ಪೊಲೀಸರ ಕಾರ್ಯಾಚರಣೆ ವೇಳೆ ಬಾವಿಗೆ ಬಿದ್ದ ಯುವಕ: ಸ್ಥಳದಲ್ಲೇ ಸಾವು

Posted By: ಬೆಳಗಾವಿ ಪ್ರತಿನಿಧಿ
Subscribe to Oneindia Kannada

ಬೆಳಗಾವಿ, ಡಿಸೆಂಬರ್ 2 : ಅಬಕಾರಿ ಪೊಲೀಸ್ ಕಾರ್ಯಾಚರಣೆ ವೇಳೆ ಯುವಕನೊಬ್ಬ ಬಾವಿಗೆ ಬಿದ್ದು ಮೃತಪಟ್ಟಿರುವ ಘಟನೆ ಬೆಳಗಾವಿಯ ಹೊನಗಾ ಗ್ರಾಮದ ಬಳಿ ಶನಿವಾರ ನಡೆದಿದೆ.

ಬೆಳಗಿನ ಜಾವ ಈ ಘಟನೆ ನಡೆದಿದ್ದು ಅಡಿವೆಪ್ಪಾ(24) ಎನ್ನುವವರು ಕಳ್ಳಬಟ್ಟಿ ತೆಗೆದುಕೊಂಡು ಹೋಗುವಾಗ ಅಬಕಾರಿ ಪೊಲೀಸರು ಚೇಸ್ ಮಾಡಿದ್ದಾರೆ. ಸಂದರ್ಭದಲ್ಲಿ ಬಾವಿಗೆ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

Young boy lost his life during Police search Operation

ಅಡಿವೆಪ್ಪಾ ಸಂಬಂಧಿಕರಿಂದ ಅಬಕಾರಿ ಪೊಲೀಸರ ಮೇಲೆ ಕಲ್ಲು ತೂರಾಟ ನಡೆದಿದೆ. ಸ್ಥಳದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿದ್ದು, ಶವಪರೀಕ್ಷೆ ನಡೆಸಲು ಪೋಷಕರು ಅಡ್ಡಿ ಮಾಡಿದ್ದಾರೆ. ಸ್ಥಳಕ್ಕೆ ಕಾಕತಿ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Young boy lost his life during Police search Operation

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
During excise police ride young boy fell into well and lost his life. This leads to huge protest against police in Kakati village on Saturday.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ