ಏಷ್ಯನ್ ಗೇಮ್ಸ್ ನಲ್ಲಿ ಕಂಚಿನ ಪದಕ ಗೆದ್ದ ಕುಂದಾನಗರಿ ಕುವರಿ
Recommended Video

ಬೆಳಗಾವಿ, ಆಗಸ್ಟ್.29:ಇಂಡೋನೇಷ್ಯಾದ ಜಕಾರ್ತದಲ್ಲಿ ನಡೆಯುತ್ತಿರುವ 18ನೇ ಏಷ್ಯನ್ ಗೇಮ್ಸ್ ನಲ್ಲಿ ಭಾರತೀಯ ಕ್ರೀಡಾಪಟುಗಳು ಭರ್ಜರಿ ಪ್ರದರ್ಶನ ನೀಡುತ್ತಿದ್ದಾರೆ.
ಅಂದಹಾಗೆ ನಿನ್ನೆ ಮಂಗಳವಾರ ನಡೆದ ಖುರಾಷ್ ಪಂದ್ಯದಲ್ಲಿ ಬೆಳಗಾವಿಯ ತುರಮರಿ ಗ್ರಾಮದ ಯುವ ಪ್ರತಿಭೆ ಮಲಪ್ರಭಾ ಜಾಧವ್(18) ಮಹಿಳೆಯರ 52 ಕೆ.ಜಿ ವಿಭಾಗದಲ್ಲಿ ಕಂಚಿನ ಪದಕ ಪಡೆಯುವ ಮೂಲಕ ದೇಶದ ಗೌರವಕ್ಕೆ ಮತ್ತೊಂದು ಗರಿ ಮೂಡಿಸಿದ್ದಾರೆ.
ಇದೀಗ ಮಲಪ್ರಭಾ ಹುಟ್ಟೂರು ತುರಮರಿಯಲ್ಲಿ ಸಂಭ್ರಮ ಮನೆಮಾಡಿದ್ದು, ಪಟಾಕಿ ಸಿಡಿಸಿ ಗ್ರಾಮಸ್ಥರು ಸಂಭ್ರಮಿಸಿದ್ದಾರೆ.

ಎಲ್ಲ ಹಂತದಲ್ಲಿ ಉತ್ತಮ ಪ್ರದರ್ಶನ ತೋರಿದ್ದ, ಮಲಪ್ರಭಾ ಸೆಮಿಫೈನಲ್ ಪ್ರವೇಶಿಸಿದ್ದರು. ಸೆಮಿಫೈನಲ್ನಲ್ಲಿ ಉಜ್ಬೇಕಿಸ್ಥಾನದ ಆಟಗಾರ್ತಿ ಗುಲ್ನೋರ್ ವಿರುದ್ಧ ಪರಾಭವಗೊಂಡು ಕಂಚಿನ ಪದಕಕ್ಕೆ ತೃಪ್ತಿ ಪಟ್ಟುಕೊಂಡರು.
ಬೆಳಗಾವಿಯ ಡಿವೈಎಸ್ ನ ಜುಡೋ ಕೋಚ್ ಎಂ.ಎನ್. ತ್ರಿವೇಣಿ ಹಾಗೂ ಜಿತೇಂದ್ರ ಸಿಂಗ್ ಮಲಪ್ರಭಾ ಜಾಧವ್ ಗೆ ತರಬೇತಿ ನೀಡಿದ್ದರು.
ನಗರದ ವನಿತಾ ವಿದ್ಯಾಲಯದಲ್ಲಿ ದ್ವಿತೀಯ ಪಿಯುಸಿ ಓದುತ್ತಿರುವ ಮಲಪ್ರಭಾ ಖುರಾಷ್ ನಲ್ಲಿ ದಕ್ಷಿಣ ಭಾರತದಿಂದ ಆಯ್ಕೆಯಾದ ಏಕೈಕ ಕ್ರೀಡಾಪಟು ಎಂಬ ಕೀರ್ತಿಗೂ ಮಲಪ್ರಭಾ ಪಾತ್ರರಾಗಿದ್ದಾರೆ.
ಮಲಪ್ರಭಾ ಜಾಧವ್ ಶಾಲಾ ಮಟ್ಟದಲ್ಲಿ ಇರುವಾಗಲೇ ಕ್ರೀಡೆಯಲ್ಲಿ ಆಸಕ್ತಿ ಹೊಂದಿದ್ದರು. ಇವರ ಸಾಧನೆ ಕಂಡು ಬೆಳಗಾವಿಯಲ್ಲಿರುವ ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಅಧಿಕಾರಿಗಳು ಇಲಾಖೆಯ ವಸತಿ ನಿಲಯದಲ್ಲಿ ಇರಿಸಿಕೊಂಡು ವಿಶೇಷ ತರಬೇತಿ ನೀಡಿದ್ದರು.
ಮಲಪ್ರಭಾ ಕೆಲ ತಿಂಗಳ ಹಿಂದೆಯಷ್ಟೇ ಜುಡೋ ಕ್ರೀಡೆಯ ಸಾಮ್ಯತೆ ಹೊಂದಿರುವ ಖುರಾಷ್ ಅನ್ನು ಆಯ್ದುಕೊಂಡಿದ್ದರು. ತಂದೆ-ತಾಯಿ ಕೃಷಿಕರಾಗಿದ್ದು, ಬಡತನ ಕುಟುಂಬ ಹಿನ್ನಲೆಯ ಮಲಪ್ರಭಾ ಕಂಚಿನ ಪದಕ ಪಡೆಯುವ ಮೂಲಕ ಗಮನ ಸೆಳೆದಿದ್ದಾರೆ.
-
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್












Click it and Unblock the Notifications