ಬೆಳಗಾವಿ : ಕಾರು ಪಲ್ಟಿ, ಇಬ್ಬರು ವಿದ್ಯಾರ್ಥಿಗಳ ಸಾವು

Posted By: Gururaj
Subscribe to Oneindia Kannada

ಬೆಳಗಾವಿ, ನವೆಂಬರ್ 5 : ಬೆಳಗಾವಿ ಹೊರವಲಯದಲ್ಲಿ ಭೀಕರ ರಸ್ತೆ ಅಪಘಾತ ನಡೆದಿದ್ದು ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಭಾನುವಾರ ಮುಂಜಾನೆ ಬೆಳಗಾವಿ ಹೊರವಲಯದಲ್ಲಿ ಕಾರು ಪಲ್ಟಿಯಾಗಿ ಈ ಅಪಘಾತ ನಡೆದಿದೆ. ಕಾರಿನಲ್ಲಿದ್ದ ನಿಶಾ (22), ಜಯಂತ್ ರಾವ್ (22) ಸ್ಥಳದಲ್ಲಿಯೇ ಮೃತಪಟ್ಟಿದ್ದಾರೆ. ಅನಸುಮಾನ್ ಕಮಾರ್ ಎಂಬುವವರು ಗಂಭೀರವಾಗಿ ಗಾಯಗೊಂಡಿದ್ದು, ಬೆಳಗಾವಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ರಸ್ತೆ ಅಪಘಾತ : ಒಂದು ಗಂಟೆ ರಸ್ತೆಯಲ್ಲಿ ನರಳಾಡಿದ ಬೈಕ್ ಸವಾರ

Two killed, one injured after car overturns in Belagavi

ಭಾನುವಾರ ಮುಂಜಾನೆ 2.45ರ ಸುಮಾರಿಗೆ ಒಕ್ಸ್ ವ್ಯಾಗನ್ ಕಾರು ಪಲ್ಟಿಯಾಗಿ ಈ ಅಪಘಾತ ನಡೆದಿದೆ. ಮೂವರು ವಿದ್ಯಾರ್ಥಿಗಳು ಕಾರಿನಲ್ಲಿ ಹೋಗುತ್ತಿದ್ದಾಗ ಕಾರು ಪಲ್ಟಿಯಾಗಿದೆ. ವಿದ್ಯಾರ್ಥಿಗಳು ಬೆಳಗಾವಿಯ ಖಾಸಗಿ ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಮೃತಪಟ್ಟ ಇಬ್ಬರು ಬಿಹಾರ ಮೂಲದವರಾಗಿದ್ದಾರೆ.

ಮುಖ್ಯಮಂತ್ರಿ ಸಾಂತ್ವನ-'ಹರೀಶ್' ಯೋಜನೆ ಬಗ್ಗೆ ತಿಳಿಯಿರಿ

Two killed, one injured after car overturns in Belagavi

ಹಿರೇಬಾಗೆವಾಡಿ ಪೊಲೀಸ್ ಇನ್ಸ್‌ಪೆಕ್ಟರ್ ಸಿ.ಎಸ್ ಪಾಟೀಲ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಹಿರೇಬಾಗೆವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ದೇಹ ಎರಡು ತುಂಡಾದರೂ ಕಣ್ಣು ದಾನ ಮಾಡಿ ಬೆಳಕಾದರು

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Two students were killed and another was seriously injured when the speeding car overturns in Belagavi on Sunday, November 5 early morning.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ