ಸಿದ್ದರಾಮಯ್ಯ ವಿರುದ್ಧ ಸತೀಶ್ ಜಾರಕಿಹೊಳಿ ಗರಂ!

Posted By: Gururaj
Subscribe to Oneindia Kannada

ಬೆಳಗಾವಿ, ಡಿಸೆಂಬರ್ 06 : ಮಾಜಿ ಸಚಿವ ಸತೀಶ್ ಜಾರಕಿಹೊಳಿ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅಸಮಾಧಾನಗೊಂಡಿದ್ದಾರೆ. ಬೆಳಗಾವಿ ದಕ್ಷಿಣ ಕ್ಷೇತ್ರದ ಅಭ್ಯರ್ಥಿ ಘೋಷಣೆ ಮಾಡಿರುವುದು ಅಸಮಾಧಾನಕ್ಕೆ ಕಾರಣ.

ಬೆಳಗಾವಿ ದಕ್ಷಿಣ ಕ್ಷೇತ್ರದಿಂದ ವಿಧಾನಪರಿಷತ್ ಸದಸ್ಯ, ಕೆಪಿಸಿಸಿ ಹಿಂದುಳಿದ ಘಟಕದ ಅಧ್ಯಕ್ಷ ಎಂ.ಡಿ.ಲಕ್ಷ್ಮೀ ನಾರಾಯಣ ಅವರನ್ನು ಕಣಕ್ಕಿಳಿಸುವುದಾಗಿ ಸಿದ್ದರಾಮಯ್ಯ ಘೋಷಣೆ ಮಾಡಿದ್ದಾರೆ. ಇದರಿಂದ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ.

ಬೆಳಗಾವಿಯಲ್ಲಿ ಕಾಂಗ್ರೆಸ್‌ ಗೆಲ್ಲಿಸಲು 'ಮಿಷನ್ 12' ತಂತ್ರ!

Satish Jarkiholi upset with Chief Minister Siddaramaiah

ಬೆಳಗಾವಿ ದಕ್ಷಿಣ ಕ್ಷೇತ್ರದಲ್ಲಿ 35 ಸಾವಿರಕ್ಕೂ ಹೆಚ್ಚು ನೇಕಾರ ಸಮುದಾಯದವರಿದ್ದಾರೆ. ಆದ್ದರಿಂದ, ಕ್ಷೇತ್ರದಲ್ಲಿ ಎಂ.ಡಿ.ಲಕ್ಷ್ಮೀ ನಾರಾಯಣ ಅವರಿಗೆ ಟಿಕೆಟ್ ನೀಡಿ, ಚುನಾವಣೆಯಲ್ಲಿ ಗೆಲುವು ಸಾಧಿಸುವುದು ಸಿದ್ದರಾಮಯ್ಯ ಅವರ ತಂತ್ರ.

ಪ್ರತ್ಯೇಕ ರಾಜ್ಯದ ಬೇಡಿಕೆ ಇಡಬೇಡಿ : ಸಿದ್ದರಾಮಯ್ಯ

Satish Jarkiholi upset with Chief Minister Siddaramaiah

ಪಕ್ಷದ ಜಿಲ್ಲಾ ಮುಖಂಡರ ಅನುಮತಿಯನ್ನು ಪಡಯದೇ ಸಿದ್ದರಾಮಯ್ಯ ಅಭ್ಯರ್ಥಿ ಘೋಷಣೆ ಮಾಡಿರುವುದಕ್ಕೆ ಸತೀಶ್ ಜಾರಕಿಹೊಳಿ ಅಸಮಾಧಾನಗೊಂಡಿದ್ದಾರೆ. ಅದು ಹೇಗೆ? ಟಿಕೆಟ್ ನೀಡುತ್ತಾರೆ ಎಂದು ಜಿಲ್ಲಾ ನಾಯಕರ ಸಮ್ಮುಖದಲ್ಲಿ ಪ್ರಶ್ನಿಸಿದ್ದಾರೆ.

ಹಿಂದುಳಿದ ವರ್ಗದ ನಾಯಕರು ಅವರೊಬ್ಬರೆನಾ?. ಬೇರೆ ಯಾವ ನಾಯಕರೂ ಇಲ್ಲವೇ? ಎಂದು ಜಾರಕಿಹೊಳಿ ಅಸಮಾಧಾನ ಹೊರಹಾಕಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಕುರಿತು ಯಾವುದೇ ಪ್ರತಿಕ್ರಿಯೆ ನೀಡಿಲ್ಲ.

ಹಿಂದೆ ಸಿದ್ದರಾಮಯ್ಯ ಸಂಪುಟದಲ್ಲಿ ಸತೀಶ್ ಜಾರಕಿಹೊಳಿ ಅವರು ಅಬಕಾರಿ ಸಚಿವರಾಗಿದ್ದರು. ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿ, ಬೇರೆ ಖಾತೆ ನೀಡಬೇಕು ಎಂದು ಪಟ್ಟು ಹಿಡಿದಿದ್ದರು. ನಂತರ ಖಾತೆ ಬದಲಾವಣೆ ಮಾಡಲಾಗಿತ್ತು. ನಂತರ ಸಂಪುಟ ಪುನಾರಚನೆ ಸಮಯದಲ್ಲಿ ಸಂಪುಟದಿಂದ ಕೈ ಬಿಟ್ಟು ರಮೇಶ ಜಾರಕಿಹೊಳಿ ಅವರನ್ನು ಸಂಪುಟಕ್ಕೆ ಸೇರಿಸಿಕೊಳ್ಳಲಾಗಿತ್ತು.

ಜಾರಕಿಹೊಳಿ ರಾಜೀನಾಮೆ : 6 ಪ್ರಮುಖ ಬೆಳವಣಿಗೆಗಳು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Former minister and Belagavi Congress leader Satish Jarkiholi upset with Chief Minister Siddaramaiah over issuing Belagavi South Belagavi South assembly constituency 2018 election ticket for Legislative Council member M. D. Lakshminarayana.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ