರು, 'ಮೊದಲು ಅವರು ತಮ್ಮ ಮೇಲಿರುವ ಎಫ್‌ಐಆರ್‌ಗಳ ಬಗ್ಗೆ ನೋಡಿಕೊಳ್ಳಲಿ. ಉತ್ತರ ಪ್ರದೇಶ ಮುಖ್ಯಮಂತ್ರಿಗಳ ಮೇಲೂ ಎಫ್ಐಆರ್ ಇದೆ. ಯಡಿಯೂರಪ್ಪ ಮೇಲೂ ಎಫ್ಐಆರ್ ದಾಖಲಾಗಿದೆ. ರಾಜೀನಾಮೆ ಕೊಡಲಿ ನೋಡಣ' ಎಂದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Karnataka BJP president B.S.Yeddyurappa said that, the scams by the Congress-led state government will be exposed by the BJP soon. On November 13, 2017 CM Siddaramaiah said let him release documents.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ