ಆರ್.ಎಸ್.ಎಸ್ ನವರು ವಿಷದ ಬೀಜ ಬಿತ್ತಲು ಬಂದಿದ್ದಾರೆ: ಜಾರಕಿಹೊಳಿ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 21: ಗೋಕಾಕ ಕ್ಷೇತ್ರಕ್ಕೆ 42 ಮಂದಿ ಆರ್.ಎಸ್.ಎಸ್ ನವರು ಬಂದಿದ್ದು ಧರ್ಮದ ನಡುವೆ ವಿಷ ಬಿತ್ತುತ್ತಿದ್ದಾರೆ ಎಂದು ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹೇಳಿದರು.

ಗೋಕಾಕದಲ್ಲಿ ಆಯೋಜಿಸಿದ್ದ ನವಕರ್ನಾಟಕ ನಿರ್ಮಾಣ ಸಮಾವೇಶದಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಜಿಲ್ಲೆಗೆ ಬಂದಿರುವ ಆರ್.ಎಸ್.ಎಸ್‌ನವರು ಜಾತಿ ಸಂಘರ್ಷ ಸೃಷ್ಟಿ ಮಾಡುತ್ತಿದ್ದಾರೆ ಅಂತಹವರ ಬಗ್ಗೆ ಎಚ್ಚರದಿಂದಿರಿ ಎಂದು ಅವರು ಹೇಳಿದರು.

Ramesh Jarakiholi lambasted on BJP and RSS

ಬಿಜೆಪಿಯವರು ಇಲ್ಲಿ ಸುಳ್ಳು ಪ್ರಚಾರ ಮಾಡುತ್ತಿದ್ದಾರೆ. ಎಲ್ಲ ಸಮಾಜದವರನ್ನೂ ಪರಸ್ಪರರ ಮೇಲೆ ಎತ್ತಿ ಕಟ್ಟುತ್ತಿದ್ದಾರೆ ಎಂದು ಅವರು ಆರೋಪಿಸಿದರು.

ತಮ್ಮ ಕುಟುಂಬದಲ್ಲಿ ನಡೆಯುತ್ತಿರುವ ಮನಸ್ಥಾಪದ ಬಗ್ಗೆ ಮಾತನಾಡಿದ ಅವರು ನಮ್ಮ ನಡುವೆ ಏನೇ ಭಿನ್ನಾಭಿಪ್ರಾಯ ಇದ್ದರೂ ನಾನೇ ಹಿಂದೆ ಸರಿದು ಒಟ್ಟಾಗಿ ಕೆಲಸ ಮಾಡುತ್ತೇವೆ. ನನ್ನ ಅಣ್ಣ, ತಮ್ಮಂದಿರ ಬಗ್ಗೆ ಅಪಪ್ರಚಾರ ಮಾಡುತ್ತಿರುವುದರ ಬಗ್ಗೆ ಕಾರ್ಯಕರ್ತರು ತಲೆ ಕೆಡಿಸಿಕೊಳ್ಳಬೇಡಿ. ಅದನ್ನೆಲ್ಲಾ ನಾವು ಸರಿ ಮಾಡಿಕೊಳ್ಳುತ್ತೇವೆ ಎಂದು ಅವರು ಭರವಸೆ ನೀಡಿದರು.

ಜಿಲ್ಲೆಯಲ್ಲಿ ಖಂಡಿತವಾಗಿ ಕಾಂಗ್ರೆಸ್‌ ಅನ್ನು 10ರಿಂದ 12 ಸ್ಥಾನ ಗೆಲ್ಲಿಸುತ್ತೇವೆ ಎಂದು ಅವರು ಭರವಸೆ ನೀಡಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Congress MLA Ramesh Jarakiholi said 42 RSS members has came to Belagavi to set quarrel between religions. Belagavi peoples should be careful about them. He also said their is some problems in our family but we will solve our self that.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ