ಸ್ಮಶಾನದಲ್ಲಿ ಸಚಿವ ಸತೀಶ್ ಜಾರಕಿಹೊಳಿ ವಾಸ್ತವ್ಯ

Posted By:
Subscribe to Oneindia Kannada

ಬೆಳಗಾವಿ, ನವೆಂಬರ್ 21 : ವಿಚಾರವಾದಿಗಳ ಬಹು ದಿನಗಳ ಬೇಡಿಕೆ ಮೂಡನಂಬಿಕೆ ನಿಷೇಧ ಕಾಯ್ದೆ ಜಾರಿಯಾಗಿದೆ. ಕಾಯ್ದೆಯ ಜಾರಿಯಲ್ಲಿ ಮುನ್ನೆಲೆಯಲ್ಲಿದ್ದ ವಿಚಾರವಾದಿಗಳ ಕಾಯ್ದೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಕಾರ್ಯಕ್ರಮಗಳನ್ನು ರೂಪಿಸುತ್ತಿದ್ದಾರೆ. ಇದಕ್ಕೆ ಪೂರಕವಾಗಿ ಸಚಿವ ಸತೀಶ ಜಾರಕಿಹೊಳಿ ಸ್ಮಶಾನದಲ್ಲಿ ವಾಸ್ತವ್ಯ ಹೂಡಲಿದ್ದಾರೆ.

ಡಿಸೆಂಬರ್ 6ರಂದು ಅಂಬೇಡ್ಕರ್ ಪರಿನಿರ್ವಾಣ ದಿನ ಇರುವ ಕಾರಣ ಅಂದು ಮೌಡ್ಯ ವಿರೋಧಿ ಸಂಕಲ್ಪ ದಿನವನ್ನಾಗಿ ಆಚರಿಸಲು ಯೋಜಿಸಿಲಾಗಿದೆ.

Minister Sathish Jarkiholi sleeping in graveyard to support Anti Superstition

ಬೆಳಗಾವಿಯ ಸದಾಶಿವ ನಗರದ ಸ್ಮಶಾನದಲ್ಲಿ ಹಮ್ಮಿಕೊಂಡಿದ್ದ ಮೌಢ್ಯ ವಿರೋಧಿ ಚಿಂತನಗೋಷ್ಠಿ ಕಾರ್ಯಕ್ರಮದಲ್ಲಿ ಈ ನಿರ್ಣಯ ಕೈಗೊಳ್ಳಲಾಯಿತು.

ಕಾರ್ಯಕ್ರಮದಲ್ಲಿ ಸಚಿವ ಸತೀಶ ಜಾರಕಿಹೊಳಿ ನಿಜಗುಣಾನಂದ ಸ್ವಾಮಿ, ಪ್ರಭು ಚನ್ನಬಸವ ಸ್ವಾಮಿ, ರಾಜ್ಯಸಭಾ ಸದಸ್ಯ ಬಿ.ಕೆ. ಹರಿಪ್ರಸಾದ, ಶಾಸಕ ವೈ ಎಸ್ ವಿ ದತ್ತಾ, ಪುಟ್ಟಣಯ್ಯ ಭಾಗಿ.

ಇಂದಿನಿಂದ (ನವೆಂಬರ್ 21)ರಿಂದ ರಾಜ್ಯದ ಜನರಲ್ಲಿ ವೈಚಾರಿಕ ಜಾಗೃತಿ ಮೂಡಿಸಲು ಜತಾಕ್ಕೆ ಕಾರ್ಯಕ್ರಮದಲ್ಲಿ ಚಾಲನೆ ನೀಡಲಾಯಿತು.

ಸತೀಶ ಜಾರಕಿಹೊಳಿ ಅವರು ಸ್ಮಶಾನದಲ್ಲಿ ರಾತ್ರಿ ಕಳೆದು ಮೌಡ್ಯ ಹೋಗಲಾಡಿಸಲು ಜಾಗೃತಿ ಮೂಡಿಸುವ ಪ್ರಯತ್ನ ಮಾಡುತ್ತಿದ್ದಾರೆ. ಜಾರಕಿಹೊಳಿ ಅವರು ನವೆಂಬರ್ 21 ರಾತ್ರಿ ಪೂರ್ತಿ ಸ್ಮಶಾನದಲ್ಲಿಯೇ ವಾಸ್ತವ್ಯ ಹೂಡಲಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
To support Anti Superstition act minister Sathish Jarkiholi sleeping in graveyard in Belagavi

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ