ಸಿದ್ದರಾಮಯ್ಯ ಕಮಿಷನ್ ಏಜೆಂಟ್ : ಬಿಎಸ್ ವೈ ಆರೋಪ

Posted By: Nayana
Subscribe to Oneindia Kannada

ಬೆಳಗಾವಿ, ನವೆಂಬರ್ 17 : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಮಿಷನ್ ಏಜೆಂಟ್ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಅವರು ಗಂಭೀರವಾಗಿ ಆರೋಪಿಸಿದರು.

ಬಿಜೆಪಿ ಅಧಿಕಾರಕ್ಕೆ ಬಂದ 24 ಗಂಟೆಯಲ್ಲಿ ಕೆಪಿಎಂಇ ಕಾಯ್ದೆ ರದ್ದು

ಬೈಲಹೊಂಗಲದಲ್ಲಿ ಶುಕ್ರವಾರ(ನ.17)ರಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರಕ್ಕೆ ಬಿಬಿಎಂಪಿ ಕಾರ್ನರ್ ಸೈಟ್ ಒತ್ತೆಯಿಟ್ಟು ಸಾಲ ಮಾಡುವ ಸ್ಥಿತಿ ನಿರ್ಮಾಣವಾಗಿದೆ. ಎಂಎಎಲ್ ನಲ್ಲಿ ಫಿಕ್ಸೆಡ್ ರೂಪದಲ್ಲಿ ಇಟ್ಟ ಹಣವನ್ನು ತೆಗೆದುಕೊಂಡಿದ್ದಾರೆ.

ಚಿತ್ರಗಳು : ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ

Siddaramaiah is Commission Agent : BSY

ಶಾಸಕ, ವಿಧಾನ ಪರಿಷತ್ ಸದಸ್ಯರಿಗೆ ಮೂರು ತಿಂಗಳಿನಿಂದ ಸಂಬಳ ನೀಡಿಲ್ಲ, ವಿದ್ಯಾರ್ಥಿಗಳ ಲ್ಯಾಪ್ ಟಾಪ್ ಖರೀದಿಯಲ್ಲಿ ಕೂಡ ರಾಜ್ಯ ಸರ್ಕಾರ ಅಕ್ರಮವೆಸಗಿದೆ. ಒಂದು ಲ್ಯಾಪ್ ಟಾಪ್ ಗೆ ಕಳೆದ ವರ್ಷಕ್ಕಿಂತ 10 ಸಾವಿರ ಹೆಚ್ಚಿನ ಹಣವನ್ನು ಪಾವತಿ ಮಾಡಲಾಗಿದೆ.ಇದನ್ನು ಪ್ರಶಸ್ನಿಸಿದ ಪ್ರಾಮಾಣಿಕ ಅಧಿಕಾರಿಗೆ ವರ್ಗಾವಣೆ ಶಿಕ್ಷೆ ವಿಧಿಸಲಾಗಿದೆ ಇಷ್ಟೆಲ್ಲಾ ಮಾಡಿದ ಮುಖ್ಯಮಂತ್ರಿಯವರನ್ನು ಕಮಿಷನ್ ಏಜೆಂಟ್ ಎನ್ನದೆ ಏನೆಂದು ಕರೆಯಬೇಕು ಎಂದು ಪ್ರಶ್ನಿಸಿದರು.

ಮುಂದುವರೆದು ಮಾತನಾಡಿ, ಸರ್ಕಾರಿ ಆಸ್ಪತ್ರೆಗಳಲ್ಲಿರುವ ಸೌಲಭ್ಯವನ್ನು ಉತ್ತಮಗೊಳಿಸಬೇಕು. ಅದನ್ನು ಬಿಟ್ಟು ಹೊಸ ಕಾನೂನು ರೂಪಿಸಲು ಮುಂದಾಗಿದ್ದಾರೆ. ವೈದ್ಯರ ಮನವೊಲಿಸಲು ಸರ್ಕಾರ ವಿಫಲವಾಗಿದೆ.

ಪರಿವರ್ತನಾ ಯಾತ್ರೆಯಲ್ಲಿ ಅಭ್ಯರ್ಥಿಗಳನ್ನು ಘೋಷಿಸುತ್ತಿಲ್ಲ : ಬಿಎಸ್‌ವೈ

ರಾಜ್ಯಾದ್ಯಂತ ಬಿಜೆಪಿ ಪರಿವರ್ತನಾ ಯಾತ್ರೆ ವಿಚಾರವಾಗಿ ಮಾತನಾಡಿದ ಅವರು, ಪರಿವರ್ತನಾ ಯಾತ್ರೆಗೆ ಬೆಳಗಾವಿಯಲ್ಲಿ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಶುಕ್ರವಾರ(ನ.17) ಕಿತ್ತೂರು, ಬೈಲಹೊಂಗಲ ಮತ್ತು ಸವದತ್ತಿ ಯಾತ್ರೆಯನ್ನು ಕೈಗೊಂಡಿದ್ದೇವೆ. ಬೆಳಗಾವಿಯ ಸುವರ್ಣಸೌಧ ಕನ್ನಡಿಗರ ಸ್ವಾಭಿಮಾನದ ಪ್ರತೀಕ ಎಂದರು.

ಸುವರ್ಣಸೌಧಕ್ಕೆ ಪ್ರಮುಖ ಕಚೇರಿಗಳನ್ನು ಸ್ಥಳಾಂತರಿಸಬೇಕು ಎನ್ನುವ ಆಸೆ ಇದೆ. ವರ್ಷದ365 ದಿನಗಳು ಸೌಧದಲ್ಲಿ ಚಟುವಟಿಕೆಗಳು ನಡೆಯಬೇಕು. ಅಧಿವೇಶನ ಸಂದರ್ಭದಲ್ಲಿ ಆಡಳಿತ ಪಕ್ಷ ವಿರೋಧ ಸದಸ್ಯರು ಗೈರಾಗಿದ್ದರು. ಇದು ಯಾರಿಗೂ ಶೋಭೆ ತರುವುದಿಲ್ಲ ಎಂದು ಹೇಳಿದರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
BJP State Vice president B.S.Yeddyurappa Blamed that Siddaramaiah is Commission Agent,

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ