ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವೈದ್ಯರ ಮುಷ್ಕರಕ್ಕೆ ಕಾರಣವಾಯಿತೇ ಈ ಅಂಶಗಳು

|
Google Oneindia Kannada News

ಬೆಳಗಾವಿ, ನವೆಂಬರ್ 15 : ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ ಹಾಕುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ನಿಯಂತ್ರಣ ವಿಧೇಯಕಕ್ಕೆ ತೀವ್ರ ಆಕ್ರೋಶಗೊಂಡಿರುವ ರಾಜ್ಯದ ವೈದ್ಯರು ಗುರುವಾರ(n.16)ರಿಂದ ಮುಷ್ಕರಕ್ಕೆ ಇಳಿಯಲಿದ್ದಾರೆ. ಹಾಗಾದರೆ ಖಾಸಗಿ ವೈದ್ಯರ ಕೆಂಗಣ್ಣಿಗೆ ಕಾರಣವಾಗಿರುವ ವಿಧೇಯಕದಲ್ಲಿನ ಅಂಶಗಳು ಯಾವುವು ಗೊತ್ತೆ? ವಿವಿರ ಇಲ್ಲದೆ ನೋಡಿ

ಆರೋಗ್ಯ ಎಮರ್ಜೆನ್ಸಿ: ಸತ್ತವರ ಸಂಖ್ಯೆ 15ಕ್ಕೆ ಏರಿಕೆಆರೋಗ್ಯ ಎಮರ್ಜೆನ್ಸಿ: ಸತ್ತವರ ಸಂಖ್ಯೆ 15ಕ್ಕೆ ಏರಿಕೆ

ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ (ತಿದ್ದುಪಡಿ) ಮಸೂದೆ 2017ರ ಮುಖ್ಯಾಂಶಗಳು ಇಲ್ಲಿವೆ.

* ಸರ್ಕಾರ ನಿಗದಿಪಡಿಸುವು­ದಕ್ಕಿಂತ ಹೆಚ್ಚಿನ ದರವನ್ನು ಖಾಸಗಿ ಆಸ್ಪತ್ರೆಗಳು ಸಂಗ್ರಹಿಸುವಂತಿಲ್ಲ

Private doctors will go indefinite strike from tomorrow

* ಸಂಗ್ರಹ ಮಾಡಿದರೆ 25,000 ದಿಂದ 5 ಲಕ್ಷದವರೆಗೆ ದಂಡ ವಿಧಿಸುವ ಮತ್ತು 6 ತಿಂಗಳಿಂದ ಮೂರು ವರ್ಷಗಳವರೆಗೆ ಜೈಲು ಶಿಕ್ಷೆ

* ತುರ್ತು ಚಿಕಿತ್ಸೆ ಸಂದರ್ಭದಲ್ಲಿ ರೋಗಿಯಿಂದ ಅಥವಾ ಅವರ ಪ್ರತಿನಿಧಿಯಿಂದ ಮುಂಗಡ ಪಾವತಿಸುವಂತೆ ಒತ್ತಾಯ ಮಾಡುವಂತಿಲ್ಲ

* ಆಸ್ಪತ್ರೆಯಲ್ಲಿ ಯಾವುದೇ ವ್ಯಕ್ತಿ ಮೃತಪಟ್ಟರೆ ಸಂಬಂಧಿಕರಿಗೆ ದೇಹ ಹಸ್ತಾಂತರಿಸುವ ಮುನ್ನ ಬಾಕಿ ಮೊತ್ತ ಪಾವತಿಸುವಂತೆ ಒತ್ತಾಯಿಸುವಂತಿಲ್ಲ.

* ರೋಗಿಗಳ ಕುಂದು ಕೊರತೆ ವಿಚಾರಣೆಗೆ ಜಿಲ್ಲಾ ಅಥವಾ ಮಹಾನಗರ ಮಟ್ಟದಲ್ಲಿ ಕುಂದು ಕೊರತೆ ಪರಿಹಾರ ಸಮಿತಿ ರಚಿಸಲು ಅವಕಾಶ

* ಈ ಸಮಿತಿಗೆ ಜಿಲ್ಲಾ ಪಂಚಾ­ಯಿತಿ ಮುಖ್ಯ ಕಾರ್ಯ ನಿರ್ವಹಣಾ­ಧಿಕಾರಿ ಅಧ್ಯಕ್ಷರು. ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ, ಜಿಲ್ಲಾ ಖಾಸಗಿ ವೈದ್ಯಕೀಯ ಸಂಸ್ಥೆಗಳ ಒಬ್ಬ ಪ್ರತಿನಿಧಿ, ಜಿಲ್ಲಾ ಸರ್ಜನ್ ಸರ್ಕಾರಿ ವಕೀಲ ಮತ್ತು ರಾಜ್ಯ ಸರ್ಕಾರ ನಾಮ ನಿರ್ದೇಶನ ಮಾಡಿದ ಮಹಿಳಾ ಪ್ರತಿನಿಧಿಗಳು ಸದಸ್ಯರು

* ಹೊಸ ಮಸೂದೆಯು ಆಸ್ಪತ್ರೆ, ದವಾಖಾನೆ, ನರ್ಸಿಂಗ್‌ ಹೋಂ, ಡೆಂಟಲ್ ಕ್ಲಿನಿಕ್‌, ಡೆಂಟಲ್ ಪಾಲಿ ಕ್ಲಿನಿಕ್, ಚಿಕಿತ್ಸಾ ಪ್ರಯೋಗಾಲಯ, ರೋಗ ನಿಧಾನ ಕೇಂದ್ರ, ಪ್ರಸೂತಿ ಗೃಹ, ರಕ್ತನಿಧಿ, ಕ್ಷ-ಕಿರಣ ಪರೀಕ್ಷಾ ಕೇಂದ್ರ, ಸ್ಕ್ಯಾನಿಂಗ್‌ ಕೇಂದ್ರ, ಫಿಸಿಯೋಥೆರಪಿ ಕೇಂದ್ರ, ಚಿಕಿತ್ಸಾಲಯ, ಪಾಲಿ ಕ್ಲಿನಿಕ್‌, ವೈದ್ಯ ಸಲಹಾ ಕೇಂದ್ರ, ಸಾರ್ವಜನಿಕ ರೋಗ ತಪಾಸಣೆ, ರೋಗ ನಿಧಾನ, ರೋಗ ತಡೆಗಟ್ಟುವಿಕೆ ಅಥವಾ ರೋಗ­ಗುಣಪಡಿಸುವ ಮುಂತಾದ ಹೆಸರಿನಿಂದ ಕರೆಯುವ ಸಂಸ್ಥೆಗಳು, ಸ್ವಯಂ ಸೇವಾ ಅಥವಾ ಖಾಸಗಿ ಸಂಸ್ಥೆಗಳಿಗೆ ಅನ್ವಯ

* ಖಾಸಗಿ ವೈದ್ಯಕೀಯ ಸಂಸ್ಥೆಗಳು ಸಂಬಂಧಿಸಿದ ಪ್ರಾಧಿಕಾರದಲ್ಲಿ ನೋಂದಣಿ ಮಾಡುವುದು ಕಡ್ಡಾಯ. ನೋಂದಣಿ ನಿಬಂಧನೆಗಳು ಮತ್ತು ಷರತ್ತುಗಳನ್ನು ಬದಿಗೊತ್ತಿ ಖಾಸಗಿ ವೈದ್ಯಕೀಯ ಸಂಸ್ಥೆ ಸ್ಥಾಪನೆ ಮಾಡುವಂತಿಲ್ಲ.

English summary
The Indian Medical Association and other medical services organizations have decided to indefinite strike from tomorrow opposing the proposed Karnataka Private Medical Establishment Act.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X