ಬಳ್ಳಾರಿ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಧರ್ಮದಾಯಿ ದತ್ತಿ ತಿದ್ದುಪಡಿ ವಿಧೇಯಕ ಹಿಂಪಡೆಯಿರಿ

By ಜಿ.ಎಂ. ರೋಹಿಣಿ
|
Google Oneindia Kannada News

ಬಳ್ಳಾರಿ, ಡಿ. 23: ಕರ್ನಾಟಕ ಸರ್ಕಾರ ಮಂಡಿಸಲು ಉದ್ದೇಶಿಸಿರುವ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯಿ ದತ್ತಿಗಳ ತಿದ್ದುಪಡಿ ವಿಧೇಯಕವನ್ನು ಹಿಂದಕ್ಕೆ ಪಡೆಯಬೇಕು ಎಂದು ಮಠಾಧೀಶರ ಧರ್ಮ ಪರಿಷತ್ತು ಆಗ್ರಹಿಸಿದೆ.

ಕಮ್ಮರಚೇಡು ಕಲ್ಯಾಣ ಸ್ವಾಮಿಗಳ ನೇತೃತ್ವದಲ್ಲಿ ಒಗ್ಗೂಡಿದ ಬಳ್ಳಾರಿ ಜಿಲ್ಲೆಯ ವಿವಿಧ ಮಠಾಧಿಪತಿಗಳು ಮಂಗಳವಾರ ಜಿಲ್ಲಾಧಿಕಾರಿ ಸಮೀರ್ ಶುಕ್ಲಾ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು. [ಮಠಗಳ ಮೇಲೆ ನಿಯಂತ್ರಣ, ಮಠಾಧೀಶರಿಂದ ಹೋರಾಟ]

matha

ಸಮಾಜದ ಏಳ್ಗೆಯಲ್ಲಿ, ಶಿಕ್ಷಣ, ಸಮಾನತೆ, ಜಾಗೃತಿ ಮತ್ತು ಶಾಂತಿ ಪಾಲನೆಯಲ್ಲಿ ಆಮೂಲಾಗ್ರ ಸೇವೆ ಸಲ್ಲಿಸುತ್ತಿರುವ ಮಠಗಳ ಮೇಲೆ ಕರ್ನಾಟಕ ಕಾಂಗ್ರೆಸ್ ಸರ್ಕಾರ ವಕ್ರದೃಷ್ಟಿ ಬೀರುತ್ತಿದೆ. ಇದು ಹಿಂದೂ ಧರ್ಮಕ್ಕೆ ಒದಗಿರುವ ಅಪಾಯದ ಮುನ್ಸೂಚನೆ ಎಂದು ಮಠಾಧೀಶರು ಆಪಾದಿಸಿದರು. [ಮಠಗಳಿಗೆ ನಿಯಂತ್ರಣ ಬೇಕು : ನಿಡುಮಾಮಿಡಿ ಶ್ರೀ]

ಮಠಗಳ ಮೇಲೆ ಹಿಡಿತ ಸಾಧಿಸಲು ಸರ್ಕಾರ ಸಂಚು ಹೂಡಿದೆ. ಈ ಮೂಲಕ ಧರ್ಮ ಮತ್ತು ಭಕ್ತರ ನಂಬಿಕೆ, ಆಚರಣೆ ಮತ್ತು ಸಂಪ್ರದಾಯಗಳ ಮೇಲೆ ಸವಾರಿ ಮಾಡಲು ಹುನ್ನಾರ ನಡೆಸಿದೆ ಎಂದು ಮನವಿಯಲ್ಲಿ ಆರೋಪಿಸಿದ್ದಾರೆ. [ಮಠಗಳ ಮೇಲೆ ಹಿಡಿತಕ್ಕೆ ಸಜ್ಜಾದ ಸರ್ಕಾರ]

English summary
Many hindu saints of Ballary district met DC Sameer Shukla and asked to withdraw the proposed amendment of Karnataka Hindu Religious Institutions Charitable Endowments bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X