ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮಂಗಳೂರು-ಮೂಡಬಿದಿರೆ ರಸ್ತೆ ನಾಲ್ಕು ಪಥವಾಗಿ ಅಭಿವೃದ್ಧಿ

|
Google Oneindia Kannada News

ಬೆಳಗಾವಿ, ನವೆಂಬರ್ 22 : ಮಂಗಳೂರು-ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ಅನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. ರಸ್ತೆ ಅಭಿವೃದ್ಧಿಗೆ 17.50 ಕೋಟಿ ಅನುದಾನ ನೀಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲಾಗಿದೆ.

ಬುಧವಾರ ವಿಧಾನಪರಿಷತ್ತಿನಲ್ಲಿ ಲೋಕೋಪಯೋಗಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರು ಕಾಂಗ್ರೆಸ್‌ನ ಐವಾನ್ ಡಿಸೋಜಾ ಅವರ ಪ್ರಶ್ನೆಗೆ ಲಿಖಿತ ಉತ್ತರ ನೀಡಿದರು. ಆಗ ರಸ್ತೆ ಅಗಲೀಕರಣ ಮತ್ತು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸುವ ಬಗ್ಗೆ ವಿವರಣೆ ನೀಡಿದರು.

ಜನವರಿಯಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್ಜನವರಿಯಿಂದ ಶಿರಾಡಿ ಘಾಟ್‌ನಲ್ಲಿ ವಾಹನ ಸಂಚಾರ ಬಂದ್

Mangaluru-Moodbidri road to be developed as four-lane

'ಮಂಗಳೂರು-ಮೂಡಬಿದಿರೆ ರಾಷ್ಟ್ರೀಯ ಹೆದ್ದಾರಿ 169 ಅನ್ನು ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಪಡಿಸಲಾಗುತ್ತದೆ. 706 ಕಿ.ಮೀ.ನಿಂದ 743 ಕಿ.ಮೀ. ವರೆಗಿನ ರಸ್ತೆ ಅಭಿವೃದ್ಧಿ ಪಡಿಸಲು ಅನುದಾನ ನೀಡುವಂತೆ ಕೇಂದ್ರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ' ಎಂದರು.

ನೈಸ್ ಕಾರಿಡಾರ್ ವಿರುದ್ಧ ಮತ್ತೆ ಹರಿಹಾಯ್ದ ಕುಮಾರಸ್ವಾಮಿನೈಸ್ ಕಾರಿಡಾರ್ ವಿರುದ್ಧ ಮತ್ತೆ ಹರಿಹಾಯ್ದ ಕುಮಾರಸ್ವಾಮಿ

'ಈ ರಸ್ತೆಯಲ್ಲಿ ಹೆಚ್ಚು ಸಂಚಾರ ದಟ್ಟಣೆ ಇದೆ. ಆದ್ದರಿಂದ, ರಸ್ತೆಯನ್ನು ನೇರಗೊಳಿಸಿ ಚತುಷ್ಪಥ ರಸ್ತೆಯಾಗಿ ಅಭಿವೃದ್ಧಿ ಮಾಡಲಾಗುತ್ತದೆ. ಕ್ರಿಯಾ ಯೋಜನೆಗೆ ಕೇಂದ್ರದ ಒಪ್ಪಿಗೆ ಸಿಕ್ಕ ಬಳಿಕ ಕಾಮಗಾರಿ ಆರಂಭಿಸಲಾಗುತ್ತದೆ' ಎಂದು ಕಲಾಪದಲ್ಲಿ ಮಾಹಿತಿ ನೀಡಿದರು.

ಕೋಟಿ-ಕೋಟಿ ಹಣ ಸುರಿದರೂ ಮುಚ್ಚದ ಬೆಂಗಳೂರಿನ ರಸ್ತೆ ಗುಂಡಿಗಳುಕೋಟಿ-ಕೋಟಿ ಹಣ ಸುರಿದರೂ ಮುಚ್ಚದ ಬೆಂಗಳೂರಿನ ರಸ್ತೆ ಗುಂಡಿಗಳು

'ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ವಿಸ್ತೃತ ಯೋಜನಾ ವರದಿ ನೀಡುವ ಜವಾಬ್ದಾರಿ ವಹಿಸಿರುವುದರಿಂದ ಕೇಂದ್ರ ಸರ್ಕಾರ ಯಾವುದೇ ಮೂಲ ಕಾಮಗಾರಿಗೆ ಅನುಮೋದನೆ ನೀಡುವುದಿಲ್ಲ' ಎಂದು ಸಚಿವರು ವಿವರಣೆ ನೀಡಿದರು.

English summary
Mangaluru-Moodbidri National Highway 169 road to be developed as four-lane road said PWD minister HC Mahadevappa in Lelaative council.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X