ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಬೆಳಗಾವಿಯಲ್ಲಿ ಮಹಾರಾಷ್ಟ್ರ ಶಾಸಕನ ಉದ್ಧಟತನದ ಭಾಷಣ

|
Google Oneindia Kannada News

ಬೆಳಗಾವಿ,ನವೆಂಬರ್ 1 : ಪೊಲೀಸರು ಹಾಕಿದಷರತ್ತನ್ನು ಉಲ್ಲಂಘನೆಮಾಡಿ ಬೆಳಗಾವಿಯಲ್ಲಿ ಮಹಾರಾಷ್ಟ್ರಶಾಸಕ ಭಾಷಾ ವಿವಾದದ ಕಿಡಿ ಹೊತ್ತಿಸಿದ್ದಾನೆ. ಶಾಸಕ ನಿಲೇಶ ರಾಣೆ ಪ್ರಚೋದನಕಾರಿ ಭಾಷಣ ಮಾಡಿ ಕನ್ನಡಿಗರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

ಎಂಇಎಸ್ ಬೆಂಬಲಿಸಿದ ಮೇಯರ್ ವಿರುದ್ಧ ಕ್ರಮ: ರಮೇಶ್ ಜಾರಕಿಹೊಳಿಎಂಇಎಸ್ ಬೆಂಬಲಿಸಿದ ಮೇಯರ್ ವಿರುದ್ಧ ಕ್ರಮ: ರಮೇಶ್ ಜಾರಕಿಹೊಳಿ

ಬೆಳಗಾವಿಯಲ್ಲಿ ಬುಧವಾರ ಎಂಇಎಸ್ ಕರಾಳ ದಿನಾಚರಣೆ ಕಾರ್ಯಕ್ರಮ ಹಮ್ಮಿಕೊಂಡಿತ್ತು. ಈ ಕಾರ್ಯಕ್ರಮದಲ್ಲಿ ಮಾತನಾಡಿದ ಶಾಸಕ ನಿಲೇಶ ರಾಣೆ, 'ಬೆಳಗಾವಿ ಮರಾಠಿಗರ ಮೇಲೆ ಕರ್ನಾಟಕ ಸರ್ಕಾರದ ದಬ್ಬಾಳಿಕೆ ಮಾಡುತ್ತಿದೆ. ಮಹಾರಾಷ್ಟ್ರ ತಾಳ್ಮೆಯಿಂದ ಇದೆ' ಎಂದು ಹೇಳಿದರು.

Maharashtra MLA provoking speech in Belagavi

'ಮಹಾರಾಷ್ಟ್ರ ರೊಚ್ಚಿಗೆದ್ದರೆ ಪರಿಣಾಮ ಗಂಭೀರವಾಗಲಿದೆ' ಎಂದು ಕನ್ನಡ ನೆಲದಲ್ಲಿಯೇನಿಲೇಶ ರಾಣೆ ಹೇಳಿಕೆ ನೀಡಿದ್ದಾರೆ. ಎಂಇಎಸ್ಕರಾಳ ದಿನಾಚರಣೆ ಕಾರ್ಯಕ್ರಮದಲ್ಲಿ ಮಹಾರಾಷ್ಟ್ರ ಶಾಸಕನ ಉದ್ಘಟತನದ ಹೇಳಿಕೆಗೆಕನ್ನಡಿಗರು ವಿರೋಧ ವ್ಯಕ್ತಪಡಿಸಿದ್ದಾರೆ.

ಬೆಳಗಾವಿ: ಎಂಇಎಸ್ ಕರಾಳ ದಿನದಲ್ಲಿ ಮೇಯರ್ ಸಂಜೋತಾ ಭಾಗಿಬೆಳಗಾವಿ: ಎಂಇಎಸ್ ಕರಾಳ ದಿನದಲ್ಲಿ ಮೇಯರ್ ಸಂಜೋತಾ ಭಾಗಿ

ಬೆಳಗಾವಿ ಪೊಲೀಸ್ ಆಯುಕ್ತರು ಕರಾಳ ದಿನಾಚರಣೆಗೆ ಅನುಮತಿ ನೀಡುವಾಗಲೇ ಕನ್ನಡ, ಕರ್ನಾಟಕ ಸರ್ಕಾರದ ವಿರುದ್ಧ ಮಾತನಾಡುವಂತಿಲ್ಲ. ಪ್ರಚೋದನಾಕಾರಿ ಭಾಷಣ ಮಾಡುವಂತಿಲ್ಲ ಎಂದು ಷರತ್ತು ವಿಧಿಸಿದ್ದರು. ಆದರೆ, ಮಹಾರಾಷ್ಟ್ರದ ಶಾಸಕರು ಈ ಷರತ್ತನ್ನು ಉಲ್ಲಂಘಟನೆ ಮಾಡಿದ್ದಾರೆ. ಶಾಸಕರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಕನ್ನಡಪರ ಸಂಘಟನೆಗಳು ಒತ್ತಾಯ ಮಾಡಿವೆ.

ಮಾರಾಮಾರಿ : ರಾಜ್ಯೋತ್ಸವ ಮೆರವಣಿಗೆ ವೇಳೆ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಕ್ಷುಲ್ಲಕ ಕಾರಣಕ್ಕೆ ಎರಡು ಗುಂಪಿನವರು ಬಡಿದಾಡಿಕೊಂಡಿದ್ದಾರೆ. ಈ ಗಲಾಟೆಯಲ್ಲಿ ಒಬ್ಬ ಯುವಕನಿಗೆ ಗಂಭೀರವಾದ ಗಾಯವಾಗಿದೆ. ಗಾಯಾಳುವನ್ನು ಆಸ್ಪತ್ರೆಗೆ ಸೇರಿಸಲು ಯಾವುದೇ ವಾಹನ ಸಿಗದೆ ಜನರು ಪರದಾಡಿದರು. ಸ್ಥಳಕ್ಕೆ ಬಂದ ಪೊಲೀಸರು ತಮ್ಮ ಜೀಪಿಯನ್ನು ಯುವಕನನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲು ಮಾಡಿದರು.

English summary
Kannada organizations upset with the provoking speech of Maharashtra MLA Nilesh Rane in Belagavi during MES Block Day on November 1, 2017.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X