ಬೆಳಗಾವಿ: ಕಿತ್ತೂರು ಉತ್ಸವಕ್ಕೆ ಸಂಭ್ರಮದ ಚಾಲನೆ

Posted By:
Subscribe to Oneindia Kannada

ಬೆಳಗಾವಿ, ಅಕ್ಟೋಬರ್ 23: ಕಿತ್ತೂರು ಉತ್ಸವದ ಅಂಗವಾಗಿ ಬೆಳಗಾವಿ ಜಿಲ್ಲೆಯಾದ್ಯಂತ ಸಂಚರಿಸಿದ ವೀರಜ್ಯೋತಿಯನ್ನು ಕಿತ್ತೂರು ಮಹಾದ್ವಾರದ ಬಳಿ ಭಾನುವಾರದಂದು ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಅವರು ಬರಮಾಡಿಕೊಂಡರು.

ಕಿತ್ತೂರು ಚೆನ್ನಮ್ಮ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಉತ್ಸವಕ್ಕೆ ಚಾಲನೆ ನೀಡಿದರು.

Three-day Kittur Utsav commences in Belagavi

ಇದಕ್ಕೂ ಮುನ್ನ ಬೆಳಗಾವಿಯಿಂದ 6 ಕಿ.ಮೀ ದೂರದಲ್ಲಿರುವ ಕಾಕತಿಯಲ್ಲಿ ರಾಣಿ ಚೆನ್ನಮ್ಮ ಮೂರ್ತಿಗೆ ರಮೇಶ್ ಜಾರಕಿಹೊಳಿ ಅವರು ಮಾಲಾರ್ಪಣೆ ಮಾಡಿ ಪೂಜೆ ಸಲ್ಲಿಸಿದರು.

Three-day Kittur Utsav commences in Belagavi

ನಂತರ ಕಿತ್ತೂರಿನಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಚಿವರಾದ ರಮೇಶ ಜಾರಕಿಹೊಳಿ, ಕಂದಾಯ ಇಲಾಖೆಯ ಸಂಸದೀಯ ಕಾರ್ಯರ್ಶಿ ಗಣೇಶ ಹುಕ್ಕೇರಿ, ಮುಖ್ಯ ಸಚೇತಕ ಅಶೋಕ ಪಟ್ಟಣ, ಜಿಪಂ ಅಧ್ಯಕ್ಷರಾದ ಆಶಾ ಐಹೊಳೆ, ಶಾಸಕರಾದ ಡಿ.ಬಿ.ಇನಾಂದಾರ್, ವಿ.ಐ.ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.

Three-day Kittur Utsav commences in Belagavi

ಅಕ್ಟೋಬರ್ 23ರಿಂದ ಮುರು ದಿನಗಳ ಕಾಲ ಉತ್ಸವ ನಡೆಯಲಿದೆ. ಉತ್ಸವದ ಅಂಗವಾಗಿ ಬೆಳಗಾವಿ ಜಿಲ್ಲೆಯಾದ್ಯಂತ ವೀರಜ್ಯೋತಿ ಸಂಚರಿಸಿತ್ತು. ಭಾನುವಾರ ಸಂಜೆಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಳ್ಳಲಿವೆ.
Three-day Kittur Utsav commences in Belagavi

ಬ್ರಿಟಿಷರ ವಿರುದ್ಧ ಹೋರಾಟ ನಡೆಸಿದ ಮೊದಲ ಮಹಿಳಾ ಸ್ವಾತಂತ್ರ್ಯ ಹೋರಾಟಗಾರ್ತಿ ವೀರ ರಾಣಿ ಚೆನ್ನಮ್ಮ ಅವರು ಅಕ್ಟೋಬರ್ 23, 1824ರಂದು ತೋರಿದ ಪರಾಕ್ರಮದ ನೆನಪಿಗಾಗಿ ಪ್ರತಿ ವರ್ಷ ಕಿತ್ತೂರು ಉತ್ಸವವನ್ನು ವಿಜಯೋತ್ಸವವಾಗಿ ಕರ್ನಾಟಕ ಸರ್ಕಾರ ಆಚರಿಸುತ್ತಾ ಬಂದಿದೆ.

Three-day Kittur Utsav commences in Belagavi

ಮೆರವಣಿಗೆಯಲ್ಲಿ ನಾಡಿನ ಕಲೆ-ಸಾಂಸ್ಕೃತಿಕ ಪರಂಪರೆ ಬಿಂಬಿಸಿದ ಕಲಾ ತಂಡಗಳು..

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Three-day Kittur Utsav commenced today(October 23) in Belagavi. Small Scale Industries and District In-charge minister Ramesh L. Jarkiholi inaugurated the procession. Kittur Utsav celebrated to mark the heroic rebellion of warrior queen Rani Chennamma against the British regime on October 23 in 1824,
Please Wait while comments are loading...