ಬಳ್ಳಾರಿ ಕನಕ ದುರ್ಗಮ್ಮನಿಗೆ ಲಕ್ಷಾಂತರ ರು ಕಾಣಿಕೆ
ಬಳ್ಳಾರಿ, ಫೆ.18: ಕನಕ ದುರುಗಮ್ಮ ದೇವಿ ದೇಗುಲದ ಹುಂಡಿಯಲ್ಲಿ ಭಕ್ತಾದಿಗಳ ಕಾಣಿಕೆ ರೂಪದಲ್ಲಿ ಲಕ್ಷಾಂತರ ರುಪಾಯಿ ಸಂಗ್ರಹವಾಗಿದೆ. ಈ ಋತುವಿನಲ್ಲಿ ಒಂದು ಹುಂಡಿಯಲ್ಲೇ ಈ ದೊಡ್ಡ ಪ್ರಮಾಣದಲ್ಲಿ ಹಣ ಸಂಗ್ರಹವಾಗಿರುವುದು ಇದೆ ಮೊದಲು ಎನ್ನಲಾಗಿದೆ.
ಬಳ್ಳಾರಿ ಜಿಲ್ಲೆ ಸೇರಿದಂತೆ ನೆರೆಯ ಹಲವಾರು ಜಿಲ್ಲೆಗಳ ಭಕ್ತಾದಿಗಳು ನಗರ ದೇವತೆ ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನಕ್ಕೆ ನಡೆದುಕೊಳ್ಳುತ್ತಾರೆ. ಇತ್ತೀಚೆಗೆ ಹಿಂದೂ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರಾದ ಎಸ್.ಪಿ.ಬಿ.ಮಹೇಶ್ ಹಾಗೂ ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಪಿ.ಮಲ್ಲಣ್ಣರವರ ಸಮಕ್ಷಮದಲ್ಲಿ ಒಂದು ಹುಂಡಿಯನ್ನು ತೆರೆದು ಲೆಕ್ಕ ಮಾಡಲಾಯಿತು.
ದೇಗುಲದದ ಒಂದು ಹುಡಿಯಲ್ಲಿ 19,21,210 ರೂ (ಹತ್ತೊಂಬತ್ತು ಲಕ್ಷದ ಇಪ್ಪತ್ತೊಂದು ಸಾವಿರದ ಇನ್ನೂರ ಹತ್ತು ರೂಗಳು) ಸಂಗ್ರಹವಾಗಿತ್ತು ಎಂದು ಶ್ರೀ ಕನಕ ದುರುಗಮ್ಮ ದೇವಿ ದೇವಸ್ಥಾನದ ಕಾರ್ಯನಿರ್ವಾಹಕ ಅಧಿಕಾರಿ ಪಿ.ಮಲ್ಲಣ್ಣರವರು ಹೇಳಿದ್ದಾರೆ.

ರೆಡ್ಡಿಗಳ ಮೆಚ್ಚಿನ ದೈವ ಕನಕ ದುರ್ಗಿ: ಬಳ್ಳಾರಿಯಲ್ಲಿ ವರಲಕ್ಷ್ಮಿ ಪೂಜೆಯ ಸಂಭ್ರಮವನ್ನು ಪರಿಚಯಿಸಿದ ಗಾಲಿ ರೆಡ್ಡಿ ಸೋದರರು, ಗುಂತಕಲ್ ಸಮೀಪದ ಕಸ್ವಾಪುರ ನೆಟ್ಟಿಗಂಟಿ ಆಂಜನೇಯ ಸ್ವಾಮಿ ಅಲ್ಲದೆ ಬಳ್ಳಾರಿಯ ಕನಕ ದುರ್ಗಮ್ಮ ದೇಗುಲಕ್ಕೆ ತುಂಬಾ ನಡೆದುಕೊಳ್ಳುತ್ತಾರೆ. ಗಾಲಿ ರೆಡ್ಡಿ ಸೋದರರಲ್ಲದೆ ಬಿ. ಶ್ರೀರಾಮುಲು, ಶಾಂತಾ ಅವರು ಕೂಡಾ ಈ ದೇಗುಲಕ್ಕೆ ವಿಶೇಷ ಸಂದರ್ಭಗಳಲ್ಲಿ ತಪ್ಪದೇ ಭೇಟಿ ಕೊಡುತ್ತಾರೆ.
ಶರನ್ನವರಾತ್ರಿಯ ಸಂದರ್ಭದಲ್ಲಿ ಈ ದೇಗುಲದಲ್ಲಿ 9 ದಿನಗಳ ಕಾಲ ಬನ್ನಿ ಮಹಾಂಕಾಳಿ ದೇವಿಗೆ ವಿಶೇಷ ಪೂಜೆ, ಪುನಸ್ಕಾರ ನಡೆಯುತ್ತದೆ. ವಿಜಯದಶಮಿಯ ದಿನ ಮಹಿಳೆಯರು ದೇವಿಗೆ ಸೀರೆ, ಬಳೆ, ಉಡಿಗೆ ಅಕ್ಕಿ, ನೈವೇದ್ಯದೊಂದಿಗೆ ತೆರಳಿ ಮಲ್ಲಿಗೆ, ಸೇವಂತಿ, ಕನಕಾಂಬರ ಹೀಗೆ ಬಗೆಬಗೆಯ ಪುಷ್ಪಗಳಿಂದ ಪೂಜೆ ಸಲ್ಲಿಸುತ್ತಾರೆ.
ನಗರದ ಹೃದಯಭಾಗದಲ್ಲಿರುವ ಅಧಿದೇವತೆ ಕನಕ ದುರ್ಗಮ್ಮ ದೇವಸ್ಥಾನದ ಅಭಿವೃದ್ಧಿಗೆ ಸಂಬಂಧಿಸಿದ ಸರಕಾರದಿಂದ ಇದುವರೆವಿಗೂ 7 ಕೋಟಿಗೂ ಅಧಿಕ ಅನುದಾನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತದೆ.
ಅದರೆ, ಇಲ್ಲಿ ಎಲ್ಲವೂ ಗಾಲಿ ರೆಡ್ಡಿ ಕುಟುಂಬ ಸೇರಿದಂತೆ ಖಾಸಗಿಯವರಿಂದ ನಡೆಸಲಾದ ಅಭಿವೃದ್ಧಿ ಕಾಮಗಾರಿಯಾಗಿದೆ. ಮೂಲ ಸೌಕರ್ಯ ಅಭಿವೃದ್ಧಿ ಇನ್ನೂ ಕುಂಠಿತವಾಗಿದೆ ಎಂದು ಜನಾರ್ದನ ರೆಡ್ಡಿ ಅಭಿಮಾನಿ ಬಳಗ ದೂರಿದೆ.
-
ಸರಕು ಖಾಲಿಯಾಯ್ತಾ ಪ್ರೇಮ್, ಇಡೀ ದೇಶದ ಮುಂದೆ ಕನ್ನಡಿಗರು ತಲೆತಗ್ಗಿಸುವಂತೆ ಮಾಡಿದಿರಿ: ಸೆರಗ ಸರ್ಸೆ ಹಾಡಿಗೆ ವಿರೋಧ -
ಟೀಂ ಇಂಡಿಯಾಗೆ ನನ್ನದೊಂದು ಸಲಾಂ, ಐಪಿಎಲ್ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಪಂಜಾಬ್ ಕಿಂಗ್ಸ್ ಕೋಚ್ ರಿಕಿ ಪಾಂಟಿಂಗ್ -
Horoscope March 17; ಈ ರಾಶಿಯವರ ಅದೃಷ್ಟ ಇಂದು ಬದಲಾಗಬಹುದು -
Byadagi Chilli: ಕರ್ನಾಟಕದ ಕೆಂಪು ಚಿನ್ನ ಬ್ಯಾಡಗಿ ಮೆಣಸಿನಕಾಯಿಗೆ ಹೊಸ ಸಂಕಷ್ಟ, ರೈತರು ಕಂಗಾಲು -
Prem: ಅಂದು ಮೇಲುಕೋಟೆ ಹುಡುಗಿ, ಇಂದು ಸೆರಗ ಸರ್ಸೆ: ವಿವಾದಕ್ಕೆ ಕಾರಣವಾದ ಪ್ರೇಮ್ ಸಿನಿಮಾ ಹಾಡುಗಳು -
ಶಿಕ್ಷಕಿಯರು ಹೆರಿಗೆ ರಜೆಗಾಗಿ ಅರ್ಜಿ ಸಲ್ಲಿಸಿದ 15 ದಿನಗಳ ಒಳಗೆ ಮಂಜೂರು; 5 ವರ್ಷ ಇಚ್ಛಿಸಿದ ಶಾಲೆಯಲ್ಲೇ ಕೆಲಸಕ್ಕೆ ಅವಕಾಶ -
SSLC Exam 2026 : ಮಾರ್ಚ್ 18ರಿಂದ ಪರೀಕ್ಷೆ; ವಿದ್ಯಾರ್ಥಿಗಳೇ, ನಿಮ್ಮ ಕೊನೆ ಕ್ಷಣದ ಸಿದ್ಧತೆಗೆ ಹೀಗಿರಲಿ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
SSLC ವಿದ್ಯಾರ್ಥಿಗಳ ಗಮನಕ್ಕೆ: ಮಾರ್ಚ್ 18ಕ್ಕೆ ಪ್ರಥಮ ಭಾಷೆ ಕನ್ನಡ ಪರೀಕ್ಷೆ; ಪಾಸಾಗಲು ಈ ಪ್ರಮುಖ ಅಂಶಗಳನ್ನು ಗಮನಿಸಿ -
ಸಿನಿಮಾ ಕಥೆಗೆ ವಿರುದ್ಧವಾಗಿ ಕುಂಭಮೇಳ ಮೊನಾಲಿಸಾ ಮದುವೆ, 10 ಕೋಟಿ ರೂ. ಸಾಲ ಮಾಡಿದ್ದೇನೆ: ನಿರ್ದೇಶಕ ಸನೋಜ್ ಮಿಶ್ರಾ ಆತಂಕ -
Shame on You: ಸೆರಗ ಸರ್ಸೆ ಡಬಲ್ ಮೀನಿಂಗ್ ಹಾಡಿಗೆ ಕನ್ನಡಿಗರ ಆಕ್ರೋಶ-ಶೋಭಾ ಮಳವಳ್ಳಿ ಬರಹ -
ನಾಳೆಯಿಂದ ರಾಜ್ಯಾದ್ಯಂತ SSLC ಪರೀಕ್ಷೆ: ಟೆನ್ಷನ್ ಬಿಡಿ, ರಿಲಾಕ್ಸ್ ಆಗಿರಿ; ಕೊನೆಯ ಕ್ಷಣದ ಸಿದ್ಧತೆಗೆ ಇಲ್ಲಿವೆ ಟಿಪ್ಸ್












Click it and Unblock the Notifications