ಬೆಳಗಾವಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

10 ದಿನದ ಚಳಿಗಾಲದ ಅಧಿವೇಶನಕ್ಕೆ ಸುವರ್ಣ ವಿಧಾನಸೌಧ ಸಿದ್ಧ

|
Google Oneindia Kannada News

ಬೆಳಗಾವಿ, ಡಿಸೆಂಬರ್ 09 : 10 ದಿನಗಳ ಕಾಲ ನಡೆಯುವ ಚಳಿಗಾಲದ ಅಧಿವೇಶನಕ್ಕೆ ಬೆಳಗಾವಿಯ ಸುವರ್ಣ ವಿಧಾನಸೌಧ ಸಜ್ಜಾಗಿದೆ. ಮೊದಲ ದಿನ ಪ್ರತಿಪಕ್ಷ ಬಿಜೆಪಿ ಬೃಹತ್ ರೈತ ಸಮಾವೇಶ ಆಯೋಜನೆ ಮಾಡಿದ್ದು, ಸರ್ಕಾರದ ವಿರುದ್ಧ ಪ್ರತಿಭಟನೆ ನಡೆಸಲಿದೆ.

ಡಿಸೆಂಬರ್ 10ರ ಸೋಮವಾರದಿಂದ ಹತ್ತು ದಿನಗಳ ಕಾಲ ಚಳಿಗಾಲದ ಅಧಿವೇಶನ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯಲಿದೆ. ಅಧಿವೇಶನದ ಭದ್ರತೆಗಾಗಿ 4 ಸಾವಿರ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ.

ಬೆಳಗಾವಿ: ಡಿ.ಕೆ.ಶಿವಕುಮಾರ್ ಸಂಧಾನ ಯಶಸ್ವಿ, ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್ಬೆಳಗಾವಿ: ಡಿ.ಕೆ.ಶಿವಕುಮಾರ್ ಸಂಧಾನ ಯಶಸ್ವಿ, ಕಬ್ಬು ಬೆಳೆಗಾರರ ಪ್ರತಿಭಟನೆ ವಾಪಸ್

ಅಧಿವೇಶನದ ಖರ್ಚು ವೆಚ್ಚಗಳು ಪಾರದರ್ಶಕರಾಗಿರಬೇಕು. ಸರ್ಕಾರದ ಹಣ ದುರುಪಯೋಗವಾಗಬಾರದು ಎಂಬ ಕಾರಣಕ್ಕೆ ಇದೇ ಮೊದಲ ಬಾರಿಗೆ ಐಎಎಸ್ ಅಧಿಕಾರಿ ಉಜ್ಜಲ್ ಕುಮಾರ್ ಘೋಷ್ ಅವರನ್ನು ವಿಶೇಷ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ.

ಜಾರಕಿಹೊಳಿ ದೊಡ್ಡವರು, ಅವ್ರ ಬಗ್ಗೆ ಮಾತಾಡಲ್ಲ ಎಂದು ಡಿಕೆಶಿ ಟಾಂಗ್ಜಾರಕಿಹೊಳಿ ದೊಡ್ಡವರು, ಅವ್ರ ಬಗ್ಗೆ ಮಾತಾಡಲ್ಲ ಎಂದು ಡಿಕೆಶಿ ಟಾಂಗ್

ವಿಧಾಸನಸಭೆ ಸ್ಪೀಕರ್ ರಮೇಶ್ ಕುಮಾರ್ ಅವರ ಆಶಯದಂತೆ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಸೋಮವಾರ ಬೆಳಗ್ಗೆ ಬೆಳಗಾವಿಗೆ ಆಗಮಿಸಲಿದ್ದಾರೆ.

ಡಿಸೆಂಬರ್ 17ರಂದು ಬೆಳಗಾವಿ ಕೆಎಟಿ ಪೀಠ ಲೋಕಾರ್ಪಣೆಡಿಸೆಂಬರ್ 17ರಂದು ಬೆಳಗಾವಿ ಕೆಎಟಿ ಪೀಠ ಲೋಕಾರ್ಪಣೆ

ಹಲವು ಪ್ರತಿಭಟನೆ

ಹಲವು ಪ್ರತಿಭಟನೆ

ಮೊದಲ ದಿನ ಹಲವು ಸಂಘಟನೆಗಳ ಪ್ರತಿಭಟನೆ ನಡೆಯಲಿದೆ. ಕಬ್ಬು ಬೆಳೆಗಾರರು, ಉತ್ತರ ಕರ್ನಾಟಕದ ವಿವಿಧ ಮಠಾಧೀಶರು ಸರ್ಕಾರದ ವಿರುದ್ಧ ನಡೆಯುವ ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಬಿಜೆಪಿ ನಾಯಕರು ರೈತರ ಪ್ರತಿಭಟನೆಗೆ ಬೆಂಬಲ ನೀಡಿದ್ದಾರೆ. ಮೈತ್ರಿ ಸರ್ಕಾರಕ್ಕೆ ಮೊದಲ ದಿನವೇ ಪ್ರತಿಭಟನೆ ಬಿಸಿ ತಟ್ಟಲಿದೆ.

ಶಾಸಕರ ಊಟಕ್ಕೆ ಕತ್ತರಿ

ಶಾಸಕರ ಊಟಕ್ಕೆ ಕತ್ತರಿ

ಅಧಿವೇಶನದಲ್ಲಿ ಭಾಗವಹಿಸುವ ಶಾಸಕರಿಗೆ ಈ ಬಾರಿ ಕೇವಲ ಮಧ್ಯಾಹ್ನದ ಊಟದ ವ್ಯವಸ್ಥೆ ಮಾಡಲಾಗಿದೆ. ಬೆಳಗಿನ ಉಪಹಾರ ಮತ್ತು ರಾತ್ರಿ ಊಟವನ್ನು ಶಾಸಕರು ತಮಗೆ ಸಿಗುವ ಭತ್ಯೆಯಲ್ಲಿಯೇ ಸೇವಿಸಬೇಕು. ತಮ್ಮ ಪಿಎ, ಗನ್‌ಮ್ಯಾನ್, ಡ್ರೈವರ್‌ಗಳ ಊಟಕ್ಕೆ ಶಾಸಕರೇ ವೆಚ್ಚ ಭರಿಸಬೇಕು. ಶಾಸಕರಿಗೆ ಮಾತ್ರ ರೂಂ ವ್ಯವಸ್ಥೆ ಮಾಡಲಾಗಿದೆ.

ಸಚಿವಾಲಯ ಶಿಫ್ಟ್‌

ಸಚಿವಾಲಯ ಶಿಫ್ಟ್‌

10 ದಿನಗಳ ಅಧಿವೇಶನಕ್ಕಾಗಿ ವಿಧಾನಸಭೆ ಮತ್ತು ವಿಧಾನ ಪರಿಷತ್‌ನ ಎರಡೂ ಸಚಿವಾಲಯಗಳು ಸುವರ್ಣ ವಿಧಾನಸೌಧಕ್ಕೆ ಸ್ಥಳಾಂತರಗೊಂಡಿವೆ. ಸುಮಾರು 300 ಸಿಬ್ಬಂದಿ ಶನಿವಾರದಿಂದ ಬೆಳಗಾವಿಯಲ್ಲಿ ಕೆಲಸ ಆರಂಭಿಸಿದ್ದಾರೆ. ಐದು ಸಾವಿರ ಅಧಿಕಾರಿಗಳು, ಶಾಸಕರು, ಪತ್ರಕರ್ತರಿಗೆ ಮಾತ್ರ ಊಟ, ವಸತಿ, ಸಾರಿಗೆ ವ್ಯವಸ್ಥೆ ಮಾಡಲಾಗಿದೆ.

17.57 ಕೋಟಿ ವೆಚ್ಚ

17.57 ಕೋಟಿ ವೆಚ್ಚ

ಬೆಳಗಾವಿಯಲ್ಲಿ ನಡೆಯುವ 10 ದಿನದ ಅಧಿವೇಶನಕ್ಕೆ 17.57 ಕೋಟಿ ರೂ. ವೆಚ್ಚ ನಿಗದಿ ಮಾಡಲಾಗಿದೆ. ಭದ್ರತೆಗೆ ನಿಯೋಜನೆಗೊಳ್ಳುವ ಪೊಲೀಸರಿಗೆ ಎಲ್ಲಾ ವ್ಯವಸ್ಥೆಗಳನ್ನು ಕಲ್ಪಿಸಿಕೊಡಲಾಗಿದೆ.

English summary
The winter session of the Legislature starting on Monday, December 10 at the Suvarna Vidhana Soudha in Belagavi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X