ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಲೋಕಸಭಾ ಉಪಚುನಾವಣೆ: ಬಳ್ಳಾರಿ, ಶಿವಮೊಗ್ಗದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧೆ?

|
Google Oneindia Kannada News

ಬಳ್ಳಾರಿ, ಅಕ್ಟೋಬರ್. 08: ಕಾಂಗ್ರೆಸ್ - ಜೆಡಿಎಸ್ ಮೈತ್ರಿ ಸರ್ಕಾರಕ್ಕೆ ಮಹತ್ವದ ಚುನಾವಣೆ ಆಗಿರುವ ಮೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಅಂತಿಮಗೊಳಿಸಬೇಕಿದೆ. ಅಷ್ಟೇ ಅಲ್ಲ, ಬಳ್ಳಾರಿ ಮತ್ತು ಶಿವಮೊಗ್ಗದಲ್ಲಿ ಮಾತ್ರ ಕಾಂಗ್ರೆಸ್ ಸ್ಪರ್ಧಿಸಲಿದ್ದು, ಮಂಡ್ಯವನ್ನು ಜೆಡಿಎಸ್ ಗೆ ಬಿಟ್ಟುಕೊಡುವ ಸಾಧ್ಯತೆಗಳೇ ಹೆಚ್ಚಿವೆ.

ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?ಶಿವಮೊಗ್ಗ ಉಪ ಚುನಾವಣೆ : ಬಿ.ವೈ.ರಾಘವೇಂದ್ರ ಒಮ್ಮತದ ಅಭ್ಯರ್ಥಿಯೇ?

ಕಾಂಗ್ರೆಸ್ ಮೂಲಗಳ ಪ್ರಕಾರ ಬಳ್ಳಾರಿ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಅಭ್ಯರ್ಥಿಗಳನ್ನು ಅಂತಿಮಗೊಳಿಸಲು ಕಾಂಗ್ರೆಸ್ ಅಕ್ಟೋಬರ್ 09ರ ಮಂಗಳವಾರ ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಆಯಾ ಕ್ಷೇತ್ರವಾರು ಪ್ರತ್ಯೇಕ ಸಭೆಗಳನ್ನು ಏರ್ಪಡಿಸಿದೆ.

 ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ? ಮಂಡ್ಯ ಲೋಕಸಭೆ ಉಪ ಚುನಾವಣೆ : ಜೆಡಿಎಸ್‌ ಜೊತೆ ಮೈತ್ರಿಗೆ ವಿರೋಧ?

ಸಭೆಯಲ್ಲಿ ಮುಖಂಡರು, ಹಾಲಿ ಮತ್ತು ಮಾಜಿ ಶಾಸಕರು, ಸಂಸದರು, ವಿಧಾನಪರಿಷತ್ ಸದಸ್ಯರು, ಜಿಲ್ಲಾ ಅಧ್ಯಕ್ಷರು ಸೇರಿ ವಿವಿಧ ಹಂತದ ನೇತಾರರನ್ನು ಆಹ್ವಾನಿಸಿದೆ.

Congress will only contest in Bellary, Shimoga?

ಶಿವಮೊಗ್ಗ ಕ್ಷೇತ್ರಕ್ಕೆ ಬಿಜೆಪಿ ಅಭ್ಯರ್ಥಿ ಬಿ.ಎಸ್. ರಾಘವೇಂದ್ರ ಅವರ ಸ್ಪರ್ಧೆ ಬಹುತೇಕ ಅಂತಿಮಗೊಂಡಿರುವ ಹಿನ್ನಲೆಯಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಕಾಂಗ್ರೆಸ್ ಚಿಂತನೆ ನಡೆಸಿದೆ. ಆದರೆ, ಶಿವಮೊಗ್ಗ ಬಿಜೆಪಿಗೆ, ಮಂಡ್ಯ ಜೆಡಿಎಸ್ ಗೆ ಬಿಟ್ಟುಕೊಟ್ಟಲ್ಲಿ ಬಳ್ಳಾರಿ ಮಾತ್ರ ಕಾಂಗ್ರೆಸ್ ಸ್ಪರ್ಧೆಗೆ ಸಿದ್ಧವಾಗಬೇಕಿದೆ.

 ಲೋಕಸಭೆ ಚುನಾವಣೆಗೆ ಸ್ಪರ್ಧೆ, ಚಲುವರಾಯಸ್ವಾಮಿ ಹೇಳಿದ್ದೇನು? ಲೋಕಸಭೆ ಚುನಾವಣೆಗೆ ಸ್ಪರ್ಧೆ, ಚಲುವರಾಯಸ್ವಾಮಿ ಹೇಳಿದ್ದೇನು?

ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಅವರ ಹಿಡಿತ ಬಿಗಿಯಾಗಿ ಇರುವ ಹಿನ್ನಲೆಯಲ್ಲಿ ಬಳ್ಳಾರಿ ಕ್ಷೇತ್ರವನ್ನು ಪುನಃ ಪಕ್ಷ ಗಳಿಸಲು ಸಿಕ್ಕಿರುವ ಅಲ್ಪಾವಧಿಯ ಈ ಅವಕಾಶವನ್ನು ಕಾಂಗ್ರೆಸ್ ಸದುಪಯೋಗ ಮಾಡಿಕೊಳ್ಳಬೇಕಿದೆ. ಈ ಹಿನ್ನಲೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಬಳ್ಳಾರಿ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯೇ ಗೆಲುವನ್ನು ಬರೆಯಲಿದೆ ಎಂದೇ ವಿಶ್ಲೇಷಿಸಲಾಗಿದೆ.

English summary
Congress candidates are required to finalize the three Lok Sabha constituencies. According to information Congress will only contest in Bellary and Shimoga.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X