ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಸಚಿವ ಎಂ.ಬಿ.ಪಾಟೀಲ್ ಪ್ರತಿಕೃತಿಗೆ ಚಪ್ಪಲಿ ಹಾರ

By Manjunatha
|
Google Oneindia Kannada News

ನವೆಂಬರ್ 11, ಚಿಕ್ಕೋಡಿ : ಪ್ರತ್ಯೇಕ ಧರ್ಮ ಬೇಡಿಕೆ ಇರಿಸಿಕೊಂಡು ಮಾಡಿದ್ದ ಬೃಹತ್ ಲಿಂಗಾಯತರ ಸಮಾವೇಶದಲ್ಲಿ ಹೋರಾಟದ ಮುಂಚೂಣಿಯಲ್ಲಿರುವ ನೀರಾವರಿ ಸಚಿವ ಎಂ.ಬಿ.ಪಾಟೀಲ್ ಅವರು ಬಿಜೆಪಿ ಲೋಕಸಭಾ ಸದಸ್ಯ ಪ್ರಭಾಕರ್ ಕೋರೆ ಅವರ ವಿರುದ್ಧ ಲಘುವಾದ ಭಾಷೆ ಬಳಸಿದ್ದಾರೆ ಎಂದು ಆರೋಪಿಸಿ ಚಿಕ್ಕೋಡಿಯಲ್ಲಿ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಗೆ ಚಪ್ಪಲಿ ಹಾರ ಹಾಕಿ ಮೆರವಣಿಗೆ ಮಾಡಲಾಯಿತು.

ಮೃತ್ಯುಂಜಯ ಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡ ಎಂ.ಬಿ ಪಾಟೀಲ್ಮೃತ್ಯುಂಜಯ ಸ್ವಾಮಿ ಹೇಳಿಕೆ ಸಮರ್ಥಿಸಿಕೊಂಡ ಎಂ.ಬಿ ಪಾಟೀಲ್

ಚಿಕ್ಕೋಡಿಯ ಪರಟಿ ಲಿಂಗೇಶ್ವರ ಸ್ವಾಮಿ ದೇವಾಲಯದಿಂದ ಪ್ರಾರಂಭಗೊಂಡ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನೂರಾರು ಮಂದಿ ಕೈಗೆ ಕಪ್ಪುಪಟ್ಟಿ ಧರಿಸಿಕೊಂಡು ಸಚಿವ ಎಂ.ಬಿ.ಪಾಟೀಲ್ ವಿರುದ್ಧ ಘೊಷಣೆಗಳನ್ನು ಕೂಗಿದರು ಹಾಗೂ ಚಪ್ಪಲಿ ಹಾರ ಹಾಕಿದ್ದ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಯನ್ನು ಪಟ್ಟಣದಲ್ಲಿ ಮೆರವಣಿಗೆ ಮಾಡಿದರು.

Protest against state minister M.B.Patil

ಪ್ರತಿಭಟನೆಯಲ್ಲಿ ನಿಡಸೋಸಿ ಮಠದ ಪಂಚಮ ಲಿಂಗೇಶ್ವರ ಸ್ವಾಮೀಜಿ ಹಾಗೂ ಇನ್ನು ವಿವಿಧ ಮಠದ ಸ್ವಾಮಿಗಳು ಪಾಲ್ಗೊಂಡಿದ್ದರು. ಜೊತೆಗೆ ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ, ದುರ್ಯೋದನ ಐಹೊಳೆ, ರಾಜು ಕಾಗೆ, ಪಿ.ರಾಜೀವ್ ಭಾಗವಹಿಸಿದ್ದರು.

'ಆದಾಯ ತೆರಿಗೆ ಇಲಾಖೆಯಿಂದ ನನ್ನ ಕುಟುಂಬದ ಫೋನ್ ಕದ್ದಾಲಿಕೆ''ಆದಾಯ ತೆರಿಗೆ ಇಲಾಖೆಯಿಂದ ನನ್ನ ಕುಟುಂಬದ ಫೋನ್ ಕದ್ದಾಲಿಕೆ'

ಅಂತಿಮವಾಗಿ ಸಚಿವ ಎಂ.ಬಿ.ಪಾಟೀಲ್ ಅವರ ಪ್ರತಿಕೃತಿಯನ್ನು ಧಹಿಸಲಾಯಿತು.

English summary
In Chikkodi there is a Protest against State minister M.B.Patil. protesters alleged that minister used loose words against MP Prabhakar Khore. M.B.Patil's replica burnt by protesters
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X