ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪ್ರಧಾನಿ ನರೇಂದ್ರ ಮೋದಿ ಕರ್ನಾಟಕ ಭೇಟಿ ರದ್ದು

By Gururaj
|
Google Oneindia Kannada News

ಬೆಳಗಾವಿ, ಜುಲೈ 23 : ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಕರ್ನಾಟಕ ಪ್ರವಾಸ ರದ್ದಾಗಿದೆ. ಬೆಳಗಾವಿಯಲ್ಲಿ ರೈತ ಸಮಾವೇಶ ಉದ್ದೇಶಿಸಿ ನರೇಂದ್ರ ಮೋದಿ ಮಾತನಾಡಬೇಕಿತ್ತು.

ಜುಲೈ 29ರಂದು ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ರೈತ ಸಮಾವೇಶ ಆಯೋಜಿಸಲಾಗಿತ್ತು. ಕರ್ನಾಟಕ ಮಾತ್ರವಲ್ಲದೇ ಮಹಾರಾಷ್ಟ್ರದ ರೈತರು ಸಹ ಸಮಾವೇಶದಲ್ಲಿ ಪಾಲ್ಗೊಳ್ಳಬೇಕಾಗಿತ್ತು.

ಮೋದಿ ಪ್ರವಾಸ ಆರಂಭ: ರ್ವಾಂಡಾ ದೇಶಕ್ಕೆ ಭಾರತದ 200 ಹಸುಗಳ ಕಾಣಿಕೆ ಮೋದಿ ಪ್ರವಾಸ ಆರಂಭ: ರ್ವಾಂಡಾ ದೇಶಕ್ಕೆ ಭಾರತದ 200 ಹಸುಗಳ ಕಾಣಿಕೆ

ರಾಜ್ಯಸಭಾ ಸದಸ್ಯ, ಬಿಜೆಪಿ ನಾಯಕ ಪ್ರಭಾಕರ ಕೋರೆ ಅವರು ಈ ಕುರಿತು ಮಾಹಿತಿ ನೀಡಿದ್ದಾರೆ. 'ಮಳೆ, ನೆರೆ ಮತ್ತು ಸ್ಥಳೀಯ ಸಂಸ್ಥೆಗಳ ಚುನಾವಣೆ ಹಿನ್ನಲೆಯಲ್ಲಿ ನರೇಂದ್ರ ಮೋದಿ ಅವರ ಕಾರ್ಯಕ್ರಮವನ್ನು ಮುಂದೂಡಲಾಗಿದೆ' ಎಂದು ಹೇಳಿದರು.

ಜು.29ರಂದು ಬೆಳಗಾವಿಗೆ ನರೇಂದ್ರ ಮೋದಿ ಭೇಟಿಜು.29ರಂದು ಬೆಳಗಾವಿಗೆ ನರೇಂದ್ರ ಮೋದಿ ಭೇಟಿ

Narendra Modis rally in Belagavi cancelled

ಲೋಕಸಭೆ ಚುನಾವಣೆಗೆ ಸಿದ್ಧತೆ ಆರಂಭಿಸಿರುವ ಬಿಜೆಪಿ ದೇಶಾದ್ಯಂತ 50 ಸಮಾವೇಶಗಳನ್ನು ಆಯೋಜಿಸುತ್ತಿದೆ. ಈ ಸಮಾವೇಶಗಳನ್ನು ಉದ್ದೇಶಿಸಿ ನರೇಂದ್ರ ಮೋದಿ ಅವರು ಮಾತನಾಡಲಿದ್ದಾರೆ. ಈ ಕಾರ್ಯಕ್ರಮದ ಭಾಗವಾಗಿಯೇ ಬೆಳಗಾವಿಯಲ್ಲಿ ಸಮಾವೇಶ ಆಯೋಜಿಸಲಾಗಿತ್ತು.

ಜುಲೈ 29ರಂದು ಚಿಕ್ಕೋಡಿಯಲ್ಲಿ ರೈತ ಸಮಾವೇಶ ಆಯೋಜಿಸಲಾಗಿತ್ತು. ಸಮಾವೇಶದಲ್ಲಿ ಮಹಾರಾಷ್ಟ್ರದ ರೈತರು ಸಹ ಪಾಲ್ಗೊಳ್ಳಬೇಕಿತ್ತು. ರೈತರ ಬೆಳೆಗಳಿಗೆ ಪ್ರೋತ್ಸಾಹ ಧನ ಘೋಷಣೆಯ ಹಿನ್ನಲೆಯಲ್ಲಿ ಸಮಾವೇಶ ಆಯೋಜಿಸಲಾಗಿತ್ತು.

ಕರ್ನಾಟಕ ವಿಧಾನಸಭೆ ಪ್ರಚಾರಕ್ಕೆ ರಾಜ್ಯಕ್ಕೆ ಆಗಮಿಸಿದ್ದ ಮೋದಿ ಚಿಕ್ಕೋಡಿಯಲ್ಲಿ ಬೃಹತ್ ಸಮಾವೇಶ ಉದ್ದೇಶಿಸಿ ಮಾತನಾಡಿದ್ದರು. ಈ ಸಮಾವೇಶಕ್ಕೆ ಉತ್ತಮ ಪ್ರತಿಕ್ರಿಯೆ ಸಿಕ್ಕಿತ್ತು. ಆದ್ದರಿಂದ, ಚಿಕ್ಕೋಡಿಯಲ್ಲಿಯೇ ಸಮಾವೇಶ ನಡೆಸಲು ತೀರ್ಮಾನಿಸಲಾಗಿತ್ತು.

English summary
Prime Minister of India Narendra Modi's July 29, 2018 farmers rally in Chikkodi, Belagavi has been cancelled.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X