ಬಾಕಿ ಹಣ ನೀಡುವಂತೆ ಒತ್ತಾಯಿಸಿ ಕಬ್ಬು ಬೆಳೆಗಾರರ ಪ್ರತಿಭಟನೆ

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 22 : ಬೆಳಗಾವಿ ಜಿಲ್ಲೆಯ ಉಸ್ತುವಾರಿ ಸಚಿವ ರಮೇಶ್ ಜಾರಕಿಹೋಳಿ ಒಡೆತನದ ಸೌಭಾಗ್ಯ ಲಕ್ಷ್ಮೀ ಸಕ್ಕರೆ ಕಾರ್ಖಾನೆ ಕಬ್ಬು ಕಳಿಸಿದ ರೈತರಿಗೆ ಬರಬೇಕಾದ ಬಾಕಿ ಹಣ ನೀಡಿದ ಹಿನ್ನಲೆ ರೈತರು ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಎಂಇಎಸ್ ಬೆಂಬಲಿಸಿದ ಮೇಯರ್ ವಿರುದ್ಧ ಕ್ರಮ: ರಮೇಶ್ ಜಾರಕಿಹೊಳಿ

ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಎರಡು ದಿನಗಳಿಂದ ರೈತರು .ಅರೆಬೆತ್ತಲೆ ಪ್ರತಿಭಟನೆ ಮಾಡುತ್ತಿದ್ದಾರೆ. ಕಬ್ಬು ಬೆಳಗಾಗರಿಗೆ ಮೂರು ವರ್ಷದಿಂದ ಬಾಕಿ ಹಣವನ್ನು ನೀಡದೆ ಸತಾಯಿಸುತ್ತಿದ್ದಾರೆ. ನಾವು ಕಬ್ಬುಬೆಳೆಯನ್ನು ನಂಬಿಕೊಂಡೇ ನಮ್ಮ ಸಂಸಾರವನ್ನು ಸಾಗಿಸುತ್ತಿದ್ದೇವೆ. ಹಣವನ್ನು ನೀಡದೆ ಸಚಿವ ರಮೇಶ್ ಜಾರಕಿಹೊಳಿ ಸತಾಯಿಸುತ್ತಿದ್ದಾರೆ ಎಂದು ರೈತರು ತಮ್ಮ ಅಳಲು ತೋಡಿಕೊಂಡರು.

Sugarcane farmers hold topless protest demanding settlement of arrears

ರೈತರು ಸರ್ಕಾರದ ವಿರುದ್ದ ನಾಟಕ ಮಾಡಿ ಆಕ್ರೋಶ ವ್ಯಕ್ತಪಡಿಸಿದ ವ್ಯಕ್ತಡಿಸಿದರು. ಸಿದ್ದರಾಮಯ್ಯ ಅವರು ಶುಕ್ರವಾರ ಮತ್ತು ಶನಿವಾರ ಜಿಲ್ಲೆಯ ಪ್ರವಾಸದಲ್ಲಿದ್ದಾರೆ. ಸಿ.ಎಂ ಸಿದ್ದರಾಮಯ್ಯ ಬಂದು ಬಾಕಿ ಕೊಡಿಸುವರೆಗೆಪ್ರತಿಭಟನೆ ಮುಂದುವರೆಸುತ್ತೇವೆ ಎಂದು ರೈತರು ಹೇಳಿದ್ದಾರೆ. ಬಾಕಿ ಕೊಡದ ಸರ್ಕಾರದ ವಿರುದ್ದ ಬೆಳಗಾವಿ ರೈತರ ಹೋರಾಟ. ರೈತರ ಪ್ರತಿಭಟನೆಯಿಂದ ಸರ್ಕಾರದ ಸಾಧನಾ ಸಮಾವೇಶ ಇರುಸು ಮುರುಸುಗೊಂಡಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Farmers stripped down to the waist as part of their indefinite dharna in front of Soubhagya Lakshmi Sugar Factory at Belagaum. Demanding clearence bills from Soubhagya lakshmi sugar Factory in Hiremandi owned by District minister Remesh jarkiholi.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ