ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ವಿದ್ಯುತ್ ಉತ್ಪಾದನೆ ಆರಂಭಿಸಿದ ಬಿಟಿಪಿಎಸ್ 3ನೇ ಘಟಕ

|
Google Oneindia Kannada News

ಬಳ್ಳಾರಿ, ಸೆಪ್ಟೆಂಬರ್ 17 : ಬಳ್ಳಾರಿ ಶಾಖೋತ್ಪನ್ನ ವಿದ್ಯುತ್ ಕೇಂದ್ರದ 3ನೇ ಘಟಕ ಅಧಿಕೃತವಾಗಿ ಉತ್ಪಾದನೆಯನ್ನು ಆರಂಭಿಸಿದೆ. 700 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆ ಮಾಡುವ ಘಟಕವಿದಾಗಿದೆ.

ಕುಡಿತಿನಿಯಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಕೆಪಿಸಿಎಲ್ ವ್ಯವಸ್ಥಾಪಕ ನಿರ್ದೇಶಕ ಜಿ.ಕುಮಾರ್ ನಾಯಕ್ ಅವರು, 'ಬಿಟಿಪಿಎಸ್ ಮೂರನೇ ಘಟಕ ಅಧಿಕೃತವಾಗಿ ಗುರುವಾರ ಮಧ್ಯರಾತ್ರಿಯಿಂದ ಉತ್ಪಾದನೆ ಆರಂಭಿಸಿದೆ' ಎಂದರು ಹೇಳಿದರು.[ವಿದ್ಯುತ್ ಖರೀದಿ ದರ ಬದಲಾವಣೆ ಮಾಡಲ್ಲ : ಡಿಕೆಶಿ]

BTPS

ಈ ಘಟಕ 700 ಮೆಗಾವಾಟ್ ವಿದ್ಯುತ್ ಉತ್ಪಾದನೆ ಮಾಡಲಿದೆ. ಕರ್ನಾಟಕದ ಏಕೈಕ ಅತಿ ಹೆಚ್ಚು ಮೆಗಾವಾಟ್ ವಿದ್ಯುತ್ ಉತ್ಪಾದಿಸುವ ಘಟಕವಿದಾಗಿದೆ. ಈ ವರ್ಷ ವಿದ್ಯುತ್ ಕೊರತೆ ಉಂಟಾಗಿರುವ ಹಿನ್ನಲೆಯಲ್ಲಿ ಈ ಘಟಕ ವಿದ್ಯುತ್ ಅಭಾವದ ಸಮಸ್ಯೆಯನ್ನು ನಿವಾರಿಸುವ ಎಲ್ಲ ಸಾಧ್ಯತೆಗಳಿವೆ.[ಸೋಲಾರ್ ವಿದ್ಯುತ್ ನೀಡುವ ಆಲಮಟ್ಟಿ ಕಾಲುವೆಗಳು]

ಬಿಟಿಪಿಎಸ್‌ಗೆ ಸದ್ಯ ತುಂಗಭದ್ರಾ ಜಲಾಶಯದಿಂದ ನೀರು ಪಡೆಯಲಾಗುತ್ತಿದೆ. ಮುಂದಿನ ದಿನಗಳಲ್ಲಿ ನಾರಾಯಣಪುರ ಜಲಾಶಯದಿಂದ ನೀರು ಪಡೆಯಲು ಸರ್ಕಾರ ಒಪ್ಪಿಗೆ ಕೊಟ್ಟಿದೆ. 3ನೇ ಘಟಕ ನಿರ್ಮಾಣ ಕಾರ್ಯ ವಿಳಂಬವಾಗಿದೆ. ವಿಳಂಬಕ್ಕೆ ಕಾರಣರಾದವರ ವಿರುದ್ಧ ಕ್ರಮ ಕೈಗೊಳ್ಳಲು ನಿರ್ಧರಿಸಲಾಗಿದೆ ಎಂದರು.[1921 ಹುದ್ದೆಗೆ ಅರ್ಜಿ ಆಹ್ವಾನಿಸಿದ KPTCL]

English summary
Third unit of Bellary Thermal Power Plant (BTPS) near Kudithini started production. Unit has capacity to generation of 700 MW.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X