ಬೆಳಗಾವಿ : ಮೂವರು ಮಕ್ಕಳೊಂದಿಗೆ ಬಾವಿಗೆ ಹಾರಿದ ತಾಯಿ

Posted By:
Subscribe to Oneindia Kannada

ಬೆಳಗಾವಿ, ಜುಲೈ 22 : ಮೂವರು ಮಕ್ಕಳೊಂದಿಗೆ ತಾಯಿ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಮಕ್ಕಳು ಸಾವನ್ನಪ್ಪಿದ್ದು, ತಾಯಿಯನ್ನು ರಕ್ಷಣೆ ಮಾಡಲಾಗಿದೆ.

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕಿನ ಹುಲಕುಂದ ಗ್ರಾಮದಲ್ಲಿ ಶುಕ್ರವಾರ ಈ ಹೃದಯವಿದ್ರಾವಕ ಘಟನೆ ನಡೆದಿದೆ. ಪತಿ ನೀಡುತ್ತಿದ್ದ ಕಿರುಕುಳದಿಂದ ಬೇಸತ್ತ ಮಹಿಳೆ ಮಕ್ಕಳೊಂದಿಗೆ ಬಾವಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದಾಳೆ. [ಭಿಕ್ಷೆ ಬೇಡದ ಮಗಳನ್ನು ರೈಲು ನಿಲ್ದಾಣದಲ್ಲಿ ಬಿಟ್ಟು ಹೋದ ತಾಯಿ]

belagavi

ಮೃತಪಟ್ಟವರನ್ನು ರಾಧಿಕಾ (5), ಸಂಜನಾ (3), ರಮೇಶ್ (2) ಎಂದು ಗುರುತಿಸಲಾಗಿದೆ. ಶಾಂತವ್ವ ಒಡೆಯರ್ (38) ಪ್ರಾಣಾಪಾಯದಿಂದ ಪಾರಾಗಿದ್ದಾರೆ. [ಹುಕ್ಕೇರಿ: ಅರಳಬೇಕಿದ್ದ ಜೀವಗಳ ಬಲಿ ಪಡೆದ ಶಾಲೆಯ ಗೋಡೆ]

ಕಡಕೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಬಾವಿಗೆ ಬಿದ್ದಿದ್ದ ಶಾಂತವ್ವರನ್ನು ರಕ್ಷಣೆ ಮಾಡಿ, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.[ಹೆತ್ತ ಮಗುವನ್ನೇ ಚರಂಡಿಗೆ ಎಸೆದ ನಿರ್ದಯಿ ತಾಯಿ!]

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
A woman jumped into a well along with Three children at Hulakunda village, Belagavi district on Friday, July 22, 2016.
Please Wait while comments are loading...