ಬೆಳಗಾವಿ : ಇಬ್ಬರು ಶಾಲಾ ಬಾಲಕಿಯರು ನಾಪತ್ತೆ

Posted By: Gururaj
Subscribe to Oneindia Kannada

ಬೆಳಗಾವಿ, ಡಿಸೆಂಬರ್ 01 : ಶಾಲೆಗೆ ತೆರಳಿದ್ದ ಇಬ್ಬರು ಬಾಲಕಿಯರು ನಾಪತ್ತೆಯಾದ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಸದಲಗಾ ಪೊಲೀಸರು ಪ್ರಕರಣ ದಾಖಲು ಮಾಡಿಕೊಂಡಿದ್ದು, ಹುಡುಕಾಟ ಆರಂಭಿಸಿದ್ದಾರೆ.

ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಬೋರಗಾಂವ್ ಗ್ರಾಮದ ಪ್ರೌಢ ಶಾಲಾ ವಿದ್ಯಾರ್ಥಿನಿಯರು ನಾಪತ್ತೆಯಾಗಿದ್ದಾರೆ. ಬೋರಗಾಂವ್ ಗ್ರಾಮದ ಖಾಸಗಿ ಶಾಲೆಯಲ್ಲಿ 9ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ ಇಬ್ಬರು ನಾಪತ್ತೆಯಾಗಿದ್ದಾರೆ.

Sadalga police hunt for two missing 15-year-old schoolgirls

ಶಾಲು ಮಿಶ್ರಾ (15) ಆರತಿ ಪಾಟೀಲ್ (15) ನಾಪತ್ತೆಯಾದ ಬಾಲಕಿಯರು. ಗುರುವಾರ ಮುಂಜಾನೆ ಶಾಲೆಗೆ ಹೋಗಿ ಬರುವುದಾಗಿ ಹೇಳಿ ಹೋದ ಬಾಲಕಿಯರು. ನಂತರ ಮನೆಗೆ ವಾಪಸ್ ಆಗಿಲ್ಲ.

ಸಂಜೆಯಾದರೂ ವಿದ್ಯಾರ್ಥಿಗಳು ಮನಗೆ ಆಗಮಿಸದ ಕಾರಣ ಸದಲಗಾ ಪೊಲೀಸ್ ಠಾಣೆಗೆ ಪೋಷಕರು ದೂರು ನೀಡಿದ್ದಾರೆ. ವಿದ್ಯಾರ್ಥಿಗಳನ್ನು ಅಪಹರಣ ಮಾಡಿರಬಹುದು ಎಂದು ಶಂಕಿಸಲಾಗಿದೆ.

ಅಪಹರಣ ಪ್ರಕರಣ ದಾಕಲಿಸಿಕೊಂಡು ಬಾಲಕಿಯರಿಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Belagavi district Sadalga police have launched an urgent hunt for two missing 15-year-old schoolgirls who disappeared after going to the school on November 30, 2017.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ