'ಟ್ರಿಬ್ಯುನಲ್ ಆದೇಶದವರೆಗೂ ಮಹದಾಯಿ ನೀರು ಕೊಡಲ್ಲ'

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಜನವರಿ 13: ಕಳಸಾ ಬಂಡೂರಿ ನಾಲಾ ಕಾಮಗಾರಿ ಕೈಗೊಳ್ಳುವ ಮೂಲಕ ಕರ್ನಾಟಕ ಸರ್ಕಾರ ಸುಪ್ರೀಂಕೋರ್ಟ್ ಆದೇಶ ಉಲ್ಲಂಘಿಸಿದೆ ಎಂದು ಆರೋಪಿಸಿರುವ ಗೋವಾ ನೀರಾವರಿ ಸಚಿವ ವಿನೋದ್ ಪಾಲೇಕರ್ ಮಹದಾಯಿ ನ್ಯಾಯಮಂಡಳಿ ಆದೇಶ ಆಗುವವರೆಗೂ ಒಂದು ಹನಿ ನೀರು ಬಿಡುವುದಿಲ್ಲ ಎಂದುಗುಡುಗಿದ್ದಾರೆ.

ರಾಜ್ಯದ ಬೆಳಗಾವಿ ಜಿಲಲೆಯ ಖಾನಾಪುರ್ ಸಮೀಪದ ಕಣಕುಂಬಿಗೆ ಶನಿವಾರ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದ ಅವರು ಕರ್ನಾಟಕದ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ಗೋವಾ ಮುಖ್ಯಮಂತ್ರಿ ಮನೋಹರ್ ಪರಿಕ್ಕರ್ ಕರ್ನಾಟಕದ ಬಿಜೆಪಿ ಅಧ್ಯಕ್ಷ ಬಿಎಸ್ ಯಡಿಯೂರಪ್ಪ ಅವರಿಗೆ ಬರೆದ ಪತ್ರ ಸುಪ್ರೀಂಕೋರ್ಟ್ ನ ಆದೇಶವಲ್ಲ ನ್ಯಾಯಧೀಕರಣದಲ್ಲಿ ವಿವಾದ ಇತ್ಯರ್ಥ ಆಗುವವರೆಗೂ ನೀರು ಬಿಡಲು ಸಾಧ್ಯವಿಲ್ಲ. ಕರ್ನಾಟಕ ಸರ್ಕಾರ ಈ ವಿಚಾರದಲ್ಲಿ ರಾಜಕೀಯ ಕೈಬಿಟ್ಟು ಕಾನೂನಾತ್ಮಕ ಪರಿಹಾರಕ್ಕೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಪರಿಕ್ಕರ್ ಯು ಟರ್ನ್, ಮಹಾದಾಯಿ ವಿವಾದದಲ್ಲಿ ಮಾತುಕತೆ ಸಾಧ್ಯವಿಲ್ಲ

We will not give water until tribunal order: Goa minister

ಒಂದೆಡೆ ಕರ್ನಾಟಕ ಸರ್ಕಾರ ನ್ಯಾಯಮಂಡಳಿಯ ಹೊರಗೆ ಸೌಹಾರ್ದಯುತ ಮಾತುಕತೆ ಮೂಲಕ ಮಹದಾಯಿ ವಿವಾದ ಪರಿಹಾರಕ್ಕೆ ಪ್ರಯತ್ನ ನಡೆಸಿದ್ದರೆ ಮತ್ತೊಂದೆಡೆ ಗೋವಾ ಸಚಿವರು ರಾಜ್ಯಕ್ಕೆ ಭೇಟಿ ನೀಡಿ ಈ ರೀತಿ ಹೇಳಿಕೆ ನೀಡಿರುವುದು ಉಭಯ ರಾಜ್ಯಗಳ ನಡುವಣ ಸಂಬಂಧ ಮತ್ತಷ್ಟು ಹದಗೆಡಲು ಕಾರಣವಾಗಿದೆ.

ಇತ್ತ ಕರ್ನಾಟಕದಲ್ಲಿ ಬಿಜೆಪಿ ವಿವಾದವನ್ನು ಬಗೆಹರಿಸುವುದಾಗಿ ಹೇಳುತ್ತಾ ಬಂದಿದ್ದು ಇದೀಗ ಗೋವಾ ಸಚಿವರ ಹೇಳಿಕೆಯಿಂದ ಮತ್ತಷ್ಟು ಮುಜುಗರಕ್ಕೆ ಒಳಗಾಗಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Irrigation minister of Goa Vinod Palyekar asserted that the Goa government from Mahadayi river until tribunal final order. He told reporters after visiting canal work at Kanakumbi in mahadayi basin near Khanapur of Belgaum district

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ